ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಕೀರ್ತನೆಗಳು 82:1

Notes

No Verse Added

ಕೀರ್ತನೆಗಳು 82:1

1
ದೇವರು ಬಲಶಾಲಿಗಳ ಮಧ್ಯದಲ್ಲಿ ನಿಂತು ದೇವರುಗಳಿಗೆ ನ್ಯಾಯತೀರಿಸುತ್ತಾನೆ.
2
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
3
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.
4
ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
5
ಅವರು ಅರಿಯರು; ಗ್ರಹಿಸುವದಿಲ್ಲ; ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕ್ರಮವಿಲ್ಲದವುಗಳು.
6
ನಾನು--ನೀವು ದೇವರುಗಳು; ನೀವೆಲ್ಲರು ಮಹೋನ್ನತನ ಮಕ್ಕಳು ಎಂದು ಹೇಳಿದೆನು.
7
ಆದಾಗ್ಯೂ ಮನುಷ್ಯರ ಹಾಗೆ ನೀವು ಸಾಯುವಿರಿ; ಪ್ರಧಾನರಲ್ಲಿ ಒಬ್ಬನ ಹಾಗೆ ಬೀಳುವಿರಿ.
8
ದೇವರೇ, ಏಳು; ಭೂಮಿಗೆ ನ್ಯಾಯತೀರಿಸು; ನೀನು ಜನಾಂಗಗಳನ್ನೆಲ್ಲಾ ಬಾಧ್ಯವಾಗಿ ಹೊಂದುವಿ.
×

Alert

×

kannada Letters Keypad References