ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು 3:1

Notes

No Verse Added

ಕೀರ್ತನೆಗಳು 3:1

1
ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
2
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
3
ಆದರೆ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
4
ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
5
ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
6
ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
7
ಕರ್ತನೇ, ಏಳು; ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.
8
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
×

Alert

×

kannada Letters Keypad References