ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ವಿಮೋಚನಕಾಂಡ

ವಿಮೋಚನಕಾಂಡ ಅಧ್ಯಾಯ 6

1 ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು. 2 ಬಳಿಕ ಯೆಹೋವನು ಮೋಶೆಗೆ, 3 “ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ. 4 ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ. 5 ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ. 6 ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು. 7 ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ. 8 ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’ ” ಎಂದು ಹೇಳಿದನು. 9 ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ. 10 ಆಗ ಯೆಹೋವನು ಮೋಶೆಗೆ, 11 “ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು. 12 ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ”* ಮಾತಾಡುವುದರಲ್ಲಿ ಜಾಣನಲ್ಲ ಅಥವಾ “ನಾನು ವಿದೇಶಿಯವನಂತೆ ಮಾತಾಡುತ್ತೇನೆ” ಅಕ್ಷರಶಃ, “ನನ್ನ ತುಟಿಗಳಿಗೆ ಸುನ್ನತಿಯಾಗಿಲ್ಲ.” ಎಂದು ಹೇಳಿದನು. 13 ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು. ಇಸ್ರೇಲರ ಕೆಲವು ಕುಟುಂಬಗಳು 14 ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ. 15 ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲ. (ಸೌಲನು ಕಾನಾನ್ಯ ಸ್ತ್ರೀಯ ಮಗನು.) 16 ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ. 17 ಗೇರ್ಷೋನನಿಗೆ ಲಿಬ್ನೀ ಮತ್ತು ಶಿಮ್ಮೀ ಎಂಬ ಇಬ್ಬರು ಗಂಡುಮಕ್ಕಳಿದ್ದರು. 18 ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. 19 ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ. 20 ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು. 21 ಇಚ್ಹಾರನ ಗಂಡುಮಕ್ಕಳು: ಕೋರಹ, ನೆಫೆಗ್ ಮತ್ತು ಜಿಕ್ರಿ. 22 ಉಜ್ಜೀಯೇಲನ ಗಂಡುಮಕ್ಕಳು: ಮೀಷಾಯೇಲ್, ಎಲ್ಚಾಫಾನ್ ಮತ್ತು ಸಿತ್ರೀ. 23 ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದ್ವಾನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದ್ವಾ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು. 24 ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು. 25 ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು. 26 ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ ಗುಂಪುಗುಂಪಾಗಿ ಇದು ಸೇನೆಯಲ್ಲಿ ಉಪಯೋಗಿಸುವ ಪದ ಪ್ರಯೋಗ, ಇಸ್ರೇಲರು ವ್ಯವಸ್ಥಿತವಾದ ಸೈನ್ಯವಾಗಿದ್ದರು ಎಂದು ಇದು ತೋರಿಸುತ್ತದೆ. ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ. 27 ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ. ಯೆಹೋವನು ಮೋಶೆಯನ್ನು ತಿರುಗಿ ಕರೆದದ್ದು 28 ಬಳಿಕ ಯೆಹೋವನು ಮೋಶೆಯ ಸಂಗಡ ಈಜಿಪ್ಟಿನಲ್ಲಿ ಮಾತಾಡಿ, 29 “ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು. 30 ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.
1. ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು. 2. ಬಳಿಕ ಯೆಹೋವನು ಮೋಶೆಗೆ, 3. “ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ. 4. ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ. 5. ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ. 6. ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು. 7. ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ. 8. ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’ ” ಎಂದು ಹೇಳಿದನು. 9. ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ. 