ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ವಿಮೋಚನಕಾಂಡ

ವಿಮೋಚನಕಾಂಡ ಅಧ್ಯಾಯ 30

ಧೂಪವೇದಿ
ವಿಮೋ 37:25-28

1 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು. 2 ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು. 3 ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು. 4 ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು. 5 ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. 6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು. 7 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ 8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು. 9 ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು. 10 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.” ಗುಡಾರಕ್ಕಾಗಿ ಕೊಡಬೇಕಾದ ಕಾಣಿಕೆ 11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 12 “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು. 13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು * ಅತಿ ಚಿಕ್ಕ ಆಳತೆಯ ಪ್ರಮಾಣ, ಇದು ಸುಮಾರು 0.6 ಗ್ರಾಂ. ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. 14 ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. 15 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು. 16 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.” ತ್ರಾಮದ ತೊಟ್ಟಿಯ 17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, 18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು. 19 ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. 20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು. 21 ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.” ಅಭಿಷೇಕ ತೈಲ 22 ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ, 23 “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಸುಮಾರು 6 ಕಿಲೋಗ್ರಾಂ. ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ, 24 ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಹೀನ್ ಸುಮಾರು ನಾಲ್ಕು ಲೀಟರು. ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು, 25 ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು. 26 ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು, 27 ದೀಪಸ್ತಂಭ, ದೀಪಸ್ತಂಭದ ಉಪಕರಣಗಳು, 28 ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು. 29 ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. 30 ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.” 31 ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು. 32 ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು. 33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.” ಪರಿಮಳ ಧೂಪ 34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು, 35 ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು. 36 ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು. 37 ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು. 38 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
ಧೂಪವೇದಿ
ವಿಮೋ 37:25-28

