ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಆದಿಕಾಂಡ

ಆದಿಕಾಂಡ ಅಧ್ಯಾಯ 24

ಇಸಾಕನಿಗಾಗಿ ಹೆಂಡತಿ 1 ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು. 2 ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು. 3 ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ 4 ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು. 5 ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು. 6 ಅಬ್ರಹಾಮನು ಅವನಿಗೆ, “ಇಲ್ಲ, ಆ ದೇಶಕ್ಕೆ ನನ್ನ ಮಗನನ್ನು ಕರೆದುಕೊಂಡು ಹೋಗಬೇಡ. 7 ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ. 8 ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು. 9 ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಿದನು. ಕನ್ಯೆಯನ್ನು ಹುಡುಕಲು ಪ್ರಯಾಣ 10 ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು. 11 ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು. 12 ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು. 13 ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ. 14 ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು. ಕನ್ಯೆಯ ಆಯ್ಕೆ 15 ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು. 16 ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು. 17 ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. 18 ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು. 19 ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ, 20 ನೀರನ್ನೆಲ್ಲ ತೊಟ್ಟಿಯಲ್ಲಿ ಸುರಿದು ಮತ್ತೆ ನೀರನ್ನು ತೆಗೆದುಕೊಂಡು ಬರಲು ಬಾವಿಯ ಬಳಿಗೆ ಬೇಗಬೇಗನೆ ಹೋದಳು. ಹೀಗೆ ಅವನ ಒಂಟೆಗಳಿಗೆಲ್ಲಾ ನೀರನ್ನು ಕೊಟ್ಟಳು. 21 ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು. 22 ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು. 23 ಆ ಸೇವಕನು, “ನಿನ್ನ ತಂದೆ ಯಾರು? ನನ್ನ ಜನರು ಇಳಿದುಕೊಳ್ಳಲು ನಿನ್ನ ತಂದೆಯ ಮನೆಯಲ್ಲಿ ಸ್ಥಳವಿದೆಯೋ?” ಎಂದು ಕೇಳಿದನು. 24 ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು. 