ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಶಾಯ

ಯೆಶಾಯ ಅಧ್ಯಾಯ 25

ನ್ಯಾಯತೀರ್ಪು ಮತ್ತು ರಕ್ಷಣೆಗಾಗಿ ಸ್ತುತಿ 1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. 2 ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ. 3 ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು. 4 ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. 5 ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು. 6 ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. 7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. 8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. 9 ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. 10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು. 11 ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು. 12 ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.
ನ್ಯಾಯತೀರ್ಪು ಮತ್ತು ರಕ್ಷಣೆಗಾಗಿ ಸ್ತುತಿ 1 ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. .::. 2 ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ. .::. 3 ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು. .::. 4 ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. .::. 5 ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು. .::. 6 ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. .::. 7 ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. .::. 8 ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. .::. 9 ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. .::. 10 ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು. .::. 11 ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು. .::. 12 ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References