ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 94

1 ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು!
2 ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು.
3 ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು?
4 ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು?
5 ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ.
6 ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು.
7 ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ. 8 ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ?
ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು.
9 ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ?
10 ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ.
11 ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ. 12 ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.
13 ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ.
14 ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ.
15 ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು. 16 ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ.
17 ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ, ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು.
18 ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು.
19 ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ. 20 ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು.
21 ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು.
22 ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ!
23 ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.
1. ಯೆಹೋವನೇ, ನೀನು ಸೇಡು ತೀರಿಸಿಕೊಳ್ಳುವ ದೇವರು! ಸೇಡು ತೀರಿಸಿಕೊಳ್ಳುವ ದೇವರೇ ಪ್ರತ್ಯಕ್ಷನಾಗು! 2. ಇಡೀಲೋಕದ ನ್ಯಾಯಾಧಿಪತಿ ನೀನೇ. ಅಹಂಕಾರಿಗಳಿಗೆ ತಕ್ಕ ದಂಡನೆಯನ್ನು ಕೊಡು. 3. ಯೆಹೋವನೇ, ದುಷ್ಟಜನರು ಎಷ್ಟರವರೆಗೆ ಪರಿಹಾಸ್ಯ ಮಾಡುವರು? ಇನ್ನೆಷ್ಟರವರೆಗೆ ಪರಿಹಾಸ್ಯ ಮಾಡುವರು? 4. ಆ ಅಪರಾಧಿಗಳು ತಮ್ಮ ದುಷ್ಕೃತ್ಯಗಳ ಬಗ್ಗೆ ಇನ್ನೆಷ್ಟರವರೆಗೆ ಜಂಬ ಕೊಚ್ಚಿಕೊಳ್ಳುವರು? 