ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ವಿಮೋಚನಕಾಂಡ

ವಿಮೋಚನಕಾಂಡ ಅಧ್ಯಾಯ 11

ಚೊಚ್ಚಲು ಮಕ್ಕಳ ಮರಣ 1 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು. 2 ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.’ 3 ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು. 4 ಮೋಶೆಯು ಜನರಿಗೆ, “ಯೆಹೋವನು ಹೀಗೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು. 5 ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ. 6 ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ. 7 ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ. 8 ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು. 9 ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು. 10 ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.
ಚೊಚ್ಚಲು ಮಕ್ಕಳ ಮರಣ 1 ಬಳಿಕ ಯೆಹೋವನು ಮೋಶೆಗೆ, “ನಾನು ಫರೋಹನಿಗೂ ಈಜಿಪ್ಟಿಗೂ ಮತ್ತೊಂದು ವಿಪತ್ತನ್ನು ಬರಮಾಡುತ್ತೇನೆ. ಆಗ ಅವನು ನಿಮ್ಮನ್ನು ಈಜಿಪ್ಟಿನಿಂದ ಕಳುಹಿಸುವನು; ನಿಮ್ಮನ್ನು ಬಲವಂತದಿಂದ ಕಳುಹಿಸಿಬಿಡುವನು. .::. 2 ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.’ .::. 3 ಈಜಿಪ್ಟಿನವರು ನಿಮಗೆ ದಯೆತೋರುವಂತೆ ಯೆಹೋವನು ಅವರನ್ನು ಪ್ರೇರೇಪಿಸುವನು. ಈಜಿಪ್ಟಿನ ಜನರು ಮತ್ತು ಫರೋಹನ ಅಧಿಕಾರಿಗಳು ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡಿದ್ದಾರೆ” ಎಂದು ಹೇಳಿದನು. .::. 4 ಮೋಶೆಯು ಜನರಿಗೆ, “ಯೆಹೋವನು ಹೀಗೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು. .::. 5 ಈಜಿಪ್ಟಿನ ಚೊಚ್ಚಲು ಮಕ್ಕಳೆಲ್ಲರೂ ಅಂದರೆ ಫರೋಹನ ಚೊಚ್ಚಲು ಮಗನಿಂದಿಡಿದು ಧಾನ್ಯವನ್ನು ಬೀಸುವ ಸೇವಕಿಯ ಚೊಚ್ಚಲು ಮಗನವರೆಗೂ ಇರುವ ಚೊಚ್ಚಲು ಮಕ್ಕಳೆಲ್ಲರೂ ಸಾಯುವರು. ಇದಲ್ಲದೆ ಚೊಚ್ಚಲು ಪಶುಗಳೂ ಸಾಯುತ್ತವೆ. .::. 6 ಈಜಿಪ್ಟಿನಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು, ಅಂಥ ಗೋಳಾಟ ಈವರೆಗೂ ಆಗಿಲ್ಲ; ಮುಂದೆಯೂ ಆಗುವುದಿಲ್ಲ. .::. 7 ಆದರೆ ಇಸ್ರೇಲರಲ್ಲಿ ಯಾರಿಗೂ ಕೇಡಾಗುವುದಿಲ್ಲ. ಒಂದು ನಾಯಿಯೂ ಅವರಿಗೆ ಬೊಗಳುವುದಿಲ್ಲ. ಇಸ್ರೇಲಿನ ಜನರಿಗಾಗಲಿ ಪಶುಗಳಿಗಾಗಲಿ ಕೇಡಾಗುವುದಿಲ್ಲ. ಇಸ್ರೇಲರಿಗೂ ಮತ್ತು ಈಜಿಪ್ಟಿನವರಿಗೂ ನಾನು ವ್ಯತ್ಯಾಸ ಮಾಡಿದ್ದೇನೆಂದು ಆಗ ನೀವು ತಿಳಿದುಕೊಳ್ಳುವಿರಿ. .::. 