ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಪೂರ್ವಕಾಲವೃತ್ತಾ

1 ಪೂರ್ವಕಾಲವೃತ್ತಾ ಅಧ್ಯಾಯ 20

ದಾವೀದನು ರಬ್ಬ ಪಟ್ಟಣವನ್ನು ವಶಪಡಿಸಿಕೊಂಡಿದ್ದು 1 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. 2 ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು. 3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು. ಫಿಲಿಷ್ಟಿಯರೊಡನೆ ಯುದ್ಧ 4 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು. 5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. 6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು. 7 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. 8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
ದಾವೀದನು ರಬ್ಬ ಪಟ್ಟಣವನ್ನು ವಶಪಡಿಸಿಕೊಂಡಿದ್ದು 1 ಮರುವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ಯೋವಾಬನು ಬಲವಾದ ಸೈನ್ಯವನ್ನು ಯುದ್ಧಕ್ಕೆ ಮುನ್ನಡೆಸಿ, ಅಮ್ಮೋನಿಯರ ಪ್ರಾಂತ್ಯಗಳನ್ನು ವಶಪಡಿಸಿಕೊಂಡು ರಬ್ಬಕ್ಕೆ ಹೋಗಿ ಮುತ್ತಿಗೆ ಹಾಕಿದನು. ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. .::. 2 ದಾವೀದನು ಮಲ್ಕಾಮ್ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲಾ ತೂಕದ್ದು. ಅದರಲ್ಲಿದ್ದ ಅಮೂಲ್ಯವಾದ ರತ್ನಗಳನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಅವನು ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದನು. .::. 3 ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಮಾಡುವ ಕೆಲಸಕ್ಕೆ ನೇಮಿಸಿದನು. ಅಮ್ಮೋನಿಯರ ಎಲ್ಲಾ ಪಟ್ಟಣದವರಿಗೂ ಇದೇ ಗತಿಯಾಯಿತು. ಅನಂತರ ದಾವೀದನು ಸರ್ವಸೈನಿಕರೊಡನೆ ಯೆರೂಸಲೇಮಿಗೆ ಬಂದನು. .::. ಫಿಲಿಷ್ಟಿಯರೊಡನೆ ಯುದ್ಧ 4 ಅನಂತರ ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷ ಊರಿನವನಾದ ಸಿಬ್ಬೆಕೈ ಎಂಬುವವನು ರೆಫಾಯನಾದ ಸಿಪ್ಪೈ ಎಂಬುವವನನ್ನು ಕೊಲ್ಲಲು ಫಿಲಿಷ್ಟಿಯರು ಕುಗ್ಗಿಹೋದರು. .::. 5 ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗನಾದ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮನಾದ ಲಹ್ಮೀಯನನ್ನು ಕೊಂದನು. ಲಹ್ಮೀಯನ ಬರ್ಜಿಯ ಹಿಡಿಕೆಯು ನೇಕಾರರ ಕುಂಟೆಯಷ್ಟು ಗಾತ್ರವಿತ್ತು. .::. 6 ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು ಅವನ ಕೈಕಾಲುಗಳಿಗೆ ಆರಾರು ಬೆರಳುಗಳಿದ್ದವು. ಅವನೂ ರೆಫಾಯನು. .::. 7 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು. .::. 8 ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.
  • 1 ಪೂರ್ವಕಾಲವೃತ್ತಾ ಅಧ್ಯಾಯ 1  
  • 1 ಪೂರ್ವಕಾಲವೃತ್ತಾ ಅಧ್ಯಾಯ 2  
  • 1 ಪೂರ್ವಕಾಲವೃತ್ತಾ ಅಧ್ಯಾಯ 3  
  • 1 ಪೂರ್ವಕಾಲವೃತ್ತಾ ಅಧ್ಯಾಯ 4  
  • 1 ಪೂರ್ವಕಾಲವೃತ್ತಾ ಅಧ್ಯಾಯ 5  
  • 1 ಪೂರ್ವಕಾಲವೃತ್ತಾ ಅಧ್ಯಾಯ 6  
  • 1 ಪೂರ್ವಕಾಲವೃತ್ತಾ ಅಧ್ಯಾಯ 7  
  • 1 ಪೂರ್ವಕಾಲವೃತ್ತಾ ಅಧ್ಯಾಯ 8  
  • 1 ಪೂರ್ವಕಾಲವೃತ್ತಾ ಅಧ್ಯಾಯ 9  
  • 1 ಪೂರ್ವಕಾಲವೃತ್ತಾ ಅಧ್ಯಾಯ 10  
  • 1 ಪೂರ್ವಕಾಲವೃತ್ತಾ ಅಧ್ಯಾಯ 11  
  • 1 ಪೂರ್ವಕಾಲವೃತ್ತಾ ಅಧ್ಯಾಯ 12  
  • 1 ಪೂರ್ವಕಾಲವೃತ್ತಾ ಅಧ್ಯಾಯ 13  
  • 1 ಪೂರ್ವಕಾಲವೃತ್ತಾ ಅಧ್ಯಾಯ 14  
  • 1 ಪೂರ್ವಕಾಲವೃತ್ತಾ ಅಧ್ಯಾಯ 15  
  • 1 ಪೂರ್ವಕಾಲವೃತ್ತಾ ಅಧ್ಯಾಯ 16  
  • 1 ಪೂರ್ವಕಾಲವೃತ್ತಾ ಅಧ್ಯಾಯ 17  
  • 1 ಪೂರ್ವಕಾಲವೃತ್ತಾ ಅಧ್ಯಾಯ 18  
  • 1 ಪೂರ್ವಕಾಲವೃತ್ತಾ ಅಧ್ಯಾಯ 19  
  • 1 ಪೂರ್ವಕಾಲವೃತ್ತಾ ಅಧ್ಯಾಯ 20  
  • 1 ಪೂರ್ವಕಾಲವೃತ್ತಾ ಅಧ್ಯಾಯ 21  
  • 1 ಪೂರ್ವಕಾಲವೃತ್ತಾ ಅಧ್ಯಾಯ 22  
  • 1 ಪೂರ್ವಕಾಲವೃತ್ತಾ ಅಧ್ಯಾಯ 23  
  • 1 ಪೂರ್ವಕಾಲವೃತ್ತಾ ಅಧ್ಯಾಯ 24  
  • 1 ಪೂರ್ವಕಾಲವೃತ್ತಾ ಅಧ್ಯಾಯ 25  
  • 1 ಪೂರ್ವಕಾಲವೃತ್ತಾ ಅಧ್ಯಾಯ 26  
  • 1 ಪೂರ್ವಕಾಲವೃತ್ತಾ ಅಧ್ಯಾಯ 27  
  • 1 ಪೂರ್ವಕಾಲವೃತ್ತಾ ಅಧ್ಯಾಯ 28  
  • 1 ಪೂರ್ವಕಾಲವೃತ್ತಾ ಅಧ್ಯಾಯ 29  
×

Alert

×

Kannada Letters Keypad References