ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ

ಯೆಶಾಯ ಅಧ್ಯಾಯ 44

ಯೆಹೋವನೇ ದೇವರು 1 “ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವುದನ್ನು ಕೇಳು. 2 ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. 3 “ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು. 4 ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು. 5 “ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.” 6 ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. 7 ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು. 8 “ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!” ಸುಳ್ಳುದೇವರುಗಳು ಪ್ರಯೋಜನಕ್ಕೆ ಬಾರದವುಗಳು 9 ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ. 10 ಈ ಸುಳ್ಳುದೇವರುಗಳನ್ನು ಮಾಡಿದವರ್ಯಾರು? ಇಂಥ ಉಪಯೋಗವಿಲ್ಲದ ವಿಗ್ರಹಗಳನ್ನು ಮಾಡಿದವರ್ಯಾರು? 11 ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು. 12 ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು. 13 ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು. 14 ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು, ತುರಾಯಿ ಮರಗಳನ್ನು, ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.) 15 ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು. 16 ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಆ ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆತುಂಬಾ ತಿನ್ನುವನು; ಆ ಮರದ ಸೌದೆಯನ್ನು ಸುಟ್ಟು ಚಳಿಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು. 17 ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ. 18 ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ. 19 “ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ. 20 ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ. ನಿಜದೇವರಾದ ಯೆಹೋವನು ಇಸ್ರೇಲರ ಸಹಾಯಕನು 21 “ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ!
ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ.
22 ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ.
ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ.
ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.”
23 ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ.
ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ.
ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ.
24 ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು.
ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”
25 ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ. 26 ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.
ಯೆಹೂದದ ಪುನರ್ ನಿರ್ಮಾಣದಲ್ಲಿ ಸೈರಸನ ಪಾತ್ರ 27 ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ.
28 ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”
1. {ಯೆಹೋವನೇ ದೇವರು} “ಯಾಕೋಬೇ, ನೀನೇ ನನ್ನ ಸೇವಕ. ನನ್ನ ಮಾತುಗಳನ್ನು ಕೇಳು. ಇಸ್ರೇಲೇ, ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. ನಾನು ಹೇಳುವುದನ್ನು ಕೇಳು. 2. ಯೆಹೋವನಾದ ನಾನೇ ನಿನ್ನನ್ನು ನಿರ್ಮಿಸಿದಾತನು. ನೀನು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿನಗೆ ಸಹಾಯ ಮಾಡಿದೆನು. ಯಾಕೋಬೇ, ನನ್ನ ಸೇವಕನೇ, ಹೆದರದಿರು. ಯೆಶುರೂನೇ (ಇಸ್ರೇಲೇ), ನಾನು ನಿನ್ನನ್ನು ಆರಿಸಿಕೊಂಡಿದ್ದೇನೆ. 3. “ಬಾಯಾರಿದ ಜನರಿ ಗೆ ನಾನು ನೀರು ಹೊಯ್ಯುವೆನು. ಬಂಜ ರು ಭೂಮಿಯಲ್ಲಿ ನಾನು ಹೊಳೆ ಹರಿಯುವಂತೆ ಮಾಡುವೆನು. ನಿನ್ನ ಸಂತಾನದ ಮೇಲೆ ನಾನು ನನ್ನ ಆತ್ಮವನ್ನು ಸುರಿಸುವೆನು; ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. ಅದು ಹರಿಯುವ ಬುಗ್ಗೆಯ ನೀರಿನಂತಿರುವುದು. 4. ಅವರು ಈ ಲೋಕದ ಜನರೊಂದಿಗೆ ಬೆಳೆಯುವರು. ಅವರು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದಂತಿರುವರು. 