8 ಆಗ ನಿಮ್ಮ ಈ ಗುಲಾಮರೆಲ್ಲರೂ (ಈಜಿಪ್ಟಿನ ಅಧಿಕಾರಿಗಳು) ನನ್ನ ಬಳಿಗೆ ಬಂದು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸುವರು.’ ಅವರು, ‘ಹೊರಟುಹೋಗಿ, ನಿಮ್ಮ ಜನರೆಲ್ಲರನ್ನು ನಿಮ್ಮೊಂದಿಗೆ ಕರೆದುಕೊಂಡು ಹೋಗಿರಿ’ ಎಂದು ಹೇಳುವರು. ಆಗ ನಾನು ಫರೋಹನ ಬಳಿಯಿಂದ ಬಿಟ್ಟುಹೋಗುವೆನು” ಅಂದನು. .::. 9 ಬಳಿಕ ಯೆಹೋವನು ಮೋಶೆಗೆ, “ಫರೋಹನು ನಿನ್ನ ಮಾತಿಗೆ ಕಿವಿಗೊಡುವುದಿಲ್ಲ. ಯಾಕೆಂದರೆ ನಾನು ನನ್ನ ಮಹಾಶಕ್ತಿಯನ್ನು ಈಜಿಪ್ಟಿನಲ್ಲಿ ತೋರಿಸಬೇಕಾಗಿದೆ” ಅಂದನು. .::. 10 ಯೆಹೋವನು ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಫರೋಹನು ಇಸ್ರೇಲರನ್ನು ಕಳುಹಿಸಿಕೊಡಲಿಲ್ಲ; ಆದ್ದರಿಂದ ಮೋಶೆ ಆರೋನರು ಈ ಅದ್ಭುತಕಾರ್ಯಗಳನ್ನೆಲ್ಲಾ ಮಾಡಿದರು.
  • ವಿಮೋಚನಕಾಂಡ ಅಧ್ಯಾಯ 1  
  • ವಿಮೋಚನಕಾಂಡ ಅಧ್ಯಾಯ 2  
  • ವಿಮೋಚನಕಾಂಡ ಅಧ್ಯಾಯ 3  
  • ವಿಮೋಚನಕಾಂಡ ಅಧ್ಯಾಯ 4  
  • ವಿಮೋಚನಕಾಂಡ ಅಧ್ಯಾಯ 5  
  • ವಿಮೋಚನಕಾಂಡ ಅಧ್ಯಾಯ 6  
  • ವಿಮೋಚನಕಾಂಡ ಅಧ್ಯಾಯ 7  
  • ವಿಮೋಚನಕಾಂಡ ಅಧ್ಯಾಯ 8  
  • ವಿಮೋಚನಕಾಂಡ ಅಧ್ಯಾಯ 9  
  • ವಿಮೋಚನಕಾಂಡ ಅಧ್ಯಾಯ 10  
  • ವಿಮೋಚನಕಾಂಡ ಅಧ್ಯಾಯ 11  
  • ವಿಮೋಚನಕಾಂಡ ಅಧ್ಯಾಯ 12  
  • ವಿಮೋಚನಕಾಂಡ ಅಧ್ಯಾಯ 13  
  • ವಿಮೋಚನಕಾಂಡ ಅಧ್ಯಾಯ 14  
  • ವಿಮೋಚನಕಾಂಡ ಅಧ್ಯಾಯ 15  
  • ವಿಮೋಚನಕಾಂಡ ಅಧ್ಯಾಯ 16  
  • ವಿಮೋಚನಕಾಂಡ ಅಧ್ಯಾಯ 17  
  • ವಿಮೋಚನಕಾಂಡ ಅಧ್ಯಾಯ 18  
  • ವಿಮೋಚನಕಾಂಡ ಅಧ್ಯಾಯ 19  
  • ವಿಮೋಚನಕಾಂಡ ಅಧ್ಯಾಯ 20  
  • ವಿಮೋಚನಕಾಂಡ ಅಧ್ಯಾಯ 21  
  • ವಿಮೋಚನಕಾಂಡ ಅಧ್ಯಾಯ 22  
  • ವಿಮೋಚನಕಾಂಡ ಅಧ್ಯಾಯ 23  
  • ವಿಮೋಚನಕಾಂಡ ಅಧ್ಯಾಯ 24  
  • ವಿಮೋಚನಕಾಂಡ ಅಧ್ಯಾಯ 25  
  • ವಿಮೋಚನಕಾಂಡ ಅಧ್ಯಾಯ 26  
  • ವಿಮೋಚನಕಾಂಡ ಅಧ್ಯಾಯ 27  
  • ವಿಮೋಚನಕಾಂಡ ಅಧ್ಯಾಯ 28  
  • ವಿಮೋಚನಕಾಂಡ ಅಧ್ಯಾಯ 29  
  • ವಿಮೋಚನಕಾಂಡ ಅಧ್ಯಾಯ 30  
  • ವಿಮೋಚನಕಾಂಡ ಅಧ್ಯಾಯ 31  
  • ವಿಮೋಚನಕಾಂಡ ಅಧ್ಯಾಯ 32  
  • ವಿಮೋಚನಕಾಂಡ ಅಧ್ಯಾಯ 33  
  • ವಿಮೋಚನಕಾಂಡ ಅಧ್ಯಾಯ 34  
  • ವಿಮೋಚನಕಾಂಡ ಅಧ್ಯಾಯ 35  
  • ವಿಮೋಚನಕಾಂಡ ಅಧ್ಯಾಯ 36  
  • ವಿಮೋಚನಕಾಂಡ ಅಧ್ಯಾಯ 37  
  • ವಿಮೋಚನಕಾಂಡ ಅಧ್ಯಾಯ 38  
  • ವಿಮೋಚನಕಾಂಡ ಅಧ್ಯಾಯ 39  
  • ವಿಮೋಚನಕಾಂಡ ಅಧ್ಯಾಯ 40  
×

Alert

×

Kannada Letters Keypad References