ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಹೆಜ್ಕೇಲನು

ಯೆಹೆಜ್ಕೇಲನು ಅಧ್ಯಾಯ 2

ಯೆಹೋವನು ಯೆಹೆಜ್ಕೇಲನ ಸಂಗಡ ಮಾತನಾಡಿದ್ದು 1 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು. 2 ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು. 3 ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ. 4 ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು. 5 ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು. 6 “ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು. 7 ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು. 8 “ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.” 9 ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು. 10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.
ಯೆಹೋವನು ಯೆಹೆಜ್ಕೇಲನ ಸಂಗಡ ಮಾತನಾಡಿದ್ದು 1 ಆ ಸ್ವರವು, “ನರಪುತ್ರನೇ, ಎದ್ದೇಳು ನಾನು ನಿನ್ನೊಂದಿಗೆ ಮಾತನಾಡುತ್ತೇನೆ” ಎಂದಿತು. .::. 2 ಆತನು ನನ್ನೊಂದಿಗೆ ಮಾತನಾಡುತ್ತಿರಲು, ಆತ್ಮವು ನನ್ನೊಳಗೆ ಪ್ರವೇಶಿಸಿ, ನಾನು ಕಾಲೂರಿ ನಿಂತುಕೊಳ್ಳುವಂತೆ ಮಾಡಿತು. ಆತನು ನನ್ನೊಂದಿಗೆ ಮಾತಾಡುವುದು ನನಗೆ ಕೇಳಿಸಿತು. .::. 3 ಆತನು ನನ್ನೊಂದಿಗೆ, “ನರಪುತ್ರನೇ, ಇಸ್ರೇಲ್ ಜನಾಂಗದವರೊಡನೆ ಮಾತನಾಡಲು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಎಷ್ಟೋಬಾರಿ ನನಗೆ ವಿರುದ್ಧವಾಗಿ ಎದ್ದರು. ಅವರ ಪೂರ್ವಿಕರೂ ನನಗೆ ವಿರುದ್ಧವಾಗಿ ಎದ್ದಿದ್ದರು. ನನಗೆ ವಿರುದ್ಧವಾಗಿ ಎಷ್ಟೋವೇಳೆ ಪಾಪ ಮಾಡಿದರು. ಈಗಲೂ ಅವರು ಪಾಪ ಮಾಡುತ್ತಲೇ ಇದ್ದಾರೆ. .::. 