5. “ಒಬ್ಬನು: ‘ನಾನು ಯೆಹೋವನಿಗೆ ಸೇರಿದವನು’ ಎಂದು ಹೇಳುತ್ತಾನೆ. ಇನ್ನೊಬ್ಬನು ಯಾಕೋಬನ ಹೆಸರನ್ನು ಬಳಸುವನು. ಮತ್ತೊಬ್ಬನು, ‘ನಾನು ಯೆಹೋವನವನು’ ಎಂದು ಸಹಿ ಹಾಕುವನು. ಮತ್ತೊಬ್ಬನು, ನಾನು ‘ಇಸ್ರೇಲನು’ ಎಂಬ ಹೆಸರನ್ನು ಬಳಸಿಕೊಳ್ಳುವನು.” 6. ಯೆಹೋವನು ಇಸ್ರೇಲರ ಅರಸನಾಗಿದ್ದಾನೆ. ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ರಕ್ಷಿಸುತ್ತಾನೆ. ಆತನು ಹೇಳುವುದೇನೆಂದರೆ: “ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. 7. ನನ್ನಂತಹ ಬೇರೆ ದೇವರುಗಳಿಲ್ಲ. ಬೇರೆ ದೇವರುಗಳು ಇದ್ದರೆ ಅವು ಈಗ ಮಾತನಾಡಲಿ. ಆ ದೇವರುಗಳು ಬಂದು ತಾವು ನನ್ನಂತಿರುವುದಾಗಿ ರುಜುವಾತು ಮಾಡಲಿ. ಎಂದೆಂದಿಗೂ ಇರುವ ಈ ಜನರನ್ನು ನಾನು ಸೃಷ್ಟಿಸಿದಂದಿನಿಂದ ಏನಾಯಿತೆಂಬುದನ್ನು ನನಗೆ ತಿಳಿಸಬೇಕು. ಆ ದೇವರು ಮುಂದೆ ಸಂಭವಿಸಲಿಕ್ಕಿರುವ ವಿಷಯಗಳನ್ನು ತಿಳಿಸಬೇಕು. 8. “ನೀವು ಭಯಪಡಬೇಡಿ, ಚಿಂತಿಸಬೇಡಿ. ನಾನು ಭವಿಷ್ಯದ ಸಂಭವಗಳನ್ನು ಯಾವಾಗಲೂ ನಿಮಗೆ ತಿಳಿಸುತ್ತಾ ಬಂದಿದ್ದೇನೆ. ನೀವೇ ನನ್ನ ಸಾಕ್ಷಿಗಳು. ನನ್ನ ಹೊರತು ಬೇರೆ ದೇವರುಗಳಿಲ್ಲ. ನನ್ನ ಹೊರತು ಬೇರೆ ಯಾವ ‘ಬಂಡೆ’ಯೂ ಇಲ್ಲ. ನಾನೊಬ್ಬನೇ!” 9. {ಸುಳ್ಳುದೇವರುಗಳು ಪ್ರಯೋಜನಕ್ಕೆ ಬಾರದವುಗಳು} ಜನರು ವಿಗ್ರಹಗಳನ್ನು ಮಾಡಿಕೊಳ್ಳುವರು. ಆದರೆ ಅವು ನಿಷ್ಪ್ರಯೋಜಕವಾದ ವಸ್ತುಗಳಾಗಿವೆ. ಜನರು ಆ ವಿಗ್ರಹಗಳನ್ನು ಪ್ರೀತಿಸುತ್ತಾರೆ. ಆದರೆ ಅವುಗಳು ಯಾವ ಪ್ರಯೋಜನಕ್ಕೂ ಬಾರವು. ಆ ಜನರು ಆ ವಿಗ್ರಹದ ಸಾಕ್ಷಿಗಳಾಗಿದ್ದಾರೆ. ಆದರೆ ಅವುಗಳಿಗೆ ದೃಷ್ಟಿ ಇಲ್ಲ. ಅವುಗಳಿಗೆ ಏನೂ ಗೊತ್ತಿಲ್ಲ. ತಮ್ಮ ಕಾರ್ಯಗಳು ನಾಚಿಕೆಗೆಟ್ಟವುಗಳೆಂಬ ತಿಳುವಳಿಕೆಯೂ ಅವರಲ್ಲಿಲ್ಲ. 10. ಈ ಸುಳ್ಳುದೇವರುಗಳನ್ನು ಮಾಡಿದವರ್ಯಾರು? ಇಂಥ ಉಪಯೋಗವಿಲ್ಲದ ವಿಗ್ರಹಗಳನ್ನು ಮಾಡಿದವರ್ಯಾರು? 11. ಕುಶಲಕರ್ಮಿಗಳು ಆ ದೇವರುಗಳನ್ನು ಮಾಡಿದರು. ಆ ಕುಶಲಕರ್ಮಿಗಳೆಲ್ಲಾ ಜನರೇ, ಅವರು ದೇವರುಗಳಲ್ಲ. ಆ ದೇವರುಗಳೆಲ್ಲಾ ಒಟ್ಟಾಗಿ ಸೇರಿ ತಮ್ಮೊಳಗೆ ಮಾತಾಡಿಕೊಂಡರೆ ಆಗ ಅವುಗಳಿಗೆ ನಾಚಿಕೆಯೂ ಭಯವೂ ಉಂಟಾಗುವದು. 12. ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು. 