25 ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು. 26 ಆಗ ಆ ಸೇವಕನು ತಲೆಬಾಗಿ ಯೆಹೋವನನ್ನು ಆರಾಧಿಸಿದನು. 27 ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು. 28 ಆಗ ರೆಬೆಕ್ಕಳು ಬೇಗನೆ ಹೋಗಿ ಈ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು. 29 (29-30)ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು. 30 31 ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು. 32 ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು. 33 ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು. ರೆಬೆಕ್ಕಳನ್ನು ಇಸಾಕನಿಗಾಗಿ ಕೇಳಿದ್ದು 34 ಆ ಸೇವಕನು “ನಾನು ಅಬ್ರಹಾಮನ ಸೇವಕನು. 35 ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ. 36 ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ. 37 ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ. 38 ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು. 39 ನಾನು ನನ್ನ ಒಡೆಯನಿಗೆ, ‘ಆ ಕನ್ಯೆಯು ಈ ದೇಶಕ್ಕೆ ನನ್ನೊಂದಿಗೆ ಬರಲು ಒಪ್ಪದಿರಬಹುದು’ ಎಂದು ಹೇಳಿದೆ. 40 ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ. 41 ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು. 42 “ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು. 43 ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆಮೇಲೆ ನಾನು ಆಕೆಗೆ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು” ಎಂದು ಕೇಳುತ್ತೇನೆ. 44 ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ. 45 “ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ. 46 ಆ ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, ‘ನೀರನ್ನು ಕುಡಿ; ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು. 47 ಆಮೇಲೆ ನಾನು ಆಕೆಗೆ, ‘ನಿನ್ನ ತಂದೆ ಯಾರು?’ ಎಂದು ಕೇಳಿದೆ, ಆಕೆ ‘ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು’ ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳೆಗಳನ್ನೂ ಕೊಟ್ಟೆನು. 