4 ಆ ಜನರೊಂದಿಗೆ ಮಾತನಾಡಲು ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ. ಅವರು ಬಹಳವಾಗಿ ಪ್ರತಿಭಟಿಸುವವರೂ ಮೊಂಡರೂ ಆಗಿದ್ದಾರೆ. ಆದರೆ ನೀನು ಅವರೊಂದಿಗೆ ಮಾತಾಡಿ, ‘ನಮ್ಮ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ’ ಎಂದು ಹೇಳಬೇಕು. .::. 5 ಜನರು ನಿನ್ನ ಮಾತನ್ನು ಕೇಳಬಹುದು ಅಥವಾ ಕೇಳದಿರಬಹುದು: ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ. ನನ್ನ ಮುಂದೆ ಪಾಪಮಾಡುವುದನ್ನು ನಿಲ್ಲಿಸಲಿಲ್ಲ. ಅವರು ಯಾವಾಗಲೂ ನನ್ನ ವಿರುದ್ಧ ದಂಗೆ ಏಳುವರು. ಆದ್ದರಿಂದ ನಾನು ತಿಳಿಸಿದ್ದನ್ನೆ ನೀನು ಹೇಳಬೇಕು. ಆಗ ಅವರು ತಮ್ಮ ಮಧ್ಯೆ ಒಬ್ಬ ಪ್ರವಾದಿ ಇದ್ದಾನೆಂದು ಗ್ರಹಿಸಿಕೊಳ್ಳುವರು. .::. 6 “ನರಪುತ್ರನೇ, ಆ ಜನರು ನಿನ್ನನ್ನು ವಿರೋಧಿಸಿದರೂ ನೀನು ಅವರಿಗೆ ಭಯಪಡಬೇಡ ಮತ್ತು ಅವರು ಹೇಳುವ ಮಾತುಗಳಿಗೆ ನೀನು ಹೆದರಬೇಡ. ಮುಳ್ಳುಗಳೂ ಮುಳ್ಳುಪೊದೆಗಳೂ ನಿನಗೆ ಒತ್ತುವಂತೆಯೂ ನೀನು ಚೇಳುಗಳ ಮೇಲೆ ಕುಳಿತುಕೊಂಡಿರುವಂತೆಯೂ ಅದು ಇರುವದು. ಆದರೆ ಅವರಾಡುವ ಮಾತುಗಳಿಗೆ ಭಯಪಡಬೇಡ. ಅವರು ದಂಗೆಕೋರರು. .::. 7 ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು. .::. 8 “ನರಪುತ್ರನೇ, ನಾನು ಹೇಳುವದನ್ನು ನೀನು ಸರಿಯಾಗಿ ಕೇಳಬೇಕು. ದಂಗೆಕೋರರಾದ ಆ ಜನರಂತೆ ನೀನೂ ನನಗೆ ವಿರುದ್ಧವಾಗಿರಬೇಡ. ನಾನು ನಿನಗೆ ಕೊಡಲಿರುವುದನ್ನು ನಿನ್ನ ಬಾಯಿತೆರೆದು ತಿನ್ನು.” .::. 9 ಆಗ ನಾನು ಒಂದು ಕೈ ನನ್ನ ಬಳಿಗೆ ಬರುವದನ್ನು ಕಂಡೆನು. ಆ ಕೈ ಒಂದು ಸುರುಳಿಯನ್ನು ಹಿಡುಕೊಂಡಿತ್ತು. .::. 10 ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದಾಗ ಅದರ ಮುಂಭಾಗದಲ್ಲಿಯೂ ಹಿಂಭಾಗದಲ್ಲಿಯೂ ಮಾತುಗಳು ಬರೆಯಲ್ಪಟ್ಟಿದ್ದವು. ನಾನಾ ತರದ ಪ್ರಲಾಪಗಳು, ನರಳಾಟಗಳು ಮತ್ತು ಗೋಳಾಟಗಳು ಬರೆಯಲ್ಪಟ್ಟಿದ್ದವು.
  • ಯೆಹೆಜ್ಕೇಲನು ಅಧ್ಯಾಯ 1  
  • ಯೆಹೆಜ್ಕೇಲನು ಅಧ್ಯಾಯ 2  
  • ಯೆಹೆಜ್ಕೇಲನು ಅಧ್ಯಾಯ 3  
