ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಪ್ರಸಂಗಿ

ಪ್ರಸಂಗಿ ಅಧ್ಯಾಯ 11

ನೀರಿನ ಮೇಲೆ ರೊಟ್ಟಿ 1 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು. 2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ. 3 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. 4 ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. 5 ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. 6 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. ಯೌವನದಲ್ಲಿ ಸೃಷ್ಟಿಕರ್ತನನ್ನು ಸ್ಮರಿಸು 7 ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. 8 ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ. 9 ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. 10 ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
ನೀರಿನ ಮೇಲೆ ರೊಟ್ಟಿ 1 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು. .::. 2 ನೀನು ಅದನ್ನು ಏಳು ಮತ್ತು ಎಂಟು ಮಂದಿಗೆ ಹಂಚಿಬಿಡು. ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ. .::. 3 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು. .::. 4 ಗಾಳಿಯನ್ನು ನೋಡುತ್ತಲೇ ಇರುವವನು ಬೀಜವನ್ನು ಬಿತ್ತುವುದಿಲ್ಲ, ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರನ್ನು ಕೊಯ್ಯುವುದಿಲ್ಲ. .::. 5 ಗಾಳಿಯ ಮಾರ್ಗವನ್ನೂ, ಗರ್ಭಿಣಿಯ ಗರ್ಭದಲ್ಲಿ ಎಲುಬುಗಳು ಬೆಳೆಯುವ ರೀತಿಯನ್ನೂ, ನೀನು ಹೇಗೆ ತಿಳಿಯುವುದಿಲ್ಲವೋ ಹಾಗೆಯೇ, ಸರ್ವಶಕ್ತನಾದ ದೇವರ ಕಾರ್ಯವನ್ನು ಅರಿಯುವುದಿಲ್ಲ. .::. 6 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು. .::. ಯೌವನದಲ್ಲಿ ಸೃಷ್ಟಿಕರ್ತನನ್ನು ಸ್ಮರಿಸು 7 ನಿಜವಾಗಿ ಬೆಳಕು ಇಂಪಾಗಿಯೂ, ಮತ್ತು ಸೂರ್ಯನನ್ನು ಕಾಣುವುದು ಕಣ್ಣಿಗೆ ಹಿತವಾಗಿಯೂ ಇರುವುದು. .::. 8 ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ. .::. 9 ಯೌವನಸ್ಥನೇ, ಯೌವನಪ್ರಾಯದಲ್ಲಿ ಆನಂದಿಸು, ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ. ಮನಸ್ಸಿಗೆ ತಕ್ಕಂತೆಯೂ, ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ. ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು. .::. 10 ನಿನ್ನ ಹೃದಯದಿಂದ ದುಃಖವನ್ನೂ, ದೇಹದಿಂದ ಶ್ರಮೆಯನ್ನೂ ತೊಲಗಿಸು, ಏಕೆಂದರೆ ಬಾಲ್ಯವೂ, ಯೌವನವೂ ವ್ಯರ್ಥವಷ್ಟೆ.
  • ಪ್ರಸಂಗಿ ಅಧ್ಯಾಯ 1  
  • ಪ್ರಸಂಗಿ ಅಧ್ಯಾಯ 2  
  • ಪ್ರಸಂಗಿ ಅಧ್ಯಾಯ 3  
  • ಪ್ರಸಂಗಿ ಅಧ್ಯಾಯ 4  
  • ಪ್ರಸಂಗಿ ಅಧ್ಯಾಯ 5  
  • ಪ್ರಸಂಗಿ ಅಧ್ಯಾಯ 6  
  • ಪ್ರಸಂಗಿ ಅಧ್ಯಾಯ 7  
  • ಪ್ರಸಂಗಿ ಅಧ್ಯಾಯ 8  
  • ಪ್ರಸಂಗಿ ಅಧ್ಯಾಯ 9  
  • ಪ್ರಸಂಗಿ ಅಧ್ಯಾಯ 10  
  • ಪ್ರಸಂಗಿ ಅಧ್ಯಾಯ 11  
  • ಪ್ರಸಂಗಿ ಅಧ್ಯಾಯ 12  
×

Alert

×

Kannada Letters Keypad References