48 ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು. 49 ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು. 50 ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ. 51 ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು. 52 ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು. 53 ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು. 54 ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು. 55 ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು. 56 ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು. 57 ರೆಬೆಕ್ಕಳ ಅಣ್ಣ ಮತ್ತು ತಾಯಿ ಅವನಿಗೆ, “ನಾವು ರೆಬೆಕ್ಕಳನ್ನು ಕರೆದು ಆಕೆಯ ಇಷ್ಟವನ್ನು ಕೇಳುತ್ತೇವೆ” ಅಂದರು. 58 ಅವರು ರೆಬೆಕ್ಕಳನ್ನು ಕರೆದು, “ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು. ರೆಬೆಕ್ಕಳು, “ಹೌದು, ನಾನು ಹೋಗುತ್ತೇನೆ” ಅಂದಳು. 59 ಆದ್ದರಿಂದ ಅವರು ರೆಬೆಕ್ಕಳನ್ನು ಅಬ್ರಹಾಮನ ಸೇವಕನೊಂದಿಗೂ ಅವನ ಸಂಗಡಿಗರೊಂದಿಗೂ ಕಳುಹಿಸಿಕೊಟ್ಟರು. ರೆಬೆಕ್ಕಳ ಸೇವಕಿ ಸಹ ಅವರೊಂದಿಗೆ ಹೋದಳು. 60 ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು. 61 ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು. 62 ಆ ಸಮಯದಲ್ಲಿ, ಇಸಾಕನು ಬೀರ್‌ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು. 63 ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು. 64 ರೆಬೆಕ್ಕಳು ಕಣ್ಣೆತ್ತಿ ನೋಡಿದಾಗ ಇಸಾಕನನ್ನು ಕಂಡಳು. ಆಮೇಲೆ ಆಕೆ ಒಂಟೆಯಿಂದ ಬೇಗನೆ ಇಳಿದು ಬಂದಳು. 65 ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು. 66 ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು. 67 ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.
1. {#1ಇಸಾಕನಿಗಾಗಿ ಹೆಂಡತಿ } ಅಬ್ರಹಾಮನು ಬಹಳ ವೃದ್ಧನಾದನು. ಯೆಹೋವನು ಅಬ್ರಹಾಮನನ್ನೂ ಅವನು ಮಾಡಿದ ಪ್ರತಿಯೊಂದನ್ನೂ ಆಶೀರ್ವದಿಸಿದನು. 2. ಅಬ್ರಹಾಮನ ಆಸ್ತಿಯನ್ನೆಲ್ಲಾ ನೋಡಿಕೊಳ್ಳಲು ಒಬ್ಬ ಸೇವಕನಿದ್ದನು. ಅಬ್ರಹಾಮನು ಆ ಸೇವಕನನ್ನು ಕರೆದು, “ನನ್ನ ತೊಡೆಯ ಕೆಳಗೆ ನಿನ್ನ ಕೈಯಿಟ್ಟು ನನಗೆ ಪ್ರಮಾಣಮಾಡು. 