10. ಆಗ ಯೆಹೋವನು ಮೋಶೆಗೆ, 11. “ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು. 12. ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ”[* ಮಾತಾಡುವುದರಲ್ಲಿ ಜಾಣನಲ್ಲ ಅಥವಾ “ನಾನು ವಿದೇಶಿಯವನಂತೆ ಮಾತಾಡುತ್ತೇನೆ” ಅಕ್ಷರಶಃ, “ನನ್ನ ತುಟಿಗಳಿಗೆ ಸುನ್ನತಿಯಾಗಿಲ್ಲ.” ] ಎಂದು ಹೇಳಿದನು. 13. ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು. 14. {#1ಇಸ್ರೇಲರ ಕೆಲವು ಕುಟುಂಬಗಳು } ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ. 15. ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲ. (ಸೌಲನು ಕಾನಾನ್ಯ ಸ್ತ್ರೀಯ ಮಗನು.) 16. ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ. 17. ಗೇರ್ಷೋನನಿಗೆ ಲಿಬ್ನೀ ಮತ್ತು ಶಿಮ್ಮೀ ಎಂಬ ಇಬ್ಬರು ಗಂಡುಮಕ್ಕಳಿದ್ದರು. 18. ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. 19. ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ. 20. ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು. 21. ಇಚ್ಹಾರನ ಗಂಡುಮಕ್ಕಳು: ಕೋರಹ, ನೆಫೆಗ್ ಮತ್ತು ಜಿಕ್ರಿ. 22. ಉಜ್ಜೀಯೇಲನ ಗಂಡುಮಕ್ಕಳು: ಮೀಷಾಯೇಲ್, ಎಲ್ಚಾಫಾನ್ ಮತ್ತು ಸಿತ್ರೀ. 23. ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದ್ವಾನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದ್ವಾ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು. 24. ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು. 25. ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು. 26. ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ[† ಗುಂಪುಗುಂಪಾಗಿ ಇದು ಸೇನೆಯಲ್ಲಿ ಉಪಯೋಗಿಸುವ ಪದ ಪ್ರಯೋಗ, ಇಸ್ರೇಲರು ವ್ಯವಸ್ಥಿತವಾದ ಸೈನ್ಯವಾಗಿದ್ದರು ಎಂದು ಇದು ತೋರಿಸುತ್ತದೆ. ] ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ. 27. ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ. 28. {#1ಯೆಹೋವನು ಮೋಶೆಯನ್ನು ತಿರುಗಿ ಕರೆದದ್ದು } ಬಳಿಕ ಯೆಹೋವನು ಮೋಶೆಯ ಸಂಗಡ ಈಜಿಪ್ಟಿನಲ್ಲಿ ಮಾತಾಡಿ, 29. “ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು. 30. ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.
  • ವಿಮೋಚನಕಾಂಡ ಅಧ್ಯಾಯ 1  
  • ವಿಮೋಚನಕಾಂಡ ಅಧ್ಯಾಯ 2  
  • ವಿಮೋಚನಕಾಂಡ ಅಧ್ಯಾಯ 3  
  • ವಿಮೋಚನಕಾಂಡ ಅಧ್ಯಾಯ 4  
  • ವಿಮೋಚನಕಾಂಡ ಅಧ್ಯಾಯ 5  
  • ವಿಮೋಚನಕಾಂಡ ಅಧ್ಯಾಯ 6  
  • ವಿಮೋಚನಕಾಂಡ ಅಧ್ಯಾಯ 7  
  • ವಿಮೋಚನಕಾಂಡ ಅಧ್ಯಾಯ 8  
  • ವಿಮೋಚನಕಾಂಡ ಅಧ್ಯಾಯ 9  
  • ವಿಮೋಚನಕಾಂಡ ಅಧ್ಯಾಯ 10  
  • ವಿಮೋಚನಕಾಂಡ ಅಧ್ಯಾಯ 11  
  • ವಿಮೋಚನಕಾಂಡ ಅಧ್ಯಾಯ 12  
  • ವಿಮೋಚನಕಾಂಡ ಅಧ್ಯಾಯ 13  
  • ವಿಮೋಚನಕಾಂಡ ಅಧ್ಯಾಯ 14  
  • ವಿಮೋಚನಕಾಂಡ ಅಧ್ಯಾಯ 15  
  • ವಿಮೋಚನಕಾಂಡ ಅಧ್ಯಾಯ 16  
  • ವಿಮೋಚನಕಾಂಡ ಅಧ್ಯಾಯ 17  
  • ವಿಮೋಚನಕಾಂಡ ಅಧ್ಯಾಯ 18  
  • ವಿಮೋಚನಕಾಂಡ ಅಧ್ಯಾಯ 19  
  • ವಿಮೋಚನಕಾಂಡ ಅಧ್ಯಾಯ 20  
  • ವಿಮೋಚನಕಾಂಡ ಅಧ್ಯಾಯ 21  
  • ವಿಮೋಚನಕಾಂಡ ಅಧ್ಯಾಯ 22  
  • ವಿಮೋಚನಕಾಂಡ ಅಧ್ಯಾಯ 23  
  • ವಿಮೋಚನಕಾಂಡ ಅಧ್ಯಾಯ 24  
  • ವಿಮೋಚನಕಾಂಡ ಅಧ್ಯಾಯ 25  
  • ವಿಮೋಚನಕಾಂಡ ಅಧ್ಯಾಯ 26  
  • ವಿಮೋಚನಕಾಂಡ ಅಧ್ಯಾಯ 27  
  • ವಿಮೋಚನಕಾಂಡ ಅಧ್ಯಾಯ 28  
  • ವಿಮೋಚನಕಾಂಡ ಅಧ್ಯಾಯ 29  
  • ವಿಮೋಚನಕಾಂಡ ಅಧ್ಯಾಯ 30  
  • ವಿಮೋಚನಕಾಂಡ ಅಧ್ಯಾಯ 31  
  • ವಿಮೋಚನಕಾಂಡ ಅಧ್ಯಾಯ 32  
  • ವಿಮೋಚನಕಾಂಡ ಅಧ್ಯಾಯ 33  
  • ವಿಮೋಚನಕಾಂಡ ಅಧ್ಯಾಯ 34  
  • ವಿಮೋಚನಕಾಂಡ ಅಧ್ಯಾಯ 35  
  • ವಿಮೋಚನಕಾಂಡ ಅಧ್ಯಾಯ 36  
  • ವಿಮೋಚನಕಾಂಡ ಅಧ್ಯಾಯ 37  
  • ವಿಮೋಚನಕಾಂಡ ಅಧ್ಯಾಯ 38  
  • ವಿಮೋಚನಕಾಂಡ ಅಧ್ಯಾಯ 39  
  • ವಿಮೋಚನಕಾಂಡ ಅಧ್ಯಾಯ 40  
×

Alert

×

Kannada Letters Keypad References