ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಹೋಶೇ

ಹೋಶೇ ಅಧ್ಯಾಯ 6

ಪಶ್ಚಾತ್ತಾಪ ಪಡದ ಇಸ್ರಾಯೇಲರು 1 ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. 2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು. 3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು. 4 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ. 5 ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು. 6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ. ಇಸ್ರಾಯೇಲರ ದುರ್ನಡತೆಗಳು 7 ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ. 8 ಗಿಲ್ಯಾದು ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿನ ಹೆಜ್ಜೆಜಾಡುಗಳು ರಕ್ತಮಯವೇ. 9 ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ. 10 ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ. 11 ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.
ಪಶ್ಚಾತ್ತಾಪ ಪಡದ ಇಸ್ರಾಯೇಲರು 1 ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು. .::. 2 ಒಂದೆರಡು ದಿನದ ಮೇಲೆ ಆತನು ನಮ್ಮನ್ನು ಬದುಕಿಸುವನು; ಮೂರನೆಯ ದಿನದಲ್ಲಿ ಆತನು ನಮ್ಮನ್ನೆಬ್ಬಿಸಲು ಆತನ ಸಾನ್ನಿಧ್ಯದಲ್ಲಿ ಬಾಳುವೆವು. .::. 3 ಯೆಹೋವನನ್ನು ತಿಳಿದುಕೊಳ್ಳೋಣ, ನಿರಂತರವಾಗಿ ಹುಡುಕಿ ತಿಳಿದುಕೊಳ್ಳೋಣ, ಆತನ ಆಗಮನವು ಉದಯದಂತೆ ನಿಶ್ಚಯ; ಆತನು ಮುಂಗಾರಿನಂತೆಯೂ, ಭೂಮಿಯನ್ನು ತಂಪುಮಾಡುವ ಹಿಂಗಾರಿನಂತೆಯೂ ನಮಗೆ ಸಿಕ್ಕುವನು” ಅಂದುಕೊಂಡು ನನ್ನನ್ನು ಮೊರೆಹೋಗುವರು. .::. 4 ಎಫ್ರಾಯೀಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಯೆಹೂದವೇ, ನಿನ್ನನ್ನು ಹೇಗೆ ಸರಿಮಾಡಲಿ? ನಿಮ್ಮ ಭಕ್ತಿಯು ಪ್ರಾತಃಕಾಲದ ಮೋಡಕ್ಕೂ, ಬೇಗನೆ ಮಾಯವಾಗುವ ಇಬ್ಬನಿಗೂ ಸಮಾನವಾಗಿದೆ. .::. 5 ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿಯ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ಮಿಂಚಿನಂತೆ ಹೊರಡುವುದು. .::. 6 ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ. .::. ಇಸ್ರಾಯೇಲರ ದುರ್ನಡತೆಗಳು 7 ಅವರು ಆದಾಮನಂತೆ ನನ್ನ ನಿಬಂಧನೆಯನ್ನು ಮೀರಿದ್ದಾರೆ; ಅಲ್ಲಲ್ಲಿ ನನಗೆ ದ್ರೋಹಮಾಡಿದ್ದಾರೆ. .::. 8 ಗಿಲ್ಯಾದು ಅಧರ್ಮಿಗಳು ತುಂಬಿದ ಪಟ್ಟಣ, ಅಲ್ಲಿನ ಹೆಜ್ಜೆಜಾಡುಗಳು ರಕ್ತಮಯವೇ. .::. 9 ಕಳ್ಳರ ಗುಂಪು ಒಬ್ಬನಿಗೆ ಹೊಂಚು ಹಾಕುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು, ಶೆಕೆಮಿಗೆ ಯಾತ್ರೆ ಹೋಗುವವರನ್ನು ದೋಚಿ ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡೆಸುತ್ತಾರೆ. .::. 10 ನಾನು ಇಸ್ರಾಯೇಲ್ ಮನೆತನದಲ್ಲಿ ಅಸಹ್ಯವನ್ನು ನೋಡಿದ್ದೇನೆ; ಎಫ್ರಾಯೀಮಿನೊಳಗೆ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಹೊಲೆಯಾಗಿದೆ. .::. 11 ಯೆಹೂದವೇ, ನಿನಗೂ ಅಧರ್ಮಫಲದ ಸುಗ್ಗಿಯು ನೇಮಕವಾಗಿದೆ.
  • ಹೋಶೇ ಅಧ್ಯಾಯ 1  
  • ಹೋಶೇ ಅಧ್ಯಾಯ 2  
  • ಹೋಶೇ ಅಧ್ಯಾಯ 3  
  • ಹೋಶೇ ಅಧ್ಯಾಯ 4  
  • ಹೋಶೇ ಅಧ್ಯಾಯ 5  
  • ಹೋಶೇ ಅಧ್ಯಾಯ 6  
  • ಹೋಶೇ ಅಧ್ಯಾಯ 7  
  • ಹೋಶೇ ಅಧ್ಯಾಯ 8  
  • ಹೋಶೇ ಅಧ್ಯಾಯ 9  
  • ಹೋಶೇ ಅಧ್ಯಾಯ 10  
  • ಹೋಶೇ ಅಧ್ಯಾಯ 11  
  • ಹೋಶೇ ಅಧ್ಯಾಯ 12  
  • ಹೋಶೇ ಅಧ್ಯಾಯ 13  
  • ಹೋಶೇ ಅಧ್ಯಾಯ 14  
×

Alert

×

Kannada Letters Keypad References