3. ಕಾನಾನ್ ದೇಶದ ಕನ್ನಿಕೆಯನ್ನು ನನ್ನ ಮಗನು ಮದುವೆಯಾಗದಂತೆ ನೀನು ನೋಡಿಕೊಳ್ಳುವುದಾಗಿಯೂ 4. ನನ್ನ ಸ್ವದೇಶದಲ್ಲಿರುವ ನನ್ನ ಸ್ವಜನರ ಬಳಿಗೆ ಹೋಗಿ ನನ್ನ ಮಗನಾದ ಇಸಾಕನಿಗೆ ಕನ್ನಿಕೆಯನ್ನು ಹುಡುಕಿ ಕರೆದುಕೊಂಡು ಬರುವುದಾಗಿಯೂ ಭೂಪರಲೋಕಗಳ ದೇವರಾದ ಯೆಹೋವನ ಮೇಲೆ ಪ್ರಮಾಣಮಾಡು” ಎಂದು ಹೇಳಿದನು. 5. ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು. 6. ಅಬ್ರಹಾಮನು ಅವನಿಗೆ, “ಇಲ್ಲ, ಆ ದೇಶಕ್ಕೆ ನನ್ನ ಮಗನನ್ನು ಕರೆದುಕೊಂಡು ಹೋಗಬೇಡ. 7. ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ. 8. ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು. 9. ಆಗ ಆ ಸೇವಕನು ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಿದನು. 10. {#1ಕನ್ಯೆಯನ್ನು ಹುಡುಕಲು ಪ್ರಯಾಣ } ಆ ಸೇವಕನು ಅಬ್ರಹಾಮನ ಹತ್ತು ಒಂಟೆಗಳನ್ನು ಸಿದ್ಧಮಾಡಿ ಶ್ರೇಷ್ಠವಾದ ಅನೇಕ ಉಡುಗೊರೆಗಳನ್ನು ತೆಗೆದುಕೊಂಡು ಮೆಸೊಪೋಟೊಮಿಯಕ್ಕೆ ಬಂದು ನಾಹೋರನು ವಾಸವಾಗಿದ್ದ ಊರನ್ನು ತಲುಪಿದನು. 11. ಅವನು ಊರ ಹೊರಗಿದ್ದ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು; ಪ್ರತಿಸಾಯಂಕಾಲ ಸ್ತ್ರೀಯರು ನೀರನ್ನು ತೆಗೆದುಕೊಂಡು ಹೋಗುವುದಕ್ಕಾಗಿ ಆ ಬಾವಿಗೆ ಬರುತ್ತಿದ್ದರು. 12. ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು. 13. ನಾನು ಈ ನೀರಿನ ಬಾವಿಯ ಬಳಿಯಲ್ಲಿ ನಿಂತಿರುತ್ತೇನೆ; ಈ ಊರಿನ ಯುವತಿಯರು ನೀರನ್ನು ತೆಗೆದುಕೊಳ್ಳಲು ಇಲ್ಲಿಗೆ ಬರುತ್ತಾರೆ. 14. ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು. 15. {#1ಕನ್ಯೆಯ ಆಯ್ಕೆ } ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು. 16. ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು. 17. ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು. 18. ರೆಬೆಕ್ಕಳು ಕೂಡಲೇ ತನ್ನ ಕೊಡವನ್ನು ಹೆಗಲ ಮೇಲಿಂದ ಕೆಳಗಿಳಿಸಿ ಅವನಿಗೆ ಕುಡಿಯಲು ನೀರನ್ನು ಕೊಟ್ಟು, “ಅಯ್ಯಾ, ನೀರನ್ನು ಕುಡಿ” ಅಂದಳು. 19. ಅವನು ನೀರು ಕುಡಿದಾದ ಮೇಲೆ ಆಕೆ ಅವನಿಗೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರನ್ನು ತಂದುಕೊಡುತ್ತೇನೆ” ಎಂದು ಹೇಳಿ, 20. ನೀರನ್ನೆಲ್ಲ ತೊಟ್ಟಿಯಲ್ಲಿ ಸುರಿದು ಮತ್ತೆ ನೀರನ್ನು ತೆಗೆದುಕೊಂಡು ಬರಲು ಬಾವಿಯ ಬಳಿಗೆ ಬೇಗಬೇಗನೆ ಹೋದಳು. ಹೀಗೆ ಅವನ ಒಂಟೆಗಳಿಗೆಲ್ಲಾ ನೀರನ್ನು ಕೊಟ್ಟಳು. 21. ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು. 22. ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು. 23. ಆ ಸೇವಕನು, “ನಿನ್ನ ತಂದೆ ಯಾರು? ನನ್ನ ಜನರು ಇಳಿದುಕೊಳ್ಳಲು ನಿನ್ನ ತಂದೆಯ ಮನೆಯಲ್ಲಿ ಸ್ಥಳವಿದೆಯೋ?” ಎಂದು ಕೇಳಿದನು. 24. ರೆಬೆಕ್ಕಳು ಅವನಿಗೆ, “ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು” ಎಂದು ಹೇಳಿದಳು. 25. ಬಳಿಕ, “ಹೌದು, ನಿನ್ನ ಒಂಟೆಗಳಿಗೆ ಹುಲ್ಲೂ ಮೇವೂ ನಮ್ಮಲ್ಲಿವೆ ಮತ್ತು ನೀವು ಇಳಿದುಕೊಳ್ಳಲೂ ಸ್ಥಳವಿದೆ” ಎಂದಳು. 26. ಆಗ ಆ ಸೇವಕನು ತಲೆಬಾಗಿ ಯೆಹೋವನನ್ನು ಆರಾಧಿಸಿದನು. 27. ಬಳಿಕ ಆಕೆಗೆ, “ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನ ಒಡೆಯನಿಗೆ ದಯಾಳುವೂ ನಂಬಿಗಸ್ತನೂ ಆಗಿದ್ದಾನೆ. ನನ್ನ ಒಡೆಯನ ಮಗನಿಗಾಗಿ ಯೆಹೋವನು ನನ್ನನ್ನು ನನ್ನ ಒಡೆಯನ ಕುಟುಂಬಕ್ಕೆ ನಡೆಸಿದ್ದಾನೆ” ಎಂದು ಹೇಳಿದನು. 28. ಆಗ ರೆಬೆಕ್ಕಳು ಬೇಗನೆ ಹೋಗಿ ಈ ಸಂಗತಿಗಳನ್ನೆಲ್ಲಾ ತನ್ನ ಕುಟುಂಬದವರಿಗೆ ತಿಳಿಸಿದಳು. 29. (29-30)ರೆಬೆಕ್ಕಳಿಗೆ ಒಬ್ಬ ಅಣ್ಣನಿದ್ದನು. ಅವನ ಹೆಸರು ಲಾಬಾನ. ನಡೆದ ಸಂಗತಿಗಳನ್ನೆಲ್ಲ ರೆಬೆಕ್ಕಳು ಅವನಿಗೆ ತಿಳಿಸಿದಳು. ಲಾಬಾನನು ಆಕೆಯ ಮಾತುಗಳನ್ನೆಲ್ಲ ಕೇಳಿದಾಗ ಮತ್ತು ಉಂಗುರವನ್ನು ಮತ್ತು ಕೈಗಳಲ್ಲಿದ್ದ ಬಳೆಗಳನ್ನು ಕಂಡಾಗ ಬಾವಿಯ ಬಳಿಗೆ ಓಡಿಹೋದನು. ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ಆ ಸೇವಕನು ನಿಂತುಕೊಂಡಿದ್ದನು. 30. 31. ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು. 32. ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು. 33. ನಂತರ ಲಾಬಾನನು ಅವನಿಗೆ ಊಟವನ್ನು ಕೊಟ್ಟನು. ಆದರೆ ಆ ಸೇವಕನು ಊಟಮಾಡದೆ ಅವರಿಗೆ, “ನಾನು ಬಂದ ಉದ್ದೇಶವನ್ನು ತಿಳಿಸದೆ ಊಟಮಾಡುವುದಿಲ್ಲ” ಎಂದು ಹೇಳಿದನು. ಅದಕ್ಕೆ ಲಾಬಾನನು, “ಸರಿ, ಹೇಳು” ಅಂದನು. 34. {#1ರೆಬೆಕ್ಕಳನ್ನು ಇಸಾಕನಿಗಾಗಿ ಕೇಳಿದ್ದು } ಆ ಸೇವಕನು “ನಾನು ಅಬ್ರಹಾಮನ ಸೇವಕನು. 35. ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ. 36. ಸಾರಳು ನನ್ನ ಒಡೆಯನ ಹೆಂಡತಿ. ಆಕೆ ತುಂಬಾ ವಯಸ್ಸಾಗಿರುವಾಗ ಒಬ್ಬ ಗಂಡುಮಗನನ್ನು ಹೆತ್ತಳು. ನನ್ನ ಒಡೆಯನು ತನ್ನ ಆಸ್ತಿಯನ್ನೆಲ್ಲ ಆ ಮಗನಿಗೇ ಕೊಟ್ಟಿದ್ದಾನೆ. 