ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋನ

ಯೋನ ಅಧ್ಯಾಯ 1

1 ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು. 2 ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು. 3 ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು. 4 ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು. 5 ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು. 6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು. 7 ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು. 8 ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ, 9 ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು. 10 ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು. 11 ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು. 12 ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು. 13 ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು. 14 ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು. 15 ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು. 16 ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು. 17 ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
1 ಕರ್ತನ ವಾಕ್ಯವು ಅಮಿತ್ತೈಯನ ಮಗನಾದ ಯೋನನಿಗೆ ಉಂಟಾಯಿತು. .::. 2 ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು. .::. 3 ಆದರೆ ಯೋನನು ಕರ್ತನ ಸಮ್ಮುಖದಿಂದ ತಾರ್ಷೀಷಿಗೆ ಓಡಿ ಹೋಗುವದಕ್ಕೆ ಎದ್ದು ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು ಅದರ ಪ್ರಯಾಣದ ತೆರವನ್ನು ಕೊಟ್ಟು ಕರ್ತನ ಸಮ್ಮುಖದಿಂದ ಅವರ ಸಂಗಡ ತಾರ್ಷಿಷಿಗೆ ಹೋಗುವದಕ್ಕೆ ಅದನ್ನು ಹತ್ತಿದನು. .::. 4 ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು. .::. 5 ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು. .::. 6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು. .::. 7 ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು. .::. 8 ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ, .::. 9 ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು. .::. 10 ಆಗ ಆ ಮನುಷ್ಯರು ಬಹಳ ಭಯಪಟ್ಟು--ಇದನ್ನು ಯಾಕೆ ಮಾಡಿದ್ದೀ ಎಂದು ಅವನಿಗೆ ಹೇಳಿದರು, ಕರ್ತನ ಸಮ್ಮುಖದಿಂದ ಓಡಿ ಹೋಗುತ್ತಾನೆಂದು ಆ ಮನುಷ್ಯರಿಗೆ ತಿಳಿದಿತ್ತು; ಅವನು ಅವರಿಗೆ ಹೇಳಿದ್ದನು. .::. 11 ಆಗ ಅವರು ಅವನಿಗೆ--ಸಮುದ್ರವು ನಮಗೆ ಶಾಂತವಾಗುವ ಹಾಗೆ ನಿನಗೆ ಏನು ಮಾಡಬೇಕು? ಯಾಕಂದರೆ ಸಮುದ್ರವು ಹೆಚ್ಚಾಗಿ ಉಬ್ಬುತ್ತಾ ಬರುತ್ತಿದೆ ಅಂದರು. .::. 12 ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು. .::. 13 ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು. .::. 14 ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು. .::. 15 ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು. .::. 16 ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು. .::. 17 ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
  • ಯೋನ ಅಧ್ಯಾಯ 1  
  • ಯೋನ ಅಧ್ಯಾಯ 2  
  • ಯೋನ ಅಧ್ಯಾಯ 3  
  • ಯೋನ ಅಧ್ಯಾಯ 4  
×

Alert

×

Kannada Letters Keypad References