ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಯೆಶಾಯ

ಯೆಶಾಯ ಅಧ್ಯಾಯ 45

ಇಸ್ರೇಲಿಗೆ ಸ್ವಾತಂತ್ರ್ಯ ಕೊಡಲು ಯೆಹೋವನಿಂದ ಸೈರಸನ ಆಯ್ಕೆ 1 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”
2 ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು.
ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.
3 ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು.
ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.
4 ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ.
ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.
5 ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ.
ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.
6 ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದುಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ.
ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.
7 ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು. 8 “ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ.
ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ.
ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”
ದೇವರು ತನ್ನ ಸೃಷ್ಟಿಯನ್ನು ನಿಯಂತ್ರಿಸುವನು 9 “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ. 10 ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.’ ” 11 ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?
12 ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ.
ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.
13 ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ.
ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ.
ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.”
ಇದು ಸರ್ವಶಕ್ತನಾದ ಯೆಹೋವನ ನುಡಿ.
14 ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ.
ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು.
ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ.
ಬೇರೆ ದೇವರುಗಳೇ ಇಲ್ಲ’ ” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
15 ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.
16 ಎಷ್ಟೋ ಜನರು ಸುಳ್ಳುದೇವರುಗಳನ್ನು ರೂಪಿಸಿಕೊಂಡು ನಿರಾಶರಾಗುವರು. ಅವರೆಲ್ಲರೂ ನಾಚಿಕೆಗೆ ಗುರಿಯಾಗುವರು.
17 ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.
18 ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ.
ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು.
“ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.
19 ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ.
ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ.
ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.
ಯೆಹೋವನೊಬ್ಬನೇ ದೇವರು 20 “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು. 21 ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ! 22 ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು. 23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು. 24 ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’ ” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು. 25 ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.
ಇಸ್ರೇಲಿಗೆ ಸ್ವಾತಂತ್ರ್ಯ ಕೊಡಲು ಯೆಹೋವನಿಂದ ಸೈರಸನ ಆಯ್ಕೆ 1 ತಾನು ಆರಿಸಿರುವ ಅರಸನಾದ ಸೈರಸನಿಗೆ ಯೆಹೋವನು ಹೇಳುವುದೇನೆಂದರೆ: “ನಾನು ಸೈರಸನ ಬಲಗೈಯನ್ನು ಹಿಡಿಯುವೆನು. ಅರಸರುಗಳಿಂದ ಅವರ ಅಧಿಕಾರವನ್ನು ತೆಗೆದುಬಿಡುವಂತೆ ಅವನಿಗೆ ಸಹಾಯ ಮಾಡುವೆನು. ನಗರದ್ವಾರಗಳು ಅವನ ಮುನ್ನುಗ್ಗುವಿಕೆಯನ್ನು ನಿಲ್ಲಿಸದು. ನಗರದ್ವಾರವನ್ನು ತೆರೆದು ಸೈರಸನು ಒಳಗೆ ಪ್ರವೇಶಿಸುವಂತೆ ಮಾಡುವೆನು.”
.::. 2 ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು.
ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.
.::. 3 ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು.
ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.
.::. 4 ನಾನು ನನ್ನ ಸೇವಕನಾದ ಯಾಕೋಬನಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ. ನಾನು ಆರಿಸಿಕೊಂಡ ಜನಾಂಗವಾದ ಇಸ್ರೇಲಿಗಾಗಿ ಇದನ್ನೆಲ್ಲಾ ಮಾಡುತ್ತಿದ್ದೇನೆ.
ಸೈರಸನೇ, ನಾನು ನಿನ್ನ ಹೆಸರೆತ್ತಿ ಕರೆದಿದ್ದೇನೆ. ನೀನು ನನ್ನನ್ನು ತಿಳಿಯದವನಾಗಿದ್ದರೂ ನಾನು ನಿನಗೆ ಬಿರುದನ್ನು ಅನುಗ್ರಹಿಸಿದ್ದೇನೆ.
.::. 5 ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ.
ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.
.::. 6 ನಾನೊಬ್ಬನೇ ದೇವರೆಂದು ಎಲ್ಲರೂ ತಿಳಿದುಕೊಳ್ಳಲಿ ಎಂದು ನಾನು ಇದನ್ನೆಲ್ಲಾ ಮಾಡುತ್ತಿದ್ದೇನೆ.
ಪೂರ್ವದಿಂದ ಪಶ್ಚಿಮದ ತನಕ ಜನರೆಲ್ಲರೂ ನಾನೇ ದೇವರೆಂದೂ ನನ್ನ ಹೊರತು ಬೇರೆ ದೇವರಿಲ್ಲವೆಂದೂ ತಿಳಿದುಕೊಳ್ಳುವರು.