37. ನನ್ನ ಒಡೆಯನ್ನು ನನ್ನಿಂದ ಒಂದು ಪ್ರಮಾಣವನ್ನು ಬಲವಂತವಾಗಿ ಮಾಡಿಸಿದನು. ನನ್ನ ಒಡೆಯನು ನನಗೆ, ‘ನನ್ನ ಮಗನಿಗೆ ಕಾನಾನಿನ ಹುಡುಗಿಯೊಡನೆ ಮದುವೆಯಾಗದಂತೆ ನೀನು ನೋಡಿಕೊಳ್ಳಬೇಕು; ನಾವು ಈ ಜನರೊಡನೆ ವಾಸಿಸುತ್ತಿದ್ದೇವೆ. ಆದರೆ ಕಾನಾನಿನ ಹುಡುಗಿಯೊಂದಿಗೆ ನನ್ನ ಮಗನಿಗೆ ಮದುವೆಯಾಗುವುದು ನನಗೆ ಇಷ್ಟವಿಲ್ಲ. 38. ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು. 39. ನಾನು ನನ್ನ ಒಡೆಯನಿಗೆ, ‘ಆ ಕನ್ಯೆಯು ಈ ದೇಶಕ್ಕೆ ನನ್ನೊಂದಿಗೆ ಬರಲು ಒಪ್ಪದಿರಬಹುದು’ ಎಂದು ಹೇಳಿದೆ. 40. ಆದರೆ ನನ್ನ ಒಡೆಯನು ನನಗೆ, ‘ನಾನು ಯೆಹೋವನ ಸೇವೆ ಮಾಡುತ್ತಿದ್ದೇನೆ. ಆದ್ದರಿಂದ ಯೆಹೋವನು ತನ್ನ ದೂತನನ್ನು ನಿನ್ನೊಂದಿಗೆ ಕಳುಹಿಸಿ ನಿನಗೆ ಸಹಾಯ ಮಾಡುವನು. ಅಲ್ಲಿರುವ ನನ್ನ ತಂದೆಯ ಕುಟುಂಬದವರಲ್ಲಿ ನೀನು ನನ್ನ ಮಗನಿಗಾಗಿ ಒಬ್ಬ ಕನ್ಯೆಯನ್ನು ಕಂಡುಕೊಳ್ಳುವೆ. 41. ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು. 42. “ಇಂದು ನಾನು ಈ ಬಾವಿಯ ಬಳಿಗೆ ಬಂದು, ‘ನನ್ನ ಒಡೆಯನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ದಯವಿಟ್ಟು ನನ್ನ ಪ್ರವಾಸವನ್ನು ಯಶಸ್ವಿಗೊಳಿಸು. 43. ನಾನು ಬಾವಿಯ ಬಳಿಯಲ್ಲಿ ನಿಂತುಕೊಂಡು ನೀರನ್ನು ತೆಗೆದುಕೊಳ್ಳಲು ಬರುವ ಒಬ್ಬ ಯುವತಿಗಾಗಿ ಕಾದಿರುತ್ತೇನೆ. ಆಮೇಲೆ ನಾನು ಆಕೆಗೆ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ನೀರನ್ನು ಕೊಡು” ಎಂದು ಕೇಳುತ್ತೇನೆ. 44. ಅವಳು ನನಗೆ, “ನೀನೂ ನೀರನ್ನು ಕುಡಿ, ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ” ಎಂದು ಹೇಳಿದರೆ, ನನ್ನ ಒಡೆಯನ ಮಗನಿಗೆ ಯೆಹೋವನು ಆರಿಸಿಕೊಂಡಿರುವ ಕನ್ನಿಕೆ ಇವಳೇ ಎಂಬುದಾಗಿ ತಿಳಿದುಕೊಳ್ಳುವೆ’ ಎಂದು ಪ್ರಾರ್ಥಿಸಿದೆ. 45. “ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ. 46. ಆ ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, ‘ನೀರನ್ನು ಕುಡಿ; ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು. 47. ಆಮೇಲೆ ನಾನು ಆಕೆಗೆ, ‘ನಿನ್ನ ತಂದೆ ಯಾರು?’ ಎಂದು ಕೇಳಿದೆ, ಆಕೆ ‘ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು’ ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳೆಗಳನ್ನೂ ಕೊಟ್ಟೆನು. 48. ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು. 49. ಈಗ ನಿಮ್ಮ ಅಭಿಪ್ರಾಯವನ್ನು ತಿಳಿಸಿರಿ. ನೀವು ನನ್ನ ಒಡೆಯನಿಗೆ ಪ್ರೀತಿಯಿಂದಲೂ ನಂಬಿಕೆಯಿಂದಲೂ ನಿಮ್ಮ ಮಗಳನ್ನು ಕೊಡುವಿರಾ? ಅಥವಾ ಕೊಡುವುದಿಲ್ಲವೇ? ನಿಮ್ಮ ಉತ್ತರಕ್ಕನುಸಾರವಾಗಿ ನಾನು ಮುಂದಿನ ಕಾರ್ಯದ ಬಗ್ಗೆ ಆಲೋಚಿಸುವೆ” ಎಂದು ಹೇಳಿದನು. 