ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಮಾರ್ಕನು

ಮಾರ್ಕನು ಅಧ್ಯಾಯ 2

ಯೇಸು ಒಬ್ಬ ರೋಗಿಯ ಪಾಪವನ್ನು ಕ್ಷಮಿಸಿ ಅವನ ರೋಗವನ್ನು ಸ್ವಸ್ಥಪಡಿಸಿದ್ದಕ್ಕೆ ಶಾಸ್ತ್ರಿಗಳ ಆಕ್ಷೇಪ
ಮತ್ತಾ 9:1-8; ಲೂಕ 5:17-26

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು. 2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. 3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. 4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ* ಕೀರ್ತ 103:3; ಲೂಕ 7: 48. ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. 6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; 7 “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. 8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? 9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? 10 ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ 11 ಯೋಹಾ 5:8; ಅ. ಕೃ. 3: 6. “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು. 12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು. ಯೇಸು ಲೇವಿಯನ್ನು ಕರೆದದ್ದು
ಮತ್ತಾ 9:9-13; ಲೂಕ 5:27-32

13 ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು. 14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. 15 ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ತೆರಿಗೆಯವರೂ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. § ಪಾಠಾಂತರ: ಅಂಥವರು ಬಹುಮಂದಿ ಇದ್ದರು; ಯೇಸುವನ್ನು ಹಿಂಬಾಲಿಸಿದರು. ಯೇಸುವು ಪಾಪಿಗಳ ಸಂಗಡ ಊಟಮಾಡುವುದನ್ನು ಫರಿಸಾಯರಾದ ಶಾಸ್ತ್ರಿಗಳು ಕಂಡು ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. 16 ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. 17 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. ಉಪವಾಸದ ಕುರಿತಾದ ಪ್ರಶ್ನೆ
ಮತ್ತಾ 9:14-17; ಲೂಕ 5:33-38

18 ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. 19 ಅದಕ್ಕೆ ಯೇಸು ಅವರಿಗೆ, * ಯೋಹಾ 3: 29. “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. 20 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. 21 “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. 22 ಮತ್ತು ಹಳೆಯ ಮೇಕೆ ಅಥವಾ ಯಾವುದೆ ಪ್ರಾಣಿಗಳ ಚರ್ಮದಿಂದ ಮಾಡಿದ ಚೀಲ. ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು. ಮನುಷ್ಯಕುಮಾರನು ಸಬ್ಬತ್ ದಿನದ ಒಡೆಯನು
ಮತ್ತಾ 12:1-14; ಲೂಕ 6:1-11

23 ಯೇಸು ಸಬ್ಬತ್ ದಿನದಲ್ಲಿ ಧಾನ್ಯ ಅಥವಾ ಕಾಳು ಪೂರ್ಣವಾಗಿ ಬೆಳೆದ, ಫಸಲು ಕೊಡುವ. ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು. 24 ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು. 25 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ? 2 6 [§ 1. ಸಮು 21: 6 ]ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ, 27 * ವಿಮೋ 23:12; ಧರ್ಮೋ 5: 14. “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ. 28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.
ಯೇಸು ಒಬ್ಬ ರೋಗಿಯ ಪಾಪವನ್ನು ಕ್ಷಮಿಸಿ ಅವನ ರೋಗವನ್ನು ಸ್ವಸ್ಥಪಡಿಸಿದ್ದಕ್ಕೆ ಶಾಸ್ತ್ರಿಗಳ ಆಕ್ಷೇಪ
ಮತ್ತಾ 9:1-8; ಲೂಕ 5:17-26

1 ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು. .::. 2 ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು. .::. 3 ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು. .::. 4 ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು. .::. 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ* ಕೀರ್ತ 103:3; ಲೂಕ 7: 48. ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು. .::. 6 ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು; .::. 7 “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು. .::. 8 ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ? .::. 9 ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ? .::. 10 ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ .::. 11 ಯೋಹಾ 5:8; ಅ. ಕೃ. 3: 6. “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು. .::. 12 ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು. .::. ಯೇಸು ಲೇವಿಯನ್ನು ಕರೆದದ್ದು
ಮತ್ತಾ 9:9-13; ಲೂಕ 5:27-32