.::. 7 ಬೆಳಕನ್ನೂ ಕತ್ತಲೆಯನ್ನೂ ಉಂಟುಮಾಡಿದವನು ನಾನೇ. ಸಮಾಧಾನವನ್ನು ತರುವವನೂ ತೊಂದರೆಗಳನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವೆಲ್ಲವನ್ನು ಮಾಡುವೆನು. .::. 8 “ಆಕಾಶದಲ್ಲಿರುವ ಮೋಡಗಳು ಒಳ್ಳೆಯತನವನ್ನು ಭೂಮಿಯ ಮೇಲೆ ಮಳೆಯಂತೆ ಸುರಿಸಲಿ.
ಭೂಮಿಯು ತೆರೆಯಲ್ಪಡಲಿ; ರಕ್ಷಣೆಯು ಬೆಳೆಯಲಿ.
ಒಳ್ಳೆತನವು ಅದರೊಂದಿಗೆ ಬೆಳೆಯಲಿ. ಯೆಹೋವನೆಂಬ ನಾನೇ ಅವನನ್ನು ನಿರ್ಮಿಸಿದೆನು.”
.::. ದೇವರು ತನ್ನ ಸೃಷ್ಟಿಯನ್ನು ನಿಯಂತ್ರಿಸುವನು 9 “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ. .::. 10 ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.’ ” .::. 11 ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?
.::. 12 ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ.
ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.
.::. 13 ನಾನು ಸೈರಸನಿಗೆ ಸುಕಾರ್ಯಗಳನ್ನು ಮಾಡಲು ಶಕ್ತಿಯನ್ನು ಕೊಟ್ಟಿದ್ದೇನೆ. ಅವನ ಕೆಲಸಗಳನ್ನೆಲ್ಲಾ ಸುಲಭಗೊಳಿಸುತ್ತೇನೆ.
ಸೈರಸನು ನನ್ನ ಪಟ್ಟಣವನ್ನು ಮತ್ತೆ ಕಟ್ಟುವನು; ನನ್ನ ಜನರಿಗೆ ಸ್ವಾತಂತ್ರ್ಯವನ್ನು ಕೊಡುವನು. ನನ್ನ ಜನರನ್ನು ಸೈರಸನು ನನಗೆ ಮಾರಿಬಿಡುವದಿಲ್ಲ.
ಈ ಕಾರ್ಯಗಳನ್ನೆಲ್ಲ ಮಾಡುವದಕ್ಕೆ ನಾನು ಅವನಿಗೆ ಹಣ ಕೊಡುವ ಅವಶ್ಯವಿಲ್ಲ. ಜನರು ಸ್ವತಂತ್ರರಾಗುವರು. ಇದಕ್ಕಾಗಿ ನನಗೇನೂ ಖರ್ಚು ಇಲ್ಲ.”
ಇದು ಸರ್ವಶಕ್ತನಾದ ಯೆಹೋವನ ನುಡಿ.
.::. 14 ಯೆಹೋವನು ಹೇಳುವುದೇನೆಂದರೆ, “ಈಜಿಪ್ಟ್ ಮತ್ತು ಇಥಿಯೋಪ್ಯ ಐಶ್ವರ್ಯವುಳ್ಳ ರಾಜ್ಯಗಳಾಗಿವೆ. ಇಸ್ರೇಲೇ, ನೀನು ಆ ಐಶ್ವರ್ಯವನ್ನು ಪಡೆದುಕೊಳ್ಳುವೆ.
ಸೆಬಾದ ಉನ್ನತ ಜನರು ನಿನ್ನವರಾಗುವರು. ಅವರು ತಮ್ಮ ಕುತ್ತಿಗೆಗಳಲ್ಲಿ ಸಂಕೋಲೆಗಳಿಂದ ಬಂಧಿತರಾಗಿ ನಿಮ್ಮ ಹಿಂದೆ ನಡೆಯುವರು.
ಅವರು ನಿಮ್ಮ ಮುಂದೆ ಅಡ್ಡಬಿದ್ದು, ‘ಇಸ್ರೇಲೇ, ದೇವರು ನಿಜವಾಗಿ ನಿಮ್ಮೊಂದಿಗಿದ್ದಾನೆ.
ಬೇರೆ ದೇವರುಗಳೇ ಇಲ್ಲ’ ” ಎಂದು ನಿಮ್ಮಲ್ಲಿ ಪ್ರಾರ್ಥಿಸುವರು.
.::. 15 ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.
.::. 16 ಎಷ್ಟೋ ಜನರು ಸುಳ್ಳುದೇವರುಗಳನ್ನು ರೂಪಿಸಿಕೊಂಡು ನಿರಾಶರಾಗುವರು. ಅವರೆಲ್ಲರೂ ನಾಚಿಕೆಗೆ ಗುರಿಯಾಗುವರು.
