ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
1 ಪೂರ್ವಕಾಲವೃತ್ತಾ

1 ಪೂರ್ವಕಾಲವೃತ್ತಾ ಅಧ್ಯಾಯ 26

ದೇವಾಲಯದ ದ್ವಾರಪಾಲಕರು 1 ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ. 2 ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು. 3 ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು. 4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು, 5 ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ. 6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು. 7 ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು. 8 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು. 9 ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು. 10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು. 11 ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು. 12 ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು. 13 ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು. 14 ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು. 15 ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ, 16 ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ. 17 ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು, 18 ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು. 19 ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ. ದೇವಾಲಯ ಭಂಡಾರದ ಖಜಾಂಚಿಗಳು ಮತ್ತು ಇತರ ಅಧಿಕಾರಿಗಳು 20 ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು. 21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು, 22 ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು. 23 ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್, 24 ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು. 25 ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು. 26 ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು. 27 ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು. 28 ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು. 29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು. 30 ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು. 31 ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು. 32 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
ದೇವಾಲಯದ ದ್ವಾರಪಾಲಕರು 1 ದೇವಾಲಯದ ದ್ವಾರಪಾಲಕ ವರ್ಗಗಳ ವಿಷಯ: ಕೋರಹೀಯನಾದ ಮೆಷೆಲೆಮ್ಯ ಎಂಬವನು, ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ. .::. 2 ಮೆಷೆಲೆಮ್ಯನ ಮಕ್ಕಳಲ್ಲಿ ಜೆಕೆರ್ಯನು ಚೊಚ್ಚಲ ಮಗ, ಎದೀಯಯೇಲನು ಎರಡನೆಯವನು, ಜೆಬೆದ್ಯನು ಮೂರನೆಯವನು, ಯೆತ್ನಿಯೇಲನು ನಾಲ್ಕನೆಯವನು. .::. 3 ಏಲಾಮನು ಐದನೆಯವನು, ಯೆಹೋಹಾನಾನನು ಆರನೆಯವನು, ಎಲ್ಯೆಹೋಯೇನೈ ಏಳನೆಯವನು. .::. 