ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 46

1 ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. 2 ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು. 3 ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ-- 4 ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು. 5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ? 6 ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. 7 ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು. 8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ; 9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. 10 ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. 11 ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು. 12 ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ; 13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
1 ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. .::. 2 ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು. .::. 3 ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ-- .::. 4 ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು. .::. 5 ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ? .::. 6 ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು. .::. 7 ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು. .::. 8 ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ; .::. 9 ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ. .::. 10 ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. .::. 11 ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು. .::. 12 ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ; .::. 13 ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References