ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಮಲಾಕಿಯ

ಮಲಾಕಿಯ ಅಧ್ಯಾಯ 1

1 ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ. 2 ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು. 3 ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು. 4 ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು. 5 ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ. 6 ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. 7 ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. 8 ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ? 9 ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ? 10 ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ. 11 ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 12 ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. 13 ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ. 14 ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
1. ಇಸ್ರಾಯೇಲಿಗೆ ಮಲಾಕಿಯಿಂದ ಉಂಟಾದ ಕರ್ತನ ವಾಕ್ಯದ ದೈವೋಕ್ತಿ. 2. ನಿಮ್ಮನ್ನು ಪ್ರೀತಿಮಾಡಿದ್ದೇನೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ ನೀವು--ಯಾವದರಲ್ಲಿ ನೀನು ನಮ್ಮನ್ನು ಪ್ರೀತಿಮಾಡಿದ್ದೀ ಎಂದು ಹೇಳುತ್ತೀರಿ. ಕರ್ತನು ಅನು ್ನತ್ತಾನೆ--ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದಾಗ್ಯೂ ನಾನು ಯಾಕೋಬನನ್ನು ಪ್ರೀತಿ ಮಾಡಿ ದೆನು. 3. ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು. 4. ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು. 5. ನಿಮ್ಮ ಕಣ್ಣುಗಳು ನೋಡುವವು; ಇಸ್ರಾಯೇಲಿನ ಮೇರೆ ಯಿಂದ ಕರ್ತನು ಘನಹೊಂದುವನು ಎಂದು ನೀವು ಹೇಳುವಿರಿ. 6. ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. 7. ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. 8. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ? 9. ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ? 10. ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ. 11. ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 12. ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. 13. ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ. 14. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  • ಮಲಾಕಿಯ ಅಧ್ಯಾಯ 1  
  • ಮಲಾಕಿಯ ಅಧ್ಯಾಯ 2  
  • ಮಲಾಕಿಯ ಅಧ್ಯಾಯ 3  
  • ಮಲಾಕಿಯ ಅಧ್ಯಾಯ 4  
×

Alert

×

Kannada Letters Keypad References