ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಹಾನನು

ಯೋಹಾನನು ಅಧ್ಯಾಯ 20

1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು. 2 ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು. 3 ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು. 4 ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು. 5 ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ. 6 ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ 7 ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು. 8 ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು. 9 ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ. 10 ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು. 11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ 12 ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು. 13 ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು. 14 ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ. 15 ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ 16 ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು. 17 ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು 18 ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು. 19 ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. 20 ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. 21 ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. 22 ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; 23 ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು. 24 ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. 25 ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ 26 ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. 27 ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. 28 ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. 29 ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು. 30 ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ. 31 ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
1 ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು. .::. 2 ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಆ ಬೇರೆ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ--ಕರ್ತನನ್ನು ಅವರು ಸಮಾಧಿ ಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ ಅಂದಳು. .::. 3 ಆದದರಿಂದ ಪೇತ್ರನೂ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಗೆ ಬಂದರು. .::. 4 ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು. .::. 5 ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ. .::. 6 ಆಮೇಲೆ ಸೀಮೋನ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ ನಾರುಬಟ್ಟೆಗಳು ಬಿದ್ದಿರುವದನ್ನೂ .::. 7 ಆತನ ತಲೆಯ ಮೇಲಿದ್ದ ಕೈವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೆ ಇರುವದನ್ನೂ ಕಂಡನು. .::. 8 ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು. .::. 9 ಯಾಕಂದರೆ ಆತನು ಸತ್ತವರೊಳಗಿಂದ ತಿರಿಗಿ ಎದ್ದೇಳುವದು ಅಗತ್ಯವೆಂಬ ಬರಹವು ಅವರಿಗೆ ಇನ್ನೂ ತಿಳಿದಿರಲಿಲ್ಲ. .::. 10 ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು. .::. 11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ .::. 12 ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು. .::. 13 ಅವರು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆಯು ಅವರಿಗೆ--ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಅವರು ಎಲ್ಲೀ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು. .::. 14 ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ. .::. 15 ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ .::. 16 ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು. .::. 17 ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು .::. 18 ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು. .::. 19 ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು. .::. 20 ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು. .::. 21 ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. .::. 22 ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; .::. 23 ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು. .::. 24 ಆದರೆ ಯೇಸು ಬಂದಾಗ ಹನ್ನೆರಡು ಮಂದಿ ಯಲ್ಲಿ ಒಬ್ಬನಾದ ದಿದುಮನೆಂದು ಕರೆಯಲ್ಪಟ್ಟ ತೋಮನು ಅವರ ಸಂಗಡ ಇರಲಿಲ್ಲ. .::. 25 ಆದದರಿಂದ ಬೇರೆ ಶಿಷ್ಯರು ಅವನಿಗೆ--ನಾವು ಕರ್ತನನ್ನು ನೋಡಿ ದ್ದೇವೆ ಎಂದು ಹೇಳಿದರು. ಆದರೆ ಅವನು ಅವ ರಿಗೆ--ನಾನು ಆತನ ಕೈಗಳಲ್ಲಿ ಮೊಳೆಗಳ ಗುರುತನ್ನು ನೋಡಿ ಆ ಮೊಳೆಗಳ ಗುರುತಿನಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಾನು ನ .::. 26 ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು. .::. 27 ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಈ ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು. .::. 28 ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು. .::. 29 ಯೇಸು ಅವನಿಗೆ--ತೋಮನೇ, ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ; ನೋಡದೆ ನಂಬಿದವರು ಧನ್ಯರು ಅಂದನು. .::. 30 ಯೇಸು ಇನ್ನು ಬೇರೆ ಎಷ್ಟೋ ಸೂಚಕ ಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದ್ದು ನಿಜವೇ. ಆದರೂ ಅವುಗಳನ್ನು ಈ ಪುಸ್ತಕದಲ್ಲಿ ಬರೆದಿರುವದಿಲ್ಲ. .::. 31 ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
  • ಯೋಹಾನನು ಅಧ್ಯಾಯ 1  
  • ಯೋಹಾನನು ಅಧ್ಯಾಯ 2  
  • ಯೋಹಾನನು ಅಧ್ಯಾಯ 3  
  • ಯೋಹಾನನು ಅಧ್ಯಾಯ 4  
  • ಯೋಹಾನನು ಅಧ್ಯಾಯ 5  
  • ಯೋಹಾನನು ಅಧ್ಯಾಯ 6  
  • ಯೋಹಾನನು ಅಧ್ಯಾಯ 7  
  • ಯೋಹಾನನು ಅಧ್ಯಾಯ 8  
  • ಯೋಹಾನನು ಅಧ್ಯಾಯ 9  
  • ಯೋಹಾನನು ಅಧ್ಯಾಯ 10  
  • ಯೋಹಾನನು ಅಧ್ಯಾಯ 11  
  • ಯೋಹಾನನು ಅಧ್ಯಾಯ 12  
  • ಯೋಹಾನನು ಅಧ್ಯಾಯ 13  
  • ಯೋಹಾನನು ಅಧ್ಯಾಯ 14  
  • ಯೋಹಾನನು ಅಧ್ಯಾಯ 15  
  • ಯೋಹಾನನು ಅಧ್ಯಾಯ 16  
  • ಯೋಹಾನನು ಅಧ್ಯಾಯ 17  
  • ಯೋಹಾನನು ಅಧ್ಯಾಯ 18  
  • ಯೋಹಾನನು ಅಧ್ಯಾಯ 19  
  • ಯೋಹಾನನು ಅಧ್ಯಾಯ 20  
  • ಯೋಹಾನನು ಅಧ್ಯಾಯ 21  
×

Alert

×

Kannada Letters Keypad References