1 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು. .::. 2 ಅದು ಒಂದು ಮೊಳ ಉದ್ದವಾಗಿಯು, ಒಂದು ಮೊಳ ಅಗಲವಾಗಿಯೂ ಇದ್ದು ಚಚ್ಚೌಕವಾಗಿರಬೇಕು. ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರಿಂದಲೇ ಆಗಿರಬೇಕು. .::. 3 ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು. .::. 4 ಅದರ ತೋರಣದ ಕೆಳಗೆ ಯಜ್ಞವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ಯಜ್ಞವೇದಿಯನ್ನು ಹೊರುವುದಕ್ಕೆ ಕಂಬಗಳನ್ನು ಅವುಗಳಲ್ಲಿ ಸೇರಿಸಬೇಕು. .::. 5 ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. .::. 6 ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು. .::. 7 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ .::. 8 ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು. .::. 9 ಆ ಯಜ್ಞವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಬಾರದು. ಅದರ ಮೇಲೆ ಇತರೆ ಹೋಮವನ್ನಾಗಲಿ, ಭೋಜನದ್ರವ್ಯವನ್ನಾಗಲಿ ಹಾಗೂ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು. .::. 10 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.” .::. ಗುಡಾರಕ್ಕಾಗಿ ಕೊಡಬೇಕಾದ ಕಾಣಿಕೆ 11 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, .::. 12 “ನೀನು ಇಸ್ರಾಯೇಲ್ಯರ ಜನಗಣತಿ ಮಾಡಿಸಿ ಅವರನ್ನು ಲೆಕ್ಕಿಸುವಾಗ ಅವರಿಗೆ ಬಾಧೆಯುಂಟಾಗಿ ವ್ಯಾಧಿ ಸಂಭವಿಸದಂತೆ ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣಕ್ಕಾಗಿ ವಿಮೋಚನ ಕ್ರಯವನ್ನು ಯೆಹೋವನಿಗೆ ಕೊಡಬೇಕು. .::. 13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು * ಅತಿ ಚಿಕ್ಕ ಆಳತೆಯ ಪ್ರಮಾಣ, ಇದು ಸುಮಾರು 0.6 ಗ್ರಾಂ. ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ. .::. 14 ಲೆಕ್ಕ ಮಾಡಿದವರಲ್ಲಿ ಇಪ್ಪತ್ತು ವರ್ಷದವರೂ ಹಾಗೂ ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರೂ ಆ ಕಾಣಿಕೆಯನ್ನು ಯೆಹೋವನಿಗೆ ಕೊಡಬೇಕು. .::. 15 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು. .::. 16 ನೀನು ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ಅದನ್ನು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲರ ಪ್ರಾಣಗಳನ್ನು ಉಳಿಸಬೇಕೆಂಬುದಾಗಿ ಆ ಕಾಣಿಕೆಯು ಯೆಹೋವನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕವಾಗಿರುವುದು.” .::. ತ್ರಾಮದ ತೊಟ್ಟಿಯ 17 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, .::. 18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು. .::. 19 ಆರೋನನೂ ಅವನ ಮಕ್ಕಳೂ ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. .::. 20 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗ ಹಾಗೂ ದೇವರ ಸೇವೆಯನ್ನು ಮಾಡುವವರಾಗಿ ಯೆಹೋವನಿಗೆ ಹೋಮವನ್ನು ಸಮರ್ಪಿಸುವುದಕ್ಕಾಗಿ ಯಜ್ಞವೇದಿಯ ಬಳಿಗೆ ಬರುವಾಗ ಜೀವದಿಂದಿರಲು ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು. .::. 21 ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.” .::. ಅಭಿಷೇಕ ತೈಲ 22 ಇದಲ್ಲದೆ ಯೆಹೋವನು ಮೋಶೆಗೆ ಪುನಃ ಹೇಳಿದ್ದೇನೆಂದರೆ, .::. 23 “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಸುಮಾರು 6 ಕಿಲೋಗ್ರಾಂ. ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ, .::. 