.::. 17 ಆದರೆ ಇಸ್ರೇಲು ಯೆಹೋವನಿಂದ ರಕ್ಷಿಸಲ್ಪಡುವದು. ಆ ರಕ್ಷಣೆಯು ಶಾಶ್ವತವಾದದ್ದು. ಇನ್ನೆಂದಿಗೂ ಇಸ್ರೇಲ್ ನಾಚಿಕೆಗೆ ಒಳಗಾಗುವದಿಲ್ಲ.
.::. 18 ಯೆಹೋವನು ದೇವರಾಗಿದ್ದಾನೆ. ಆತನು ಭೂಮ್ಯಾಕಾಶಗಳನ್ನು ಉಂಟುಮಾಡಿದ್ದಾನೆ. ಆತನು ಭೂಮಿಯನ್ನು ಅದರ ಸ್ಥಾನದಲ್ಲಿ ಇಟ್ಟಿದ್ದಾನೆ.
ಆತನು ಈ ಲೋಕವನ್ನು ಸೃಷ್ಟಿಸಿದ್ದು ಅದು ಶೂನ್ಯವಾಗಿರಲೆಂದಲ್ಲ. ಅದು ಜನಭರಿತವಾಗಿರಲೆಂದೇ ಸೃಷ್ಟಿಸಿದನು.
“ನಾನೇ ಯೆಹೋವನು, ನನ್ನ ಹೊರತು ಬೇರೆ ದೇವರುಗಳಿಲ್ಲ.
.::. 19 ನಾನು ಗುಪ್ತವಾಗಿ ಮಾತನಾಡದೆ ಬಹಿರಂಗವಾಗಿಯೇ ಮಾತನಾಡಿದ್ದೇನೆ. ಈ ಭೂಮಿಯ ಕತ್ತಲೆಯ ಸ್ಥಳದಲ್ಲಿ ನನ್ನ ಮಾತುಗಳನ್ನು ಅಡಗಿಸಿಡಲಿಲ್ಲ.
ನನ್ನನ್ನು ಕಂಡುಹಿಡಿಯಲು ಗುಪ್ತಸ್ಥಳದಲ್ಲಿ ಹುಡುಕಿರಿ ಎಂದು ನಾನು ಯಾಕೋಬನ ಜನರಿಗೆ ಹೇಳಲಿಲ್ಲ.
ನಾನೇ ಯೆಹೋವನು. ನಾನು ಸತ್ಯವನ್ನೇ ಆಡುವೆನು.
.::. ಯೆಹೋವನೊಬ್ಬನೇ ದೇವರು 20 “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು. .::. 21 ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ! .::. 22 ದೂರದೇಶದಲ್ಲಿರುವ ಜನರೇ, ನೀವು ಸುಳ್ಳುದೇವರನ್ನು ಅವಲಂಬಿಸುವದನ್ನು ನಿಲ್ಲಿಸಿರಿ. ನನ್ನನ್ನು ಹಿಂಬಾಲಿಸಿ ರಕ್ಷಣೆ ಹೊಂದಿರಿ. ನಾನೇ ದೇವರು, ಬೇರೆ ದೇವರುಗಳೇ ಇಲ್ಲ. ನಾನೊಬ್ಬನೇ ದೇವರು. .::. 23 “ನನ್ನ ಪರಾಕ್ರಮದಿಂದ ನಾನು ವಾಗ್ದಾನ ಮಾಡುತ್ತೇನೆ. ನನ್ನ ಆಜ್ಞೆಯು ನ್ಯಾಯವಾದದ್ದೂ ನೀತಿಯುಳ್ಳದ್ದೂ ಆಗಿದೆ. ಇಂಥದ್ದು ನಾನು ಆಜ್ಞಾಪಿಸಿದಂತೆಯೇ ಸಂಭವಿಸುವದು. ಎಲ್ಲಾ ಜನರು ನನ್ನ ಮುಂದೆ ಅಡ್ಡಬೀಳುವರೆಂದು ನಾನು ವಾಗ್ದಾನ ಮಾಡುತ್ತೇನೆ. ಪ್ರತಿಯೊಬ್ಬನೂ ನನ್ನನ್ನು ಹಿಂಬಾಲಿಸಲು ಪ್ರತಿಜ್ಞೆ ಮಾಡುವನು. .::. 24 ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’ ” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು. .::. 25 ಇಸ್ರೇಲರು ಧರ್ಮದಲ್ಲಿ ನಡೆಯುವಂತೆ ಯೆಹೋವನು ಮಾಡುವನು. ಜನರು ಯೆಹೋವನ ಬಗ್ಗೆ ಬಹಳವಾಗಿ ಹೆಚ್ಚಳಪಡುವರು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References