ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಹೆಜ್ಕೇಲನು

ಯೆಹೆಜ್ಕೇಲನು ಅಧ್ಯಾಯ 24

1 ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ 2 ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ. 3 ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ. 4 ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ; 5 ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. 6 ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. 7 ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; 8 ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; 9 ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. 10 ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. 11 ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. 12 ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; 13 ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. 14 ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. 15 ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 16 ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. 17 ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ. 18 ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು. 19 ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು. 20 ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 21 ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. 22 ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು. 23 ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ. 24 ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. 25 ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ 26 ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ? 27 ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
1. ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ 2. ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ. 3. ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ. 4. ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ; 5. ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. 6. ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. 7. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; 8. ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; 9. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. 10. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. 11. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. 12. ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; 13. ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. 14. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. 15. ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 16. ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. 17. ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ. 18. ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು. 19. ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು. 20. ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- 21. ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. 22. ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು. 23. ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ. 24. ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. 25. ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ 26. ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ? 27. ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
  • ಯೆಹೆಜ್ಕೇಲನು ಅಧ್ಯಾಯ 1  
  • ಯೆಹೆಜ್ಕೇಲನು ಅಧ್ಯಾಯ 2  
  • ಯೆಹೆಜ್ಕೇಲನು ಅಧ್ಯಾಯ 3  
  • ಯೆಹೆಜ್ಕೇಲನು ಅಧ್ಯಾಯ 4  
  • ಯೆಹೆಜ್ಕೇಲನು ಅಧ್ಯಾಯ 5  
  • ಯೆಹೆಜ್ಕೇಲನು ಅಧ್ಯಾಯ 6  
  • ಯೆಹೆಜ್ಕೇಲನು ಅಧ್ಯಾಯ 7  
  • ಯೆಹೆಜ್ಕೇಲನು ಅಧ್ಯಾಯ 8  
  • ಯೆಹೆಜ್ಕೇಲನು ಅಧ್ಯಾಯ 9  
  • ಯೆಹೆಜ್ಕೇಲನು ಅಧ್ಯಾಯ 10  
  • ಯೆಹೆಜ್ಕೇಲನು ಅಧ್ಯಾಯ 11  
  • ಯೆಹೆಜ್ಕೇಲನು ಅಧ್ಯಾಯ 12  
  • ಯೆಹೆಜ್ಕೇಲನು ಅಧ್ಯಾಯ 13  
  • ಯೆಹೆಜ್ಕೇಲನು ಅಧ್ಯಾಯ 14  
  • ಯೆಹೆಜ್ಕೇಲನು ಅಧ್ಯಾಯ 15  
  • ಯೆಹೆಜ್ಕೇಲನು ಅಧ್ಯಾಯ 16  
  • ಯೆಹೆಜ್ಕೇಲನು ಅಧ್ಯಾಯ 17  
  • ಯೆಹೆಜ್ಕೇಲನು ಅಧ್ಯಾಯ 18  
  • ಯೆಹೆಜ್ಕೇಲನು ಅಧ್ಯಾಯ 19  
  • ಯೆಹೆಜ್ಕೇಲನು ಅಧ್ಯಾಯ 20  
  • ಯೆಹೆಜ್ಕೇಲನು ಅಧ್ಯಾಯ 21  
  • ಯೆಹೆಜ್ಕೇಲನು ಅಧ್ಯಾಯ 22  
  • ಯೆಹೆಜ್ಕೇಲನು ಅಧ್ಯಾಯ 23  
  • ಯೆಹೆಜ್ಕೇಲನು ಅಧ್ಯಾಯ 24  
  • ಯೆಹೆಜ್ಕೇಲನು ಅಧ್ಯಾಯ 25  
  • ಯೆಹೆಜ್ಕೇಲನು ಅಧ್ಯಾಯ 26  
  • ಯೆಹೆಜ್ಕೇಲನು ಅಧ್ಯಾಯ 27  
  • ಯೆಹೆಜ್ಕೇಲನು ಅಧ್ಯಾಯ 28  
  • ಯೆಹೆಜ್ಕೇಲನು ಅಧ್ಯಾಯ 29  
  • ಯೆಹೆಜ್ಕೇಲನು ಅಧ್ಯಾಯ 30  
  • ಯೆಹೆಜ್ಕೇಲನು ಅಧ್ಯಾಯ 31  
  • ಯೆಹೆಜ್ಕೇಲನು ಅಧ್ಯಾಯ 32  
  • ಯೆಹೆಜ್ಕೇಲನು ಅಧ್ಯಾಯ 33  
  • ಯೆಹೆಜ್ಕೇಲನು ಅಧ್ಯಾಯ 34  
  • ಯೆಹೆಜ್ಕೇಲನು ಅಧ್ಯಾಯ 35  
  • ಯೆಹೆಜ್ಕೇಲನು ಅಧ್ಯಾಯ 36  
  • ಯೆಹೆಜ್ಕೇಲನು ಅಧ್ಯಾಯ 37  
  • ಯೆಹೆಜ್ಕೇಲನು ಅಧ್ಯಾಯ 38  
  • ಯೆಹೆಜ್ಕೇಲನು ಅಧ್ಯಾಯ 39  
  • ಯೆಹೆಜ್ಕೇಲನು ಅಧ್ಯಾಯ 40  
  • ಯೆಹೆಜ್ಕೇಲನು ಅಧ್ಯಾಯ 41  
  • ಯೆಹೆಜ್ಕೇಲನು ಅಧ್ಯಾಯ 42  
  • ಯೆಹೆಜ್ಕೇಲನು ಅಧ್ಯಾಯ 43  
  • ಯೆಹೆಜ್ಕೇಲನು ಅಧ್ಯಾಯ 44  
  • ಯೆಹೆಜ್ಕೇಲನು ಅಧ್ಯಾಯ 45  
  • ಯೆಹೆಜ್ಕೇಲನು ಅಧ್ಯಾಯ 46  
  • ಯೆಹೆಜ್ಕೇಲನು ಅಧ್ಯಾಯ 47  
  • ಯೆಹೆಜ್ಕೇಲನು ಅಧ್ಯಾಯ 48  
×

Alert

×

Kannada Letters Keypad References