  • ಯೆಹೆಜ್ಕೇಲನು ಅಧ್ಯಾಯ 4  
  • ಯೆಹೆಜ್ಕೇಲನು ಅಧ್ಯಾಯ 5  
  • ಯೆಹೆಜ್ಕೇಲನು ಅಧ್ಯಾಯ 6  
  • ಯೆಹೆಜ್ಕೇಲನು ಅಧ್ಯಾಯ 7  
  • ಯೆಹೆಜ್ಕೇಲನು ಅಧ್ಯಾಯ 8  
  • ಯೆಹೆಜ್ಕೇಲನು ಅಧ್ಯಾಯ 9  
  • ಯೆಹೆಜ್ಕೇಲನು ಅಧ್ಯಾಯ 10  
  • ಯೆಹೆಜ್ಕೇಲನು ಅಧ್ಯಾಯ 11  
  • ಯೆಹೆಜ್ಕೇಲನು ಅಧ್ಯಾಯ 12  
  • ಯೆಹೆಜ್ಕೇಲನು ಅಧ್ಯಾಯ 13  
  • ಯೆಹೆಜ್ಕೇಲನು ಅಧ್ಯಾಯ 14  
  • ಯೆಹೆಜ್ಕೇಲನು ಅಧ್ಯಾಯ 15  
  • ಯೆಹೆಜ್ಕೇಲನು ಅಧ್ಯಾಯ 16  
  • ಯೆಹೆಜ್ಕೇಲನು ಅಧ್ಯಾಯ 17  
  • ಯೆಹೆಜ್ಕೇಲನು ಅಧ್ಯಾಯ 18  
  • ಯೆಹೆಜ್ಕೇಲನು ಅಧ್ಯಾಯ 19  
  • ಯೆಹೆಜ್ಕೇಲನು ಅಧ್ಯಾಯ 20  
  • ಯೆಹೆಜ್ಕೇಲನು ಅಧ್ಯಾಯ 21  
  • ಯೆಹೆಜ್ಕೇಲನು ಅಧ್ಯಾಯ 22  
  • ಯೆಹೆಜ್ಕೇಲನು ಅಧ್ಯಾಯ 23  
  • ಯೆಹೆಜ್ಕೇಲನು ಅಧ್ಯಾಯ 24  
  • ಯೆಹೆಜ್ಕೇಲನು ಅಧ್ಯಾಯ 25  
  • ಯೆಹೆಜ್ಕೇಲನು ಅಧ್ಯಾಯ 26  
  • ಯೆಹೆಜ್ಕೇಲನು ಅಧ್ಯಾಯ 27  
  • ಯೆಹೆಜ್ಕೇಲನು ಅಧ್ಯಾಯ 28  
  • ಯೆಹೆಜ್ಕೇಲನು ಅಧ್ಯಾಯ 29  
  • ಯೆಹೆಜ್ಕೇಲನು ಅಧ್ಯಾಯ 30  
  • ಯೆಹೆಜ್ಕೇಲನು ಅಧ್ಯಾಯ 31  
  • ಯೆಹೆಜ್ಕೇಲನು ಅಧ್ಯಾಯ 32  
  • ಯೆಹೆಜ್ಕೇಲನು ಅಧ್ಯಾಯ 33  
  • ಯೆಹೆಜ್ಕೇಲನು ಅಧ್ಯಾಯ 34  
  • ಯೆಹೆಜ್ಕೇಲನು ಅಧ್ಯಾಯ 35  
  • ಯೆಹೆಜ್ಕೇಲನು ಅಧ್ಯಾಯ 36  
  • ಯೆಹೆಜ್ಕೇಲನು ಅಧ್ಯಾಯ 37  
  • ಯೆಹೆಜ್ಕೇಲನು ಅಧ್ಯಾಯ 38  
  • ಯೆಹೆಜ್ಕೇಲನು ಅಧ್ಯಾಯ 39  
  • ಯೆಹೆಜ್ಕೇಲನು ಅಧ್ಯಾಯ 40  
  • ಯೆಹೆಜ್ಕೇಲನು ಅಧ್ಯಾಯ 41  
  • ಯೆಹೆಜ್ಕೇಲನು ಅಧ್ಯಾಯ 42  
  • ಯೆಹೆಜ್ಕೇಲನು ಅಧ್ಯಾಯ 43  
  • ಯೆಹೆಜ್ಕೇಲನು ಅಧ್ಯಾಯ 44  
  • ಯೆಹೆಜ್ಕೇಲನು ಅಧ್ಯಾಯ 45  
  • ಯೆಹೆಜ್ಕೇಲನು ಅಧ್ಯಾಯ 46  
  • ಯೆಹೆಜ್ಕೇಲನು ಅಧ್ಯಾಯ 47  
  • ಯೆಹೆಜ್ಕೇಲನು ಅಧ್ಯಾಯ 48  
×

Alert

×

Kannada Letters Keypad References