ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಹೋಶೇ

ಹೋಶೇ ಅಧ್ಯಾಯ 6

1 ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. 2 ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು. 3 ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು. 4 ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ. 5 ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು. 6 ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ. 7 ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ. 8 ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ. 9 ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ. 10 ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ. 11 ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
1. ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ. 2. ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು. 3. ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು. 4. ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ. 5. ಆದದರಿಂದ ನಾನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು ನನ್ನ ಬಾಯಿ ಮಾತುಗಳಿಂದ ಅವರನ್ನು ಕೊಂದುಹಾಕಿದ್ದೇನೆ; ನಿನ್ನ ನ್ಯಾಯತೀರ್ಪುಗಳು ಬೆಳಕಿನ ಹಾಗೆ ಹೊರಟವು. 6. ನಾನು ಬಲಿಯನ್ನಲ್ಲ ಕರುಣೆಯನ್ನೇ ಮತ್ತು ದಹನ ಬಲಿಗಳಿಗಿಂತ ದೇವರ ತಿಳುವಳಿಕೆಯನ್ನೇ ಹೆಚ್ಚಾಗಿ ಅಪೇಕ್ಷಿಸಿದ್ದೇನೆ. 7. ಆದರೆ ಅವರು ಒಡಂಬಡಿಕೆಯನ್ನು ವಿಾರಿದ ಮನುಷ್ಯರ ಹಾಗೆ ಇದ್ದಾರೆ; ಅಲ್ಲಿ ಅವರು ನನಗೆ ವಿರುದ್ಧವಾಗಿ ದ್ರೋಹದಿಂದ ನಡೆದುಕೊಂಡಿದ್ದಾರೆ. 8. ಗಿಲ್ಯಾದು ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ. 9. ಕಳ್ಳರ ಗುಂಪು ಮನುಷ್ಯನಿಗೋಸ್ಕರ ಕಾಯುವ ಪ್ರಕಾರ ಯಾಜಕರ ಗುಂಪು ಒಪ್ಪಿಗೆಯಿಂದ ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ. 10. ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರ ವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯಾ ಮಿನ ವ್ಯಭಿಚಾರವು ನಡೆಯುತ್ತದೆ; ಇಸ್ರಾಯೇಲು ಹೊಲೆಯಾಗಿದೆ. 11. ಹಾಗೂ ಓ ಯೆಹೂದವೇ, ನಾನು ನನ್ನ ಜನರನ್ನು ಅವರ ಸೆರೆಯಿಂದ ಬರಮಾಡಿದಾಗ ಆತನು ಸುಗ್ಗಿಯನ್ನು ನಿನಗೆ ನೇಮಿಸಿದ್ದಾನೆ.
  • ಹೋಶೇ ಅಧ್ಯಾಯ 1  
  • ಹೋಶೇ ಅಧ್ಯಾಯ 2  
  • ಹೋಶೇ ಅಧ್ಯಾಯ 3  
  • ಹೋಶೇ ಅಧ್ಯಾಯ 4  
  • ಹೋಶೇ ಅಧ್ಯಾಯ 5  
  • ಹೋಶೇ ಅಧ್ಯಾಯ 6  
  • ಹೋಶೇ ಅಧ್ಯಾಯ 7  
  • ಹೋಶೇ ಅಧ್ಯಾಯ 8  
  • ಹೋಶೇ ಅಧ್ಯಾಯ 9  
  • ಹೋಶೇ ಅಧ್ಯಾಯ 10  
  • ಹೋಶೇ ಅಧ್ಯಾಯ 11  
  • ಹೋಶೇ ಅಧ್ಯಾಯ 12  
  • ಹೋಶೇ ಅಧ್ಯಾಯ 13  
  • ಹೋಶೇ ಅಧ್ಯಾಯ 14  
×

Alert

×

Kannada Letters Keypad References