ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಆದಿಕಾಂಡ

ಆದಿಕಾಂಡ ಅಧ್ಯಾಯ 2

1 ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು. 2 ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. 3 ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. 4 ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ. 5 ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ. 6 ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು. 7 ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು. 8 ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು. 9 ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು. 10 ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು. 11 ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ. 12 ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ. 13 ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು. 14 ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್. 15 ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು. 16 ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು; 17 ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು. 18 ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು. 19 ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು. 20 ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ. 21 ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. 22 ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. 23 ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. 24 ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು. 25 ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
1 ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು. .::. 2 ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. .::. 3 ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು. .::. 4 ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ. .::. 5 ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ. .::. 6 ಆದರೆ ಭೂಮಿ ಯೊಳಗಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು. .::. 7 ಕರ್ತನಾದ ದೇವರು ಭೂಮಿಯ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸ ವನ್ನು ಊದಿದನು; ಆಗ ಮನುಷ್ಯನು ಜೀವಾತ್ಮ ನಾದನು. .::. 8 ಕರ್ತನಾದ ದೇವರು ಏದೆನಿನಲ್ಲಿ ಪೂರ್ವ ದಿಕ್ಕಿಗೆ ತೋಟವನ್ನು ಮಾಡಿ ತಾನು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇಟ್ಟನು. .::. 9 ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು. .::. 10 ತೋಟವನ್ನು ತೋಯಿಸುವದಕ್ಕಿರುವ ನದಿಯು ಏದೆನಿನೊಳಗಿಂದ ಹೊರಟು ಅಲ್ಲಿಂದ ಭಾಗವಾಗಿ ನಾಲ್ಕು ಶಾಖೆಗಳಾಯಿತು. .::. 11 ಮೊದಲನೆಯದರ ಹೆಸರು ಪೀಶೋನ್; ಅದು ಹವೀಲ ದೇಶವನ್ನೆಲ್ಲಾ ಸುತ್ತುವದು; ಅದರಲ್ಲಿ ಬಂಗಾರವಿದೆ. .::. 12 ಆ ದೇಶದ ಬಂಗಾರವು ಉತ್ತಮವಾದದ್ದು; ಅದರಲ್ಲಿ ಬದೋಲಖ ಮತ್ತು ಗೋಮೇಧಿಕ ಕಲ್ಲು ಇದೆ. .::. 