ಪವಿತ್ರ ಬೈಬಲ್

ಈಸೀ ಟು ರೀಡ್ ವರ್ಷನ್ (ESV)
ಪರಮ ಗೀತ

ಪರಮ ಗೀತ ಅಧ್ಯಾಯ 3

ಪ್ರಿಯತಮೆ 1 ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು.
ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ.
2 ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು.
ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, ಆದರೆ ಅವನು ಸಿಕ್ಕಲಿಲ್ಲ.
3 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು. 4 ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ.
ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.
ಪ್ರಿಯತಮೆ ಸ್ತ್ರೀಯರಿಗೆ 5 ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು
ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ.
ಜೆರುಸಲೇಮಿನ ಸ್ತ್ರೀಯರ ಮಾತುಗಳು 6 ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು?
ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ.
7 ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!
8 ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ. 9 ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ.
10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ.
ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ.
11 ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ.
ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.
1. {ಪ್ರಿಯತಮೆ} ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ. 2. ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, ಆದರೆ ಅವನು ಸಿಕ್ಕಲಿಲ್ಲ. 3. ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು. 4. ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು. 5. {ಪ್ರಿಯತಮೆ ಸ್ತ್ರೀಯರಿಗೆ} ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ. 6. {ಜೆರುಸಲೇಮಿನ ಸ್ತ್ರೀಯರ ಮಾತುಗಳು} ಮಹಾ ಜನಸಮೂಹದೊಡನೆ ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ. 7. ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು! 8. ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ. 9. ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ. 10. ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ. 11. ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.
  • ಪರಮ ಗೀತ ಅಧ್ಯಾಯ 1  
  • ಪರಮ ಗೀತ ಅಧ್ಯಾಯ 2  
  • ಪರಮ ಗೀತ ಅಧ್ಯಾಯ 3  
  • ಪರಮ ಗೀತ ಅಧ್ಯಾಯ 4  
  • ಪರಮ ಗೀತ ಅಧ್ಯಾಯ 5  
  • ಪರಮ ಗೀತ ಅಧ್ಯಾಯ 6  
  • ಪರಮ ಗೀತ ಅಧ್ಯಾಯ 7  
  • ಪರಮ ಗೀತ ಅಧ್ಯಾಯ 8  
×

Alert

×

Kannada Letters Keypad References