ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಶಾಯ

ಯೆಶಾಯ ಅಧ್ಯಾಯ 34

ಯೆಹೋವನು ಜನಾಂಗಗಳನ್ನು ದಂಡಿಸುವುದು 1 ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ. 2 ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ. 3 ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು. 4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು. 5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು. 6 ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ. 7 ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು. 8 ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ. 9 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು. 10 ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು. 11 ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು. 12 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು. 13 ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು. 14 ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು. 15 ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು. 16 ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು. 17 ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
ಯೆಹೋವನು ಜನಾಂಗಗಳನ್ನು ದಂಡಿಸುವುದು 1 ಜನಾಂಗಗಳೇ, ಸಮೀಪಕ್ಕೆ ಬಂದು ಕೇಳಿರಿ; ಜನಗಳೇ, ಕಿವಿಗೊಡಿರಿ! ಭೂಮಿಯೂ ಅದರಲ್ಲಿನ ಸಮಸ್ತವೂ, ಲೋಕವೂ ಅದರಿಂದ ಉದ್ಭವಿಸುವುದೆಲ್ಲವೂ ಆಲಿಸಲಿ. .::. 2 ಯೆಹೋವನು ಸಕಲ ಜನಾಂಗಗಳ ಮೇಲೆ ಕೋಪಗೊಂಡು, ಅವುಗಳ ಸೈನ್ಯದ ಮೇಲೆ ರೋಷಗೊಂಡು, ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಿದ್ದಾನೆ. .::. 3 ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು. .::. 4 ನಕ್ಷತ್ರ ಸೈನ್ಯವೆಲ್ಲಾ ಗತಿಸಿ ಹೋಗುವುದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಮಾಗಿದ ಹಣ್ಣು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಕೆಳಗೆ ಉದುರುವುದು. .::. 5 ನನ್ನ ಖಡ್ಗವು ಮೇಲಿನ ಲೋಕದಲ್ಲಿ ರೋಷಪಾನ ಮಾಡುವುದು, ಇಗೋ, ನಾನು ಶಪಿಸಿದ ಎದೋಮೆಂಬ ಜನಾಂಗದ ಮೇಲೆ ನ್ಯಾಯ ತೀರಿಸುವುದಕ್ಕೆ ಕೆಳಗೆ ಇಳಿದು ಬರುವುದು. .::. 6 ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ. .::. 7 ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಮತ್ತು ಹೋರಿಗೂಳಿಗಳೂ ಹತವಾಗುವವು. ಆ ದೇಶವು ರಕ್ತದಿಂದ ತೊಯಿದಿರುವುದು, ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು. .::. 8 ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ. .::. 9 ಅಲ್ಲಿ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವವು, ಧೂಳು ಗಂಧಕವಾಗುವುದು, ದೇಶವೆಲ್ಲಾ ಉರಿಯುವ ಇಳಿಜಾರು ಪ್ರದೇಶವಾಗುವುದು. .::. 10 ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು. .::. 11 ಆದರೆ ಕಾಡಿನ ಪಕ್ಷಿಗಳು, ಪ್ರಾಣಿಗಳು ಅಲ್ಲಿ ವಾಸಿಸುವವು. ಗೂಬೆ ಮತ್ತು ಕಾಗೆಗಳು ಅಲ್ಲಿ ವಾಸಿಸುವವು; ಯೆಹೋವನು ಅದರ ಮೇಲೆ ನಾಶ ಎಂಬ ನೂಲನ್ನೂ ಪಾಳು ಎಂಬ ಮಟ್ಟಗೋಲನ್ನೂ ಎಳೆಯುವನು. .::. 12 ಅಲ್ಲಿ ಪಟ್ಟಕ್ಕೆ ಕರೆಯಲು ಪ್ರಮುಖರಲ್ಲಿ ಯಾರೂ ಸಿಕ್ಕುವುದಿಲ್ಲ; ದೇಶದಲ್ಲಿ ಪ್ರಧಾನರೇ ಇಲ್ಲದಂತಾಗುವರು. .::. 13 ಅಲ್ಲಿನ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು, ಅದರ ಕೋಟೆಗಳಲ್ಲಿ ಮುಳ್ಳುಗಿಡಗಳೂ, ದತ್ತೂರಿಯೂ ಹಬ್ಬಿಕೊಳ್ಳುವವು. ಅದು ನರಿಗಳಿಗೆ ಗುಹೆಯಾಗಿಯೂ, ಉಷ್ಟ್ರಪಕ್ಷಿಗಳಿಗೆ ನಿವಾಸವಾಗಿಯೂ ಇರುವುದು. .::. 14 ಕಾಡುಮೃಗಗಳು ಮತ್ತು ನರಿಗಳು ಅಲ್ಲಿ ಸಂಧಿಸುವವು, ಕಾಡಿನ ಆಡುಗಳು ತನ್ನ ಜೊತೆಯನ್ನು ಕೂಗುವುದು, ಭೂತ ಪ್ರೇತಗಳು ಅಲ್ಲಿ ಹಾಯಾಗಿ ವಿಶ್ರಮಿಸಿಕೊಂಡು, ಆಸರೆಯನ್ನು ಕಂಡುಕೊಳ್ಳುವುದು. .::. 15 ಅಲ್ಲಿ ಗೂಬೆಯೂ ಗೂಡನ್ನು ಮಾಡಿಕೊಂಡು ಮೊಟ್ಟೆಯಿಟ್ಟು, ಮರಿಮಾಡಿ ಮರೆಯಲ್ಲಿ ಕೂಡಿಸಿಕೊಳ್ಳುವುದು. ಹೌದು, ಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವವು. .::. 16 ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು. .::. 17 ಆತನೇ ಇವುಗಳಿಗೆ ಪಾಲು ಮಾಡಿಕೊಟ್ಟಿದ್ದಾನೆ. ಆತನ ಕೈಯೇ ಗೆರೆ ಹಾಕಿ ದೇಶವನ್ನು ಹಂಚಿಕೊಟ್ಟಿದೆ. ಅದು ಇವುಗಳಿಗೆ ನಿತ್ಯ ಸ್ವಾಸ್ತ್ಯವಾಗುವುದು, ಅವು ತಲಾತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References