ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ವಿಮೋಚನಕಾಂಡ

ವಿಮೋಚನಕಾಂಡ ಅಧ್ಯಾಯ 11

1 ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು. 2 ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು. 3 ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು. 4 ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು. 5 ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು. 6 ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ. 7 ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ. 8 ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು. 9 ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು. 10 ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
1 ಆದರೆ ಕರ್ತನು ಮೋಶೆಗೆ--ಇನ್ನೊಂದು ಬಾಧೆಯನ್ನು ಫರೋಹನ ಮೇಲೆಯೂ ಐಗುಪ್ತದ ಮೇಲೆಯೂ ಬರಮಾಡುವೆನು. ಅದಾದ ಮೇಲೆ ಅವನು ನಿಮ್ಮನ್ನು ಕಳುಹಿಸುವನು; ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲವನ್ನೂ ಕಳುಹಿಸಿಬಿಡುವನು. .::. 2 ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು. .::. 3 ಇದಲ್ಲದೆ ಕರ್ತನು ಐಗುಪ್ತ್ಯರ ದೃಷ್ಟಿಯಲ್ಲಿ ಜನರಿಗೆ ದಯೆದೊರಕುವಂತೆ ಮಾಡಿದನು. ಆ ಮನುಷ್ಯನಾದ ಮೋಶೆಯು ಐಗುಪ್ತದೇಶದಲ್ಲಿಯೂ ಫರೋಹನ ಸೇವಕರ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹು ದೊಡ್ಡವನಾಗಿದ್ದನು. .::. 4 ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು. .::. 5 ಆಗ ಐಗುಪ್ತದೇಶದ ಚೊಚ್ಚಲ ಮಕ್ಕಳು ಅಂದರೆ ಸಿಂಹಾ ಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಇರುವ ದಾಸಿಯ ಚೊಚ್ಚಲ ಮಗನ ವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವು ಸಾಯುವವು. .::. 6 ಐಗುಪ್ತದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವದು. ಇಂಥದ್ದು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವದಿಲ್ಲ. .::. 7 ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ. .::. 8 ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನಗೆ--ನೀನೂ ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ ಹೊರಗೆ ಹೋಗಿರಿ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು. .::. 9 ಆದರೆ ಕರ್ತನು ಮೋಶೆಗೆ--ನನ್ನ ಅದ್ಭುತಗಳು ಐಗುಪ್ತದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ ಅಂದನು. .::. 10 ಈ ಅದ್ಭುತ ಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಕರ್ತನು ಫರೋಹನ ಹೃದಯ ವನ್ನು ಕಠಿಣಮಾಡಿದ್ದರಿಂದ ಅವನು ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
  • ವಿಮೋಚನಕಾಂಡ ಅಧ್ಯಾಯ 1  
  • ವಿಮೋಚನಕಾಂಡ ಅಧ್ಯಾಯ 2  
  • ವಿಮೋಚನಕಾಂಡ ಅಧ್ಯಾಯ 3  
  • ವಿಮೋಚನಕಾಂಡ ಅಧ್ಯಾಯ 4  
  • ವಿಮೋಚನಕಾಂಡ ಅಧ್ಯಾಯ 5  
  • ವಿಮೋಚನಕಾಂಡ ಅಧ್ಯಾಯ 6  
  • ವಿಮೋಚನಕಾಂಡ ಅಧ್ಯಾಯ 7  
  • ವಿಮೋಚನಕಾಂಡ ಅಧ್ಯಾಯ 8  
  • ವಿಮೋಚನಕಾಂಡ ಅಧ್ಯಾಯ 9  
  • ವಿಮೋಚನಕಾಂಡ ಅಧ್ಯಾಯ 10  
  • ವಿಮೋಚನಕಾಂಡ ಅಧ್ಯಾಯ 11  
  • ವಿಮೋಚನಕಾಂಡ ಅಧ್ಯಾಯ 12  
  • ವಿಮೋಚನಕಾಂಡ ಅಧ್ಯಾಯ 13  
  • ವಿಮೋಚನಕಾಂಡ ಅಧ್ಯಾಯ 14  
  • ವಿಮೋಚನಕಾಂಡ ಅಧ್ಯಾಯ 15  
  • ವಿಮೋಚನಕಾಂಡ ಅಧ್ಯಾಯ 16  
  • ವಿಮೋಚನಕಾಂಡ ಅಧ್ಯಾಯ 17  
  • ವಿಮೋಚನಕಾಂಡ ಅಧ್ಯಾಯ 18  
  • ವಿಮೋಚನಕಾಂಡ ಅಧ್ಯಾಯ 19  
  • ವಿಮೋಚನಕಾಂಡ ಅಧ್ಯಾಯ 20  
  • ವಿಮೋಚನಕಾಂಡ ಅಧ್ಯಾಯ 21  
  • ವಿಮೋಚನಕಾಂಡ ಅಧ್ಯಾಯ 22  
  • ವಿಮೋಚನಕಾಂಡ ಅಧ್ಯಾಯ 23  
  • ವಿಮೋಚನಕಾಂಡ ಅಧ್ಯಾಯ 24  
  • ವಿಮೋಚನಕಾಂಡ ಅಧ್ಯಾಯ 25  
  • ವಿಮೋಚನಕಾಂಡ ಅಧ್ಯಾಯ 26  
  • ವಿಮೋಚನಕಾಂಡ ಅಧ್ಯಾಯ 27  
  • ವಿಮೋಚನಕಾಂಡ ಅಧ್ಯಾಯ 28  
  • ವಿಮೋಚನಕಾಂಡ ಅಧ್ಯಾಯ 29  
  • ವಿಮೋಚನಕಾಂಡ ಅಧ್ಯಾಯ 30  
  • ವಿಮೋಚನಕಾಂಡ ಅಧ್ಯಾಯ 31  
  • ವಿಮೋಚನಕಾಂಡ ಅಧ್ಯಾಯ 32  
  • ವಿಮೋಚನಕಾಂಡ ಅಧ್ಯಾಯ 33  
  • ವಿಮೋಚನಕಾಂಡ ಅಧ್ಯಾಯ 34  
  • ವಿಮೋಚನಕಾಂಡ ಅಧ್ಯಾಯ 35  
  • ವಿಮೋಚನಕಾಂಡ ಅಧ್ಯಾಯ 36  
  • ವಿಮೋಚನಕಾಂಡ ಅಧ್ಯಾಯ 37  
  • ವಿಮೋಚನಕಾಂಡ ಅಧ್ಯಾಯ 38  
  • ವಿಮೋಚನಕಾಂಡ ಅಧ್ಯಾಯ 39  
  • ವಿಮೋಚನಕಾಂಡ ಅಧ್ಯಾಯ 40  
×

Alert

×

Kannada Letters Keypad References