5. ಯೆಹೋವನೇ, ಅವರು ನಿನ್ನ ಜನರಿಗೆ ಕೇಡುಮಾಡಿದ್ದಾರೆ. ಅವರು ನಿನ್ನ ಜನರನ್ನು ಹಿಂಸೆಪಡಿಸಿದ್ದಾರೆ. 6. ನಮ್ಮ ದೇಶದಲ್ಲಿ ವಾಸವಾಗಿರುವ ವಿಧವೆಯರನ್ನೂ ವಿದೇಶಿಯರನ್ನೂ ಆ ದುಷ್ಟರು ಕೊಲ್ಲುತ್ತಾರೆ. ಅವರು ಅನಾಥ ಮಕ್ಕಳನ್ನೂ ಕೊಲೆ ಮಾಡುವರು. 7. ಆ ದುಷ್ಕೃತ್ಯಗಳು ಯೆಹೋವನಿಗೆ ಕಾಣದೆಂದು ಅವರು ಹೇಳಿಕೊಳ್ಳುತ್ತಾರೆ. ಅವುಗಳು ಇಸ್ರೇಲಿನ ದೇವರಿಗೆ ತಿಳಿಯದೆಂದು ಅವರು ಹೇಳುತ್ತಾರೆ. 8. ದುಷ್ಟರೇ, ನೀವು ಮೂಢರಾಗಿದ್ದೀರಿ! ನೀವು ಪಾಠವನ್ನು ಕಲಿತುಕೊಳ್ಳುವುದು ಯಾವಾಗ? ದುಷ್ಟರೇ, ನೀವು ಬಹು ದಡ್ಡರಾಗಿದ್ದೀರಿ! ಅರ್ಥಮಾಡಿಕೊಳ್ಳಲು ನೀವು ಪ್ರಯತ್ನಿಸಬೇಕು. 9. ಕಿವಿಗಳನ್ನು ಸೃಷ್ಟಿಸಿದಾತನಿಗೆ, ಕೇಳುವುದಿಲ್ಲವೇ? ಕಣ್ಣುಗಳನ್ನು ಸೃಷ್ಟಿಸಿದಾತನಿಗೆ ಕಾಣುವುದಿಲ್ಲವೇ? 10. ಜನಾಂಗಗಳನ್ನು ಶಿಕ್ಷಿಸುವಾತನು ದೇವರೇ. ಜನರಿಗೆ ಉಪದೇಶಿಸುವವನೂ ಆತನೇ. 11. ಮನುಷ್ಯರ ಆಲೋಚನೆಗಳೆಲ್ಲಾ ಆತನಿಗೆ ತಿಳಿದಿದೆ. ಮನುಷ್ಯರು ಕೇವಲ ಉಸಿರೆಂಬುದು ಆತನಿಗೆ ತಿಳಿದಿದೆ. 12. ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು. 13. ಆಪತ್ತಿನಲ್ಲಿಯೂ ಸಮಾಧಾನದಿಂದಿರಲು ನೀನು ಅವನಿಗೆ ಸಹಾಯಮಾಡುವೆ. ದುಷ್ಟರು ಸಮಾಧಿಗಳಿಗೆ ಸೇರುವವರೆಗೆ ಸಮಾಧಾನದಿಂದಿರಲು ನೀನು ಅವನಿಗೆ ನೆರವು ನೀಡುವೆ. 14. ಯೆಹೋವನು ತನ್ನ ಜನರನ್ನು ತೊರೆದುಬಿಡುವುದಿಲ್ಲ. ಆತನು ತನ್ನ ಜನರನ್ನು ನಿಸ್ಸಹಾಯಕರನ್ನಾಗಿ ಮಾಡುವುದಿಲ್ಲ. 15. ನ್ಯಾಯವು ನೀತಿಯೊಂದಿಗೆ ಮರಳಿ ಬರುವುದು. ಆಗ ಜನರು ಒಳ್ಳೆಯವರೂ ಯಥಾರ್ಥವಂತರೂ ಆಗುವರು. 16. ದುಷ್ಟರಿಗೆ ವಿರೋಧವಾಗಿ ಯಾರೂ ನನಗೆ ಸಹಾಯಮಾಡಲಿಲ್ಲ. ದುಷ್ಕೃತ್ಯಗಳನ್ನು ಮಾಡುವವರ ವಿರುದ್ಧವಾಗಿ ಯಾರೂ ನನ್ನೊಂದಿಗೆ ನಿಂತುಕೊಳ್ಳಲಿಲ್ಲ. 17. ಯೆಹೋವನು ನನಗೆ ಸಹಾಯಮಾಡಿಲ್ಲದಿದ್ದರೆ, ಇಷ್ಟರಲ್ಲೇ ಸಮಾಧಿ ಸೇರುತ್ತಿದ್ದೆನು. 18. ಯೆಹೋವನೇ, ಜಾರಿಹೋಗುತ್ತಿರುವೆ ಎಂದು ಮೊರೆಯಿಟ್ಟಾಗ ಆತನು ನನಗೆ ಆಧಾರ ನೀಡಿದನು. 19. ನಾನು ಚಿಂತೆಗಳಿಂದ ಗಲಿಬಿಲಿಗೊಂಡಿದ್ದಾಗ ನೀನು ನನ್ನನ್ನು ಸಂತೈಸಿ ಸಂತೋಷಪಡಿಸಿದೆ. 20. ದೇವರೇ, ಮೋಸಗಾರರಾದ ನ್ಯಾಯಾಧೀಶರಿಗೆ ಸಹಾಯಮಾಡಬೇಡ. ಅವರು ಕಾನೂನನ್ನು ಡೊಂಕು ಮಾಡಿ ಜನರನ್ನು ಹಿಂಸಿಸುವರು. 21. ಅವರು ನೀತಿವಂತರಿಗೆ ಎದುರಾಗಿ ನಿರಪರಾಧಿಗಳಿಗೆ ಮರಣದಂಡನೆ ವಿಧಿಸುವರು. 22. ನನಗಾದರೋ ಯೆಹೋವನು ಪರ್ವತದ ಮೇಲಿರುವ ಆಶ್ರಯಸ್ಥಾನವಾಗಿದ್ದಾನೆ. ನನ್ನ ಬಂಡೆಯಾಗಿರುವ ದೇವರು ನನಗೆ ಆಶ್ರಯಗಿರಿಯಾಗಿದ್ದಾನೆ! 23. ಆತನು ಆ ದುಷ್ಟ ನ್ಯಾಯಾಧೀಶರನ್ನು ಅವರ ದುಷ್ಕೃತ್ಯಗಳ ನಿಮಿತ್ತ ದಂಡಿಸುವನು. ಅವರ ಪಾಪಗಳ ನಿಮಿತ್ತ ದೇವರು ಅವರನ್ನು ನಾಶಮಾಡುವನು. ನಮ್ಮ ದೇವರಾದ ಯೆಹೋವನು ಆ ದುಷ್ಟ ನ್ಯಾಯಾಧೀಶರನ್ನು ನಾಶಮಾಡುವನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References