50. ಅದಕ್ಕೆ ಲಾಬಾನನು ಮತ್ತು ಬೆತೂವೇಲನು, “ನಿನ್ನನ್ನು ಯೆಹೋವನೇ ಕಳುಹಿಸಿದ್ದಾನೆ. ನಡೆಯತಕ್ಕದ್ದನ್ನು ಬದಲಾಯಿಸಲು ನಮಗೆ ಸಾಧ್ಯವಿಲ್ಲ. 51. ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು. 52. ಅಬ್ರಹಾಮನ ಸೇವಕನು ಈ ಮಾತುಗಳನ್ನು ಕೇಳಿ ಯೆಹೋವನಿಗೆ ನೆಲದವರೆಗೂ ತಲೆಬಾಗಿ ನಮಸ್ಕರಿಸಿದನು. 53. ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು. 54. ಆ ಸೇವಕನು ಮತ್ತು ಅವನ ಸಂಗಡಿಗರು ಅಲ್ಲಿ ಇಳಿದುಕೊಂಡು ಊಟಮಾಡಿದರು. ಅವರು ಮರುದಿನ ಮುಂಜಾನೆ ಎದ್ದು, “ಈಗ ನಾವು ನಮ್ಮ ಒಡೆಯನ ಬಳಿಗೆ ಹೋಗುತ್ತೇವೆ” ಎಂದು ಹೇಳಿದರು. 55. ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು. 56. ಆದರೆ ಆ ಸೇವಕನು ಅವರಿಗೆ, “ನನ್ನನ್ನು ತಡೆಯಬೇಡಿ. ಯೆಹೋವನು ನನ್ನ ಪ್ರಯಾಣವನ್ನು ಯಶಸ್ವಿಗೊಳಿಸಿದ್ದಾನೆ. ಈಗ ನನ್ನನ್ನು ನನ್ನ ಒಡೆಯನ ಬಳಿಗೆ ಕಳುಹಿಸಿಕೊಡಿ” ಎಂದು ಹೇಳಿದನು. 57. ರೆಬೆಕ್ಕಳ ಅಣ್ಣ ಮತ್ತು ತಾಯಿ ಅವನಿಗೆ, “ನಾವು ರೆಬೆಕ್ಕಳನ್ನು ಕರೆದು ಆಕೆಯ ಇಷ್ಟವನ್ನು ಕೇಳುತ್ತೇವೆ” ಅಂದರು. 58. ಅವರು ರೆಬೆಕ್ಕಳನ್ನು ಕರೆದು, “ಈಗಲೇ ಈ ಮನುಷ್ಯನೊಡನೆ ಹೋಗಲು ನಿನಗೆ ಇಷ್ಟವಿದೆಯೋ?” ಎಂದು ಕೇಳಿದರು. ರೆಬೆಕ್ಕಳು, “ಹೌದು, ನಾನು ಹೋಗುತ್ತೇನೆ” ಅಂದಳು. 59. ಆದ್ದರಿಂದ ಅವರು ರೆಬೆಕ್ಕಳನ್ನು ಅಬ್ರಹಾಮನ ಸೇವಕನೊಂದಿಗೂ ಅವನ ಸಂಗಡಿಗರೊಂದಿಗೂ ಕಳುಹಿಸಿಕೊಟ್ಟರು. ರೆಬೆಕ್ಕಳ ಸೇವಕಿ ಸಹ ಅವರೊಂದಿಗೆ ಹೋದಳು. 60. ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು. 61. ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು. 62. ಆ ಸಮಯದಲ್ಲಿ, ಇಸಾಕನು ಬೀರ್‌ಲಹೈರೋಯಿಗೆ ಹೋಗಿ ಬಂದಿದ್ದನು; ಯಾಕೆಂದರೆ ಅವನು ನೆಗವ್‌ನಲ್ಲಿ ವಾಸವಾಗಿದ್ದನು. 63. ಸಾಯಂಕಾಲದಲ್ಲಿ ಇಸಾಕನು ಧ್ಯಾನಮಾಡಲು ಹೊಲಕ್ಕೆ ಹೋದನು. ಇಸಾಕನು ಕಣ್ಣೆತ್ತಿ ನೋಡಿದಾಗ ಬಹುದೂರದಲ್ಲಿ ಒಂಟೆಗಳು ಬರುತ್ತಿರುವುದನ್ನು ಕಂಡನು. 64. ರೆಬೆಕ್ಕಳು ಕಣ್ಣೆತ್ತಿ ನೋಡಿದಾಗ ಇಸಾಕನನ್ನು ಕಂಡಳು. ಆಮೇಲೆ ಆಕೆ ಒಂಟೆಯಿಂದ ಬೇಗನೆ ಇಳಿದು ಬಂದಳು. 65. ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು. 66. ಆ ಸೇವಕನು ನಡೆದ ಸಂಗತಿಯನ್ನೆಲ್ಲಾ ಇಸಾಕನಿಗೆ ತಿಳಿಸಿದನು. 67. ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.