13. ಇನ್ನೊಬ್ಬ ಕುಶಲಕರ್ಮಿಯು ತನ್ನ ನೂಲಿನಿಂದಲೂ ಅಡಿಕೋಲುಗಳಿಂದಲೂ ಮರದ ಮೇಲೆ ಗುರುತು ಮಾಡುವನು. ತಾನು ಎಲ್ಲಿ ಮರವನ್ನು ತುಂಡುಮಾಡಬೇಕೆಂದು ಇದರಿಂದ ಗೊತ್ತುಪಡಿಸಿಕೊಳ್ಳುತ್ತಾನೆ. ಅವನು ತನ್ನ ಉಳಿಗಳಿಂದ ಒಂದು ವಿಗ್ರಹವನ್ನು ಮನುಷ್ಯಾಕಾರದಲ್ಲಿ ಕೆತ್ತುತ್ತಾನೆ. ಈ ವಿಗ್ರಹವು ಬೇರೆ ಏನೂ ಮಾಡದೆ ಮನೆಯೊಳಗೆ ಇಟ್ಟ ಸ್ಥಳದಲ್ಲಿಯೇ ಇರುವದು. 14. ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು, ತುರಾಯಿ ಮರಗಳನ್ನು, ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.) 15. ಅವನು ಮರವನ್ನು ಕಡಿದು, ತನ್ನನ್ನು ಬೆಚ್ಚಗೆ ಮಾಡಲು ಅಗ್ಗಿಷ್ಟಿಕೆಗಾಗಿ ಉಪಯೋಗಿಸುತ್ತಾನೆ; ಸಣ್ಣಸಣ್ಣ ತುಂಡುಗಳನ್ನಾಗಿ ಮಾಡಿ ಆಹಾರವನ್ನು ಬೇಯಿಸುತ್ತಾನೆ; ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾನೆ. ರೊಟ್ಟಿಯನ್ನು ಸುಡುತ್ತಾನೆ; ಉಳಿದ ಮರದ ತುಂಡಿನಿಂದ ಒಂದು ವಿಗ್ರಹವನ್ನು ಕೆತ್ತುತ್ತಾನೆ. ಆ ವಿಗ್ರಹಕ್ಕೆ ದೇವರೆಂದು ಹೇಳುತ್ತಾನೆ; ಆ ದೇವರು ಮನುಷ್ಯನು ತಯಾರಿಸಿದ ವಿಗ್ರಹ. ಆದರೆ ಅವನು ಆ ವಿಗ್ರಹದ ಮುಂದೆ ಅಡ್ಡಬೀಳುವನು. 16. ಮರದ ಅರ್ಧಭಾಗವನ್ನು ಬೆಂಕಿಯಲ್ಲಿ ಉರಿಸುವನು; ಆ ಬೆಂಕಿಯಲ್ಲಿ ಮಾಂಸವನ್ನು ಬೇಯಿಸಿ ಹೊಟ್ಟೆತುಂಬಾ ತಿನ್ನುವನು; ಆ ಮರದ ಸೌದೆಯನ್ನು ಸುಟ್ಟು ಚಳಿಕಾಯಿಸಿಕೊಳ್ಳುವನು. ಆಗ ಅವನು, “ಈಗ ನನಗೆ ಬೆಚ್ಚಗಾಯಿತು. ಬೆಂಕಿಯ ಪ್ರಕಾಶದಲ್ಲಿ ನಾನು ನೋಡಬಲ್ಲೆನು!” ಎಂದು ಹೇಳುವನು. 17. ಅದರಲ್ಲಿ ಸ್ವಲ್ಪ ಮರದ ತುಂಡು ಉಳಿದಿರುತ್ತದೆ. ಅದನ್ನು ನೋಡಿ ಆ ಮನುಷ್ಯನು ಅದರಿಂದ ವಿಗ್ರಹವನ್ನು ತಯಾರಿಸುವನು. ಅದನ್ನು ದೇವರೆಂದು ಕರೆಯುವನು. ಅದರ ಮುಂದೆ ಅಡ್ಡಬಿದ್ದು ಆರಾಧಿಸುವನು. ಅದರ ಮುಂದೆ ಪ್ರಾರ್ಥಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಹೇಳುತ್ತಾನೆ. 18. ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ. 19. “ನಾನು ಆ ಮರದ ತುಂಡುಗಳನ್ನು ಬೆಂಕಿಯಲ್ಲಿ ಉರಿಸಿ ಚಳಿಕಾಯಿಸಿಕೊಂಡೆನು; ಅದರ ಕೆಂಡದಲ್ಲಿ ರೊಟ್ಟಿ ಸುಟ್ಟೆನು; ಮಾಂಸ ಬೇಯಿಸಿದೆನು; ಆ ಮಾಂಸವನ್ನು ತಿಂದೆನು; ಉಳಿದ ಮರದ ತುಂಡಿನಿಂದ ಅಸಹ್ಯವಾದ ಈ ವಿಗ್ರಹವನ್ನು ಮಾಡಿದೆನು; ನಾನು ಮರದ ತುಂಡನ್ನು ಪೂಜಿಸುತ್ತೇನೆ” ಎಂದು ಅವರೆಂದೂ ಯೋಚಿಸುವದಿಲ್ಲ. 20. ಆ ಮನುಷ್ಯನಿಗೆ ತಾನು