13 ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು. .::. 14 ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು. .::. 15 ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ತೆರಿಗೆಯವರೂ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. § ಪಾಠಾಂತರ: ಅಂಥವರು ಬಹುಮಂದಿ ಇದ್ದರು; ಯೇಸುವನ್ನು ಹಿಂಬಾಲಿಸಿದರು. ಯೇಸುವು ಪಾಪಿಗಳ ಸಂಗಡ ಊಟಮಾಡುವುದನ್ನು ಫರಿಸಾಯರಾದ ಶಾಸ್ತ್ರಿಗಳು ಕಂಡು ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು. .::. 16 ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು. .::. 17 ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು. .::. ಉಪವಾಸದ ಕುರಿತಾದ ಪ್ರಶ್ನೆ
ಮತ್ತಾ 9:14-17; ಲೂಕ 5:33-38

18 ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು. .::. 19 ಅದಕ್ಕೆ ಯೇಸು ಅವರಿಗೆ, * ಯೋಹಾ 3: 29. “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು. .::. 20 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು. .::. 21 “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ. .::. 22 ಮತ್ತು ಹಳೆಯ ಮೇಕೆ ಅಥವಾ ಯಾವುದೆ ಪ್ರಾಣಿಗಳ ಚರ್ಮದಿಂದ ಮಾಡಿದ ಚೀಲ. ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು. .::. ಮನುಷ್ಯಕುಮಾರನು ಸಬ್ಬತ್ ದಿನದ ಒಡೆಯನು
ಮತ್ತಾ 12:1-14; ಲೂಕ 6:1-11

23 ಯೇಸು ಸಬ್ಬತ್ ದಿನದಲ್ಲಿ ಧಾನ್ಯ ಅಥವಾ ಕಾಳು ಪೂರ್ಣವಾಗಿ ಬೆಳೆದ, ಫಸಲು ಕೊಡುವ. ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು. .::. 24 ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು. .::. 25 ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ? .::. 2 6 [§ 1. ಸಮು 21: 6 ]ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ, .::. 27 * ವಿಮೋ 23:12; ಧರ್ಮೋ 5: 14. “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ. .::. 28 ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.
  • ಮಾರ್ಕನು ಅಧ್ಯಾಯ 1  
  • ಮಾರ್ಕನು ಅಧ್ಯಾಯ 2  
  • ಮಾರ್ಕನು ಅಧ್ಯಾಯ 3  
  • ಮಾರ್ಕನು ಅಧ್ಯಾಯ 4  
  • ಮಾರ್ಕನು ಅಧ್ಯಾಯ 5  
  • ಮಾರ್ಕನು ಅಧ್ಯಾಯ 6  
  • ಮಾರ್ಕನು ಅಧ್ಯಾಯ 7  
  • ಮಾರ್ಕನು ಅಧ್ಯಾಯ 8  
  • ಮಾರ್ಕನು ಅಧ್ಯಾಯ 9  
  • ಮಾರ್ಕನು ಅಧ್ಯಾಯ 10  
  • ಮಾರ್ಕನು ಅಧ್ಯಾಯ 11  
  • ಮಾರ್ಕನು ಅಧ್ಯಾಯ 12  
  • ಮಾರ್ಕನು ಅಧ್ಯಾಯ 13  
  • ಮಾರ್ಕನು ಅಧ್ಯಾಯ 14  
  • ಮಾರ್ಕನು ಅಧ್ಯಾಯ 15  
  • ಮಾರ್ಕನು ಅಧ್ಯಾಯ 16  
×

Alert

×

Kannada Letters Keypad References