ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು 28:1

Notes

No Verse Added

ಙ್ಞಾನೋಕ್ತಿಗಳು 28:1

1
ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟರು ಓಡಿಹೋಗುತ್ತಾರೆ; ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.
2
ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ.
3
ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
4
ಕಟ್ಟಳೆಯನ್ನು ತ್ಯಜಿಸುವವನು ದುಷ್ಟರನ್ನು ಹೊಗಳುತ್ತಾನೆ; ಕಟ್ಟಳೆಯನ್ನು ಕೈಕೊಳ್ಳು ವವರು ಅವರೊಂದಿಗೆ ಹೋರಾಡುತ್ತಾರೆ.
5
ನ್ಯಾಯ ತೀರ್ಪನ್ನು ದುಷ್ಟರು ಗ್ರಹಿಸುವದಿಲ್ಲ; ಕರ್ತನನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.
6
ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರ ವಾಗಿರುವವನಿಗಿಂತ ತನ್ನ ಯಥಾರ್ಥತೆಯಲ್ಲಿ ನಡೆ ಯುವ ದರಿದ್ರನು ಶ್ರೇಷ್ಠನು.
7
ಕಟ್ಟಳೆಯನ್ನು ಕೈಕೊಳ್ಳು ವವನು ಜ್ಞಾನಿಯಾದ ಮಗನು; ದುಂದುಗಾರ ಸಂಗ ಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.
8
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
9
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
10
ದುರ್ಮಾರ್ಗದಲ್ಲಿ ನೀತಿವಂತರನ್ನು ದಾರಿತಪ್ಪಿಸು ವವನು ತಾನೇ ತನ್ನ ಸ್ವಂತ ಕುಣಿಯೊಳಕ್ಕೆ ಬೀಳುವನು; ಯಥಾರ್ಥವಂತರಿಗಾದರೋ ಒಳ್ಳೆಯವುಗಳು ಸೊತ್ತಾ ಗುವವು.
11
ತನ್ನ ಸ್ವಂತ ಅಭಿಪ್ರಾಯದಲ್ಲಿ ಐಶ್ವರ್ಯ ವಂತನು ಜ್ಞಾನಿಯಾಗಿದ್ದಾನೆ; ವಿವೇಕಿಯಾದ ಬಡವನು ಅವನನ್ನು ಪರೀಕ್ಷಿಸುತ್ತಾನೆ.
12
ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
13
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
14
ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.
15
ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.
16
ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.
17
ಒಬ್ಬ ಮನುಷ್ಯನ ರಕ್ತಕ್ಕೆ ಬಲಾತ್ಕಾರ ಮಾಡುವವನು ಕುಣಿಗೆ ಹಾರುವನು; ಅವನನ್ನು ಯಾವನೂ ತಡೆಯದಿರಲಿ.
18
ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
19
ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
20
ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
21
ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹಮಾಡುವನು.
22
ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
23
ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.
24
ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.
25
ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.
26
ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.
27
ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.
28
ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.
×

Alert

×

kannada Letters Keypad References