4 ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು, ಯೆಹೋಜಾಬಾದನು ಎರಡನೆಯವನು. ಯೋವಾಹನು ಮೂರನೆಯವನು, ಸಾಕಾರನು ನಾಲ್ಕನೆಯವನು, ನೆತನೇಲನು ಐದನೆಯವನು, .::. 5 ಅಮ್ಮೀಯೇಲನು ಆರನೆಯವನು, ಇಸ್ಸಾಕಾರನು ಏಳನೆಯವನು, ಪೆಯುಲ್ಲೆತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನಷ್ಟೆ. .::. 6 ಅವನ ಮಗನಾದ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು. .::. 7 ಅವರು ಯಾರೆಂದರೆ: ಒತ್ನೀ, ರೆಫಾಯೇಲ್, ಓಬೇದ್ ಮತ್ತು ಎಲ್ಜಾಬಾದ್. ಇವರೂ ಬಹುಸಮರ್ಥರಾದ ಎಲೀಹು, ಸೆಮಕ್ಯ ಎಂಬುವವರು ಇವರ ಸಹೋದರರು. .::. 8 ಇವರೆಲ್ಲರೂ ಓಬೇದೆದೋಮನ ಸಂತಾನದವರು. ಇವರು, ಇವರ ಮಕ್ಕಳು ಸಮರ್ಥರೂ, ಸೇವೆಯಲ್ಲಿ ಗಟ್ಟಿಗರೂ ಆಗಿದ್ದವರೂ. ಇವರೂ ಇವರ ಸಹೋದರರೂ ಕೂಡಿ ಅರವತ್ತೆರಡು ಜನರು. .::. 9 ಮೆಷೆಲೆಮ್ಯನ ಮಕ್ಕಳೂ ಮತ್ತು ಸಹೋದರರೂ ಹದಿನೆಂಟು ಜನರು. ಇವರೂ ಸಮರ್ಥರಾಗಿದ್ದರು. .::. 10 ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬುವವನು ಪ್ರಧಾನನಾಗಿದ್ದನು. ಇವನು ಚೊಚ್ಚಲ ಮಗನಲ್ಲದಿದ್ದರೂ ಅವನ ತಂದೆಯು ಅವನನ್ನೇ ಪ್ರಧಾನನನ್ನಾಗಿ ನೇಮಿಸಿದನು. .::. 11 ಹಿಲ್ಕೀಯನು ಎರಡನೆಯವನು, ಟೆಬಲ್ಯನು ಮೂರನೆಯವನು, ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳು ಸಹೋದರರೂ ಒಟ್ಟಿಗೆ ಹದಿಮೂರು ಜನರು. .::. 12 ಈ ದ್ವಾರಪಾಲಕರ ವರ್ಗಗಳು ಪ್ರಧಾನಪುರುಷರು ತಮ್ಮ ಕುಲಬಂಧುಗಳಂತೆ ಯೆಹೋವನ ಆಲಯದಲ್ಲಿ ಸೇವೆಮಾಡುವವರಾಗಿದ್ದರು. .::. 13 ಅವರು ಕನಿಷ್ಠ ಕುಟುಂಬವೆಂದೂ, ಶ್ರೇಷ್ಠ ಕುಟುಂಬವೆಂದೂ ವ್ಯತ್ಯಾಸ ಮಾಡದೆ ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಂಡರು. .::. 14 ಪೂರ್ವ ದಿಕ್ಕಿನ ಕಾವಲಿಗೆ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತು. ಬಹು ವಿವೇಕವುಳ್ಳ ಸಲಹೆಗಾರನಾಗಿರುವ ಅವನ ಮಗನಾದ ಜೆಕೆರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತು. .::. 15 ಓಬೇದೆದೋಮನಿಗೆ ದಕ್ಷಿಣದ ಬಾಗಿಲು, ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ, .::. 16 ಶುಪ್ಪೀಮ್ ಮತ್ತು ಹೋಸ ಎಂಬುವರಿಗೆ ಪಶ್ಚಿಮದ ಬಾಗಿಲೂ ಅದರ ಸಮೀಪದಲ್ಲಿರುವ ಶಲ್ಲೆಕೆತ್ ಎಂಬ ಬಾಗಿಲು ಚೀಟಿನಿಂದ ನೇಮಕವಾದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ. .::. 17 ಲೇವಿಯರಲ್ಲಿ ಪ್ರತಿದಿನವೂ ಪೂರ್ವದಿಕ್ಕಿನ ಬಾಗಿಲನ್ನು ಆರು ಜನರು, ದಕ್ಷಿಣ ಬಾಗಿಲನ್ನು ನಾಲ್ಕು ಜನರು, ಉಗ್ರಾಣ ಮಂದಿರದ ಎರಡು ಬಾಗಿಲನ್ನು ಇಬ್ಬಿಬ್ಬರು, .::. 18 ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿ ಬಾಗಿಲನ್ನು ನಾಲ್ಕು ಜನರು, ಪರ್ಬರನ್ನು ಇಬ್ಬರು ಕಾಯುತ್ತಿದ್ದರು. .::. 19 ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕರ ವರ್ಗಗಳು ಇವೇ. .::. ದೇವಾಲಯ ಭಂಡಾರದ ಖಜಾಂಚಿಗಳು ಮತ್ತು ಇತರ ಅಧಿಕಾರಿಗಳು 20 ಲೇವಿಯನಾದ ಅಹೀಯನು ಮೇಲೆ ಹೇಳಿರುವವರ ಕುಲಬಂಧುಗಳೂ, ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುತ್ತಿದ್ದರು. .::. 21 ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಪ್ರಧಾನರಲ್ಲಿ ಯೆಹೀಯೇಲೀ ಮತ್ತು ಅವನ ಮಕ್ಕಳು, .::. 22 ಯೆಹೀಯೇಲ್ಯರಾದ ಜೇತಾಮನೂ ಮತ್ತು ಅವನ ತಮ್ಮನಾದ ಯೋವೇಲನು ಯೆಹೋವನ ಆಲಯದ ಭಂಡಾರಗಳನ್ನು ಕಾಯುವವರಾಗಿದ್ದರು. .::. 23 ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್, .::. 24 ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನಾಗಿದ್ದನು. .::. 