ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯಾಜಕಕಾಂಡ

ಯಾಜಕಕಾಂಡ ಅಧ್ಯಾಯ 15

ಜನನೇಂದ್ರಿಯದ ಸ್ರಾವದಿಂದುಂಟಾಗುವ ಅಶುದ್ಧತೆ 1 ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ, 2 “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು. 3 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು. 4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು. 5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು. 6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. 9 ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು. 10 ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 11 ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು. 13 “ ‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು. 14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು. 15 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು. 16 “ ‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. 17 ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು. 18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. 19 “ ‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. 20 ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು. 21 ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 22 ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. 23 ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. 24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು. 25 “ ‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು. 26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು. 27 ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. 28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು. 29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು. 30 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. 31 32 “ ‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು. “ ‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು, 33 ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’ ” ಎಂದು ಹೇಳಿದನು.
ಜನನೇಂದ್ರಿಯದ ಸ್ರಾವದಿಂದುಂಟಾಗುವ ಅಶುದ್ಧತೆ 1 ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ, .::. 2 “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು. .::. 3 ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು. .::. 4 ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು. .::. 5 ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು. .::. 6 ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. .::. 7 ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. .::. 8 ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. .::. 9 ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು. .::. 10 ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. .::. 11 ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. .::. 12 ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು. .::. 13 “ ‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು. .::. 14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು. .::. 15 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು. .::. 16 “ ‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. .::. 17 ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು. .::. 18 ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. .::. 19 “ ‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. .::. 20 ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು. .::. 21 ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. .::. 22 ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು. .::. 23 ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. .::. 24 ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು. .::. 25 “ ‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು. .::. 26 ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು. .::. 27 ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. .::. 28 ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು. .::. 29 ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು. .::. 30 ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು. .::. 31 .::. 32 “ ‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು. “ ‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು, .::. 33 ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’ ” ಎಂದು ಹೇಳಿದನು.
  • ಯಾಜಕಕಾಂಡ ಅಧ್ಯಾಯ 1  
  • ಯಾಜಕಕಾಂಡ ಅಧ್ಯಾಯ 2  
  • ಯಾಜಕಕಾಂಡ ಅಧ್ಯಾಯ 3  
  • ಯಾಜಕಕಾಂಡ ಅಧ್ಯಾಯ 4  
  • ಯಾಜಕಕಾಂಡ ಅಧ್ಯಾಯ 5  
  • ಯಾಜಕಕಾಂಡ ಅಧ್ಯಾಯ 6  
  • ಯಾಜಕಕಾಂಡ ಅಧ್ಯಾಯ 7  
  • ಯಾಜಕಕಾಂಡ ಅಧ್ಯಾಯ 8  
  • ಯಾಜಕಕಾಂಡ ಅಧ್ಯಾಯ 9  
  • ಯಾಜಕಕಾಂಡ ಅಧ್ಯಾಯ 10  
  • ಯಾಜಕಕಾಂಡ ಅಧ್ಯಾಯ 11  
  • ಯಾಜಕಕಾಂಡ ಅಧ್ಯಾಯ 12  
  • ಯಾಜಕಕಾಂಡ ಅಧ್ಯಾಯ 13  
  • ಯಾಜಕಕಾಂಡ ಅಧ್ಯಾಯ 14  
  • ಯಾಜಕಕಾಂಡ ಅಧ್ಯಾಯ 15  
  • ಯಾಜಕಕಾಂಡ ಅಧ್ಯಾಯ 16  
  • ಯಾಜಕಕಾಂಡ ಅಧ್ಯಾಯ 17  
  • ಯಾಜಕಕಾಂಡ ಅಧ್ಯಾಯ 18  
  • ಯಾಜಕಕಾಂಡ ಅಧ್ಯಾಯ 19  
  • ಯಾಜಕಕಾಂಡ ಅಧ್ಯಾಯ 20  
  • ಯಾಜಕಕಾಂಡ ಅಧ್ಯಾಯ 21  
  • ಯಾಜಕಕಾಂಡ ಅಧ್ಯಾಯ 22  
  • ಯಾಜಕಕಾಂಡ ಅಧ್ಯಾಯ 23  
  • ಯಾಜಕಕಾಂಡ ಅಧ್ಯಾಯ 24  
  • ಯಾಜಕಕಾಂಡ ಅಧ್ಯಾಯ 25  
  • ಯಾಜಕಕಾಂಡ ಅಧ್ಯಾಯ 26  
  • ಯಾಜಕಕಾಂಡ ಅಧ್ಯಾಯ 27  
×

Alert

×

Kannada Letters Keypad References