13 ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತುವದು. .::. 14 ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರದ ಪೂರ್ವದ ಕಡೆಗೆ ಹರಿಯುವದು. ನಾಲ್ಕನೆಯ ನದಿಯು ಯೂಫ್ರೇಟೀಸ್. .::. 15 ಆಗ ಕರ್ತನಾದ ದೇವರು ಮನುಷ್ಯನನ್ನು ಕರಕೊಂಡು ಹೋಗಿ ಏದೆನ್ ತೋಟ ವನ್ನು ವ್ಯವಸಾಯ ಮಾಡುವದಕ್ಕೂ ಕಾಯುವದಕ್ಕೂ ಅದರಲ್ಲಿ ಇಟ್ಟನು. .::. 16 ದೇವರಾದ ಕರ್ತನು ಮನುಷ್ಯ ನಿಗೆ ಆಜ್ಞಾಪಿಸಿದ್ದೇನಂದರೆ--ನೀನು ತೋಟದ ಎಲ್ಲಾ ಮರಗಳ ಫಲವನ್ನು ಯಥೇಚ್ಛವಾಗಿ ತಿನ್ನಬಹುದು; .::. 17 ಆದರೆ ಒಳ್ಳೇದು ಕೆಟ್ಟದರ ತಿಳುವಳಿಕೆಯನ್ನುಂಟು ಮಾಡುವ ಮರದ ಫಲವನ್ನು ನೀನು ತಿನ್ನಬಾರದು; ಅದನ್ನು ತಿಂದ ದಿನದಲ್ಲಿ ಖಂಡಿತವಾಗಿ ಸಾಯುವಿ ಅಂದನು. .::. 18 ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು. .::. 19 ಇದಲ್ಲದೆ ಕರ್ತನಾದ ದೇವರು ಅಡವಿಯ ಎಲ್ಲಾ ಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿ ಅವುಗಳಿಗೆ ಆದಾಮನು ಏನು ಹೆಸರಿಡುವನೋ ಎಂದು ನೋಡು ವದಕ್ಕೆ ಅವನ ಬಳಿಗೆ ಬರಮಾಡಿದನು. ಆದಾಮನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು. .::. 20 ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ. .::. 21 ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. .::. 22 ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. .::. 23 ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. .::. 24 ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು. .::. 25 ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
  • ಆದಿಕಾಂಡ ಅಧ್ಯಾಯ 1  
  • ಆದಿಕಾಂಡ ಅಧ್ಯಾಯ 2  
  • ಆದಿಕಾಂಡ ಅಧ್ಯಾಯ 3  
  • ಆದಿಕಾಂಡ ಅಧ್ಯಾಯ 4  
  • ಆದಿಕಾಂಡ ಅಧ್ಯಾಯ 5  
  • ಆದಿಕಾಂಡ ಅಧ್ಯಾಯ 6  
  • ಆದಿಕಾಂಡ ಅಧ್ಯಾಯ 7  
  • ಆದಿಕಾಂಡ ಅಧ್ಯಾಯ 8  
  • ಆದಿಕಾಂಡ ಅಧ್ಯಾಯ 9  
  • ಆದಿಕಾಂಡ ಅಧ್ಯಾಯ 10  
  • ಆದಿಕಾಂಡ ಅಧ್ಯಾಯ 11  
  • ಆದಿಕಾಂಡ ಅಧ್ಯಾಯ 12  
  • ಆದಿಕಾಂಡ ಅಧ್ಯಾಯ 13  
  • ಆದಿಕಾಂಡ ಅಧ್ಯಾಯ 14  
  • ಆದಿಕಾಂಡ ಅಧ್ಯಾಯ 15  
  • ಆದಿಕಾಂಡ ಅಧ್ಯಾಯ 16  
  • ಆದಿಕಾಂಡ ಅಧ್ಯಾಯ 17  
  • ಆದಿಕಾಂಡ ಅಧ್ಯಾಯ 18  
  • ಆದಿಕಾಂಡ ಅಧ್ಯಾಯ 19  
  • ಆದಿಕಾಂಡ ಅಧ್ಯಾಯ 20  
  • ಆದಿಕಾಂಡ ಅಧ್ಯಾಯ 21  
  • ಆದಿಕಾಂಡ ಅಧ್ಯಾಯ 22  
  • ಆದಿಕಾಂಡ ಅಧ್ಯಾಯ 23  
  • ಆದಿಕಾಂಡ ಅಧ್ಯಾಯ 24  
  • ಆದಿಕಾಂಡ ಅಧ್ಯಾಯ 25  
  • ಆದಿಕಾಂಡ ಅಧ್ಯಾಯ 26  
  • ಆದಿಕಾಂಡ ಅಧ್ಯಾಯ 27  
  • ಆದಿಕಾಂಡ ಅಧ್ಯಾಯ 28  
  • ಆದಿಕಾಂಡ ಅಧ್ಯಾಯ 29  
  • ಆದಿಕಾಂಡ ಅಧ್ಯಾಯ 30  
  • ಆದಿಕಾಂಡ ಅಧ್ಯಾಯ 31  
  • ಆದಿಕಾಂಡ ಅಧ್ಯಾಯ 32  
  • ಆದಿಕಾಂಡ ಅಧ್ಯಾಯ 33  
  • ಆದಿಕಾಂಡ ಅಧ್ಯಾಯ 34  
  • ಆದಿಕಾಂಡ ಅಧ್ಯಾಯ 35  
  • ಆದಿಕಾಂಡ ಅಧ್ಯಾಯ 36  
  • ಆದಿಕಾಂಡ ಅಧ್ಯಾಯ 37  
  • ಆದಿಕಾಂಡ ಅಧ್ಯಾಯ 38  
  • ಆದಿಕಾಂಡ ಅಧ್ಯಾಯ 39  
  • ಆದಿಕಾಂಡ ಅಧ್ಯಾಯ 40  
  • ಆದಿಕಾಂಡ ಅಧ್ಯಾಯ 41  
  • ಆದಿಕಾಂಡ ಅಧ್ಯಾಯ 42  
  • ಆದಿಕಾಂಡ ಅಧ್ಯಾಯ 43  
  • ಆದಿಕಾಂಡ ಅಧ್ಯಾಯ 44  
  • ಆದಿಕಾಂಡ ಅಧ್ಯಾಯ 45  
  • ಆದಿಕಾಂಡ ಅಧ್ಯಾಯ 46  
  • ಆದಿಕಾಂಡ ಅಧ್ಯಾಯ 47  
  • ಆದಿಕಾಂಡ ಅಧ್ಯಾಯ 48  
  • ಆದಿಕಾಂಡ ಅಧ್ಯಾಯ 49  
  • ಆದಿಕಾಂಡ ಅಧ್ಯಾಯ 50  
×

Alert

×

Kannada Letters Keypad References