25 ಎಲೀಯೆಜೆರನ ಮಗ ರೆಹಬ್ಯ, ರೆಹಬ್ಯನ ಮಗ ಯೆಶಾಯ ಯೆಶಾಯನ ಮಗ ಯೋರಾಮ ಯೋರಾಮನ ಮಗ ಜಿಕ್ರೀ ಜಿಕ್ರೀಯನ ಮಗ ಶೆಲೋಮೋತನು. .::. 26 ಶೆಲೋಮೋತನು ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು. ಇವರು ಶೆಬೂವೇಲನ ಗೋತ್ರಬಂಧುಗಳು. ಈ ವಸ್ತುಗಳನ್ನು ಅರಸನಾದ ದಾವೀದನೂ, ಗೋತ್ರ ಪ್ರಧಾನರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಸೇನಾಧಿಪತಿಗಳೂ ಪ್ರತಿಷ್ಠಿಸಿದ್ದರು. .::. 27 ಇವರು ಯೆಹೋವನ ಆಲಯದ ವೃದ್ಧಿಗೋಸ್ಕರ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಯೆಹೋವನಿಗೆಂದು ಮುಡುಪಾಗಿ ಇಟ್ಟರು. .::. 28 ಇದಲ್ಲದೆ ದೇವ ದರ್ಶಿಯಾದ ಸಮುವೇಲನೂ, ಕೀಷನ ಮಗನಾದ ಸೌಲನೂ, ನೇರನ ಮಗನಾದ ಅಬ್ನೇರನೂ, ಚೆರೂಯಳ ಮಗನಾದ ಯೋವಾಬನೂ ಹಾಗೆಯೇ ಮಾಡಿದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು. .::. 29 ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳು ಲೌಕೀಕೋದ್ಯೋಗದಲ್ಲಿದ್ದರು. ಅವರು ಇಸ್ರಾಯೇಲರ ಅಧಿಕಾರಿಗಳೂ ಮತ್ತು ನ್ಯಾಯಾಧಿಪತಿಗಳೂ ಆಗಿದ್ದರು. .::. 30 ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಯೊರ್ದನ್ ಹೊಳೆಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಾಯೇಲ್ಯರೊಳಗೆ ಯೆಹೋವನ ಸೇವೆಯ ಎಲ್ಲಾ ಕಾರ್ಯಗಳನ್ನೂ ಮತ್ತು ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಜನರು. .::. 31 ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆಸಿದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಿಗೆ ಅನೇಕರು ಅವರ ಗೋತ್ರದವರಾಗಿರುತ್ತಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೆರೀಯನು ಪ್ರಧಾನನು. .::. 32 ಶ್ರೀಮಂತರೂ ಕುಟುಂಬ ಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಜನರು. ಅರಸನಾದ ದಾವೀದನು ರೂಬೇನ್, ಗಾದ್ ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲಿಯೂ, ರಾಜಕೀಯ ಕಾರ್ಯಗಳಲ್ಲಿಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
  • 1 ಪೂರ್ವಕಾಲವೃತ್ತಾ ಅಧ್ಯಾಯ 1  
  • 1 ಪೂರ್ವಕಾಲವೃತ್ತಾ ಅಧ್ಯಾಯ 2  
  • 1 ಪೂರ್ವಕಾಲವೃತ್ತಾ ಅಧ್ಯಾಯ 3  
  • 1 ಪೂರ್ವಕಾಲವೃತ್ತಾ ಅಧ್ಯಾಯ 4  
  • 1 ಪೂರ್ವಕಾಲವೃತ್ತಾ ಅಧ್ಯಾಯ 5  
  • 1 ಪೂರ್ವಕಾಲವೃತ್ತಾ ಅಧ್ಯಾಯ 6  
  • 1 ಪೂರ್ವಕಾಲವೃತ್ತಾ ಅಧ್ಯಾಯ 7  
  • 1 ಪೂರ್ವಕಾಲವೃತ್ತಾ ಅಧ್ಯಾಯ 8  
  • 1 ಪೂರ್ವಕಾಲವೃತ್ತಾ ಅಧ್ಯಾಯ 9  
  • 1 ಪೂರ್ವಕಾಲವೃತ್ತಾ ಅಧ್ಯಾಯ 10  
  • 1 ಪೂರ್ವಕಾಲವೃತ್ತಾ ಅಧ್ಯಾಯ 11  
  • 1 ಪೂರ್ವಕಾಲವೃತ್ತಾ ಅಧ್ಯಾಯ 12  
  • 1 ಪೂರ್ವಕಾಲವೃತ್ತಾ ಅಧ್ಯಾಯ 13  
  • 1 ಪೂರ್ವಕಾಲವೃತ್ತಾ ಅಧ್ಯಾಯ 14  
  • 1 ಪೂರ್ವಕಾಲವೃತ್ತಾ ಅಧ್ಯಾಯ 15  
  • 1 ಪೂರ್ವಕಾಲವೃತ್ತಾ ಅಧ್ಯಾಯ 16  
  • 1 ಪೂರ್ವಕಾಲವೃತ್ತಾ ಅಧ್ಯಾಯ 17  
  • 1 ಪೂರ್ವಕಾಲವೃತ್ತಾ ಅಧ್ಯಾಯ 18  
  • 1 ಪೂರ್ವಕಾಲವೃತ್ತಾ ಅಧ್ಯಾಯ 19  
  • 1 ಪೂರ್ವಕಾಲವೃತ್ತಾ ಅಧ್ಯಾಯ 20  
  • 1 ಪೂರ್ವಕಾಲವೃತ್ತಾ ಅಧ್ಯಾಯ 21  
  • 1 ಪೂರ್ವಕಾಲವೃತ್ತಾ ಅಧ್ಯಾಯ 22  
  • 1 ಪೂರ್ವಕಾಲವೃತ್ತಾ ಅಧ್ಯಾಯ 23  
  • 1 ಪೂರ್ವಕಾಲವೃತ್ತಾ ಅಧ್ಯಾಯ 24  
  • 1 ಪೂರ್ವಕಾಲವೃತ್ತಾ ಅಧ್ಯಾಯ 25  
  • 1 ಪೂರ್ವಕಾಲವೃತ್ತಾ ಅಧ್ಯಾಯ 26  
  • 1 ಪೂರ್ವಕಾಲವೃತ್ತಾ ಅಧ್ಯಾಯ 27  
  • 1 ಪೂರ್ವಕಾಲವೃತ್ತಾ ಅಧ್ಯಾಯ 28  
  • 1 ಪೂರ್ವಕಾಲವೃತ್ತಾ ಅಧ್ಯಾಯ 29  
×

Alert

×

Kannada Letters Keypad References