ಮಾಡುತ್ತಿರುವುದೇ ತಿಳಿಯದು. ಅವನು ಗಲಿಬಿಲಿಗೊಂಡಿದ್ದಾನೆ. ಅವನ ಹೃದಯವು ಅವನನ್ನು ತಪ್ಪುದಾರಿಯಲ್ಲಿ ನಡಿಸುತ್ತದೆ. ಅವನು ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು. ತಾನು ಮಾಡುತ್ತಿರುವುದು ತಪ್ಪೆಂದು ಅವನು ಕಾಣಲಾರನು. “ನನ್ನ ಕೈಯಲ್ಲಿರುವ ಈ ವಿಗ್ರಹವು ಸುಳ್ಳು ದೇವರಾಗಿದೆ” ಎಂದು ಅವನು ಹೇಳುವದಿಲ್ಲ. 21. {ನಿಜದೇವರಾದ ಯೆಹೋವನು ಇಸ್ರೇಲರ ಸಹಾಯಕನು} “ಯಾಕೋಬೇ, ಈ ವಿಷಯಗಳನ್ನು ನೆನಪಿನಲ್ಲಿಟ್ಟುಕೊ! ಇಸ್ರೇಲೇ, ನೀನು ನನ್ನ ಸೇವಕನೆಂಬುದನ್ನು ನೆನಪಿನಲ್ಲಿಟ್ಟುಕೊ! ನಾನೇ ನಿನ್ನನ್ನು ನಿರ್ಮಿಸಿದೆನು; ನೀನೇ ನನ್ನ ಸೇವಕನು. ಆದ್ದರಿಂದ ಇಸ್ರೇಲೇ, ನನ್ನನ್ನು ಮರೆತುಬಿಡಬೇಡ. 22. ನಿನ್ನ ಪಾಪಗಳು ದೊಡ್ಡ ಮೋಡದಂತಿವೆ. ಆದರೆ ನಾನು ಅವುಗಳನ್ನು ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಗಾಳಿಯಲ್ಲಿ ಹಾರಿಹೋದ ಮೋಡದಂತೆ ಹಾರಿಸಿಬಿಟ್ಟಿದ್ದೇನೆ. ನಾನು ನಿನ್ನನ್ನು ರಕ್ಷಿಸಿದೆನು. ಆದ್ದರಿಂದ ನನ್ನ ಬಳಿಗೆ ಹಿಂತಿರುಗಿ ಬಾ.” 23. ಯೆಹೋವನು ಮಹಾ ಕಾರ್ಯಗಳನ್ನು ಮಾಡಿದ್ದರಿಂದ ಆಕಾಶವು ಹರ್ಷಿಸುತ್ತದೆ. ಭೂಮಿಯೂ ಭೂಮಿಯ ಅಧೋಭಾಗವೂ ಸಂತೋಷಿಸುತ್ತದೆ. ಪರ್ವತಗಳು ಕೃತಜ್ಞತಾಸ್ತುತಿಗಳನ್ನು ಮಾಡುತ್ತವೆ. ಅರಣ್ಯದಲ್ಲಿರುವ ಎಲ್ಲಾ ಮರಗಳು ಹರ್ಷಿಸುತ್ತವೆ. ಯಾಕೆಂದರೆ ಯೆಹೋವನು ಯಾಕೋಬನನ್ನು ರಕ್ಷಿಸಿದನು, ಇಸ್ರೇಲಿಗೆ ಆತನು ಅದ್ಭುತಕಾರ್ಯವನ್ನು ಮಾಡಿದ್ದಾನೆ. 24. ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.” 25. ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ. 26. ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ. 27. {ಯೆಹೂದದ ಪುನರ್ ನಿರ್ಮಾಣದಲ್ಲಿ ಸೈರಸನ ಪಾತ್ರ} ಆಳವಾದ ನೀರಿಗೆ, “ಒಣಗಿಹೋಗು, ನಿನ್ನ ಬುಗ್ಗೆಗಳನ್ನು ನಾನು ಬತ್ತಿಸುವೆನು” ಎಂದು ಯೆಹೋವನು ಅನ್ನುತ್ತಾನೆ. 28. ಸೈರಸನಿಗೆ ಯೆಹೋವನು ಹೀಗೆನ್ನುತ್ತಾನೆ, “ನೀನೇ ನನ್ನ ಕುರುಬನು. ನಾನು ಬಯಸುವ ಕಾರ್ಯಗಳನ್ನು ನೀನು ಮಾಡುವೆ. ನೀನು ಜೆರುಸಲೇಮಿಗೆ, ‘ನೀನು ಕಟ್ಟಲ್ಪಡುವೆ’ ಎಂದೂ ದೇವಾಲಯಕ್ಕೆ ‘ನಿನ್ನ ಅಸ್ತಿವಾರವು ಮತ್ತೆ ಹಾಕಲ್ಪಡುವದು’ ಎಂದೂ ಹೇಳುವೆ.”
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References