24 ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಹೀನ್ ಸುಮಾರು ನಾಲ್ಕು ಲೀಟರು. ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು, .::. 25 ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು. .::. 26 ಆದುದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು, .::. 27 ದೀಪಸ್ತಂಭ, ದೀಪಸ್ತಂಭದ ಉಪಕರಣಗಳು, .::. 28 ಧೂಪವೇದಿ, ಯಜ್ಞವೇದಿ, ಯಜ್ಞವೇದಿಯ ಉಪಕರಣಗಳು ಹಾಗು ನೀರಿನ ತೊಟ್ಟಿ ಅದರ ಪೀಠ ಇವುಗಳನ್ನೆಲ್ಲಾ ಅಭಿಷೇಕಿಸಬೇಕು. .::. 29 ಅವು ಅತಿ ಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧೀಕರಿಸಬೇಕು. ಅವುಗಳನ್ನು ಮುಟ್ಟುವವರೆಲ್ಲರೂ ಪರಿಶುದ್ಧರಾಗಿರಬೇಕು. .::. 30 ಅದಲ್ಲದೆ ಆರೋನನೂ ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನು ಅಭಿಷೇಕಿಸಿ ಶುದ್ಧೀಕರಿಸಬೇಕು.” .::. 31 ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು. .::. 32 ಜನರು ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನದ ಮೇರೆಗೆ ಬೇರೆ ಕೆಲಸಕ್ಕಾಗಿ ತೈಲವನ್ನು ಮಾಡಲೇಬಾರದು. ಇದು ದೇವರ ವಸ್ತು. ಇದು ಪರಿಶುದ್ಧವಾದದ್ದು ಎಂದು ನೀವು ತಿಳಿದುಕೊಳ್ಳಬೇಕು. .::. 33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.” .::. ಪರಿಮಳ ಧೂಪ 34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು, .::. 35 ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು. .::. 36 ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು. .::. 37 ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಿಕೊಳ್ಳಬಾರದು. ಅದು ಯೆಹೋವನ ಸೇವೆಗೆ ಮಾತ್ರ ಉಪಯೋಗಿಸಬೇಕಾದ ಮೀಸಲಾದ ಪವಿತ್ರ ಪದಾರ್ಥವೆಂದು ಭಾವಿಸಬೇಕು. .::. 38 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
  • ವಿಮೋಚನಕಾಂಡ ಅಧ್ಯಾಯ 1  
  • ವಿಮೋಚನಕಾಂಡ ಅಧ್ಯಾಯ 2  
  • ವಿಮೋಚನಕಾಂಡ ಅಧ್ಯಾಯ 3  
  • ವಿಮೋಚನಕಾಂಡ ಅಧ್ಯಾಯ 4  
  • ವಿಮೋಚನಕಾಂಡ ಅಧ್ಯಾಯ 5  
  • ವಿಮೋಚನಕಾಂಡ ಅಧ್ಯಾಯ 6  
  • ವಿಮೋಚನಕಾಂಡ ಅಧ್ಯಾಯ 7  
  • ವಿಮೋಚನಕಾಂಡ ಅಧ್ಯಾಯ 8  
  • ವಿಮೋಚನಕಾಂಡ ಅಧ್ಯಾಯ 9  
  • ವಿಮೋಚನಕಾಂಡ ಅಧ್ಯಾಯ 10  
  • ವಿಮೋಚನಕಾಂಡ ಅಧ್ಯಾಯ 11  
  • ವಿಮೋಚನಕಾಂಡ ಅಧ್ಯಾಯ 12  
  • ವಿಮೋಚನಕಾಂಡ ಅಧ್ಯಾಯ 13  
  • ವಿಮೋಚನಕಾಂಡ ಅಧ್ಯಾಯ 14  
  • ವಿಮೋಚನಕಾಂಡ ಅಧ್ಯಾಯ 15  
  • ವಿಮೋಚನಕಾಂಡ ಅಧ್ಯಾಯ 16  
  • ವಿಮೋಚನಕಾಂಡ ಅಧ್ಯಾಯ 17  
  • ವಿಮೋಚನಕಾಂಡ ಅಧ್ಯಾಯ 18  
  • ವಿಮೋಚನಕಾಂಡ ಅಧ್ಯಾಯ 19  
  • ವಿಮೋಚನಕಾಂಡ ಅಧ್ಯಾಯ 20  
  • ವಿಮೋಚನಕಾಂಡ ಅಧ್ಯಾಯ 21  
  • ವಿಮೋಚನಕಾಂಡ ಅಧ್ಯಾಯ 22  
  • ವಿಮೋಚನಕಾಂಡ ಅಧ್ಯಾಯ 23  
  • ವಿಮೋಚನಕಾಂಡ ಅಧ್ಯಾಯ 24  
  • ವಿಮೋಚನಕಾಂಡ ಅಧ್ಯಾಯ 25  
  • ವಿಮೋಚನಕಾಂಡ ಅಧ್ಯಾಯ 26  
  • ವಿಮೋಚನಕಾಂಡ ಅಧ್ಯಾಯ 27  
  • ವಿಮೋಚನಕಾಂಡ ಅಧ್ಯಾಯ 28  
  • ವಿಮೋಚನಕಾಂಡ ಅಧ್ಯಾಯ 29  
  • ವಿಮೋಚನಕಾಂಡ ಅಧ್ಯಾಯ 30  
  • ವಿಮೋಚನಕಾಂಡ ಅಧ್ಯಾಯ 31  
  • ವಿಮೋಚನಕಾಂಡ ಅಧ್ಯಾಯ 32  
  • ವಿಮೋಚನಕಾಂಡ ಅಧ್ಯಾಯ 33  
  • ವಿಮೋಚನಕಾಂಡ ಅಧ್ಯಾಯ 34  
  • ವಿಮೋಚನಕಾಂಡ ಅಧ್ಯಾಯ 35  
  • ವಿಮೋಚನಕಾಂಡ ಅಧ್ಯಾಯ 36  
  • ವಿಮೋಚನಕಾಂಡ ಅಧ್ಯಾಯ 37  
  • ವಿಮೋಚನಕಾಂಡ ಅಧ್ಯಾಯ 38  
  • ವಿಮೋಚನಕಾಂಡ ಅಧ್ಯಾಯ 39  
  • ವಿಮೋಚನಕಾಂಡ ಅಧ್ಯಾಯ 40  
×

Alert

×

Kannada Letters Keypad References