  • ಆದಿಕಾಂಡ ಅಧ್ಯಾಯ 1  
  • ಆದಿಕಾಂಡ ಅಧ್ಯಾಯ 2  
  • ಆದಿಕಾಂಡ ಅಧ್ಯಾಯ 3  
  • ಆದಿಕಾಂಡ ಅಧ್ಯಾಯ 4  
  • ಆದಿಕಾಂಡ ಅಧ್ಯಾಯ 5  
  • ಆದಿಕಾಂಡ ಅಧ್ಯಾಯ 6  
  • ಆದಿಕಾಂಡ ಅಧ್ಯಾಯ 7  
  • ಆದಿಕಾಂಡ ಅಧ್ಯಾಯ 8  
  • ಆದಿಕಾಂಡ ಅಧ್ಯಾಯ 9  
  • ಆದಿಕಾಂಡ ಅಧ್ಯಾಯ 10  
  • ಆದಿಕಾಂಡ ಅಧ್ಯಾಯ 11  
  • ಆದಿಕಾಂಡ ಅಧ್ಯಾಯ 12  
  • ಆದಿಕಾಂಡ ಅಧ್ಯಾಯ 13  
  • ಆದಿಕಾಂಡ ಅಧ್ಯಾಯ 14  
  • ಆದಿಕಾಂಡ ಅಧ್ಯಾಯ 15  
  • ಆದಿಕಾಂಡ ಅಧ್ಯಾಯ 16  
  • ಆದಿಕಾಂಡ ಅಧ್ಯಾಯ 17  
  • ಆದಿಕಾಂಡ ಅಧ್ಯಾಯ 18  
  • ಆದಿಕಾಂಡ ಅಧ್ಯಾಯ 19  
  • ಆದಿಕಾಂಡ ಅಧ್ಯಾಯ 20  
  • ಆದಿಕಾಂಡ ಅಧ್ಯಾಯ 21  
  • ಆದಿಕಾಂಡ ಅಧ್ಯಾಯ 22  
  • ಆದಿಕಾಂಡ ಅಧ್ಯಾಯ 23  
  • ಆದಿಕಾಂಡ ಅಧ್ಯಾಯ 24  
  • ಆದಿಕಾಂಡ ಅಧ್ಯಾಯ 25  
  • ಆದಿಕಾಂಡ ಅಧ್ಯಾಯ 26  
  • ಆದಿಕಾಂಡ ಅಧ್ಯಾಯ 27  
  • ಆದಿಕಾಂಡ ಅಧ್ಯಾಯ 28  
  • ಆದಿಕಾಂಡ ಅಧ್ಯಾಯ 29  
  • ಆದಿಕಾಂಡ ಅಧ್ಯಾಯ 30  
  • ಆದಿಕಾಂಡ ಅಧ್ಯಾಯ 31  
  • ಆದಿಕಾಂಡ ಅಧ್ಯಾಯ 32  
  • ಆದಿಕಾಂಡ ಅಧ್ಯಾಯ 33  
  • ಆದಿಕಾಂಡ ಅಧ್ಯಾಯ 34  
  • ಆದಿಕಾಂಡ ಅಧ್ಯಾಯ 35  
  • ಆದಿಕಾಂಡ ಅಧ್ಯಾಯ 36  
  • ಆದಿಕಾಂಡ ಅಧ್ಯಾಯ 37  
  • ಆದಿಕಾಂಡ ಅಧ್ಯಾಯ 38  
  • ಆದಿಕಾಂಡ ಅಧ್ಯಾಯ 39  
  • ಆದಿಕಾಂಡ ಅಧ್ಯಾಯ 40  
  • ಆದಿಕಾಂಡ ಅಧ್ಯಾಯ 41  
  • ಆದಿಕಾಂಡ ಅಧ್ಯಾಯ 42  
  • ಆದಿಕಾಂಡ ಅಧ್ಯಾಯ 43  
  • ಆದಿಕಾಂಡ ಅಧ್ಯಾಯ 44  
  • ಆದಿಕಾಂಡ ಅಧ್ಯಾಯ 45  
  • ಆದಿಕಾಂಡ ಅಧ್ಯಾಯ 46  
  • ಆದಿಕಾಂಡ ಅಧ್ಯಾಯ 47  
  • ಆದಿಕಾಂಡ ಅಧ್ಯಾಯ 48  
  • ಆದಿಕಾಂಡ ಅಧ್ಯಾಯ 49  
  • ಆದಿಕಾಂಡ ಅಧ್ಯಾಯ 50  
×

Alert

×

Kannada Letters Keypad References