ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಮತ್ತಾಯನು

ಮತ್ತಾಯನು ಅಧ್ಯಾಯ 11

1 2 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು. ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು * ಅಥವಾ, ಆದರೆ ಕ್ರಿಸ್ತನು ಮಾಡತಕ್ಕ ಕೆಲಸಗಳು (ಯೆಶಾ 35:5, 6; 61:1) ನಡೆಯುತ್ತವೆಂಬ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನ್ನು ಕೇಳಿ ಯೇಸುವಿನ ಬಳಿಗೆ. ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ, 3 “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು. 4 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ; 5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ. 6 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. 7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? 8 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ. 9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ. 10 ಮಲಾ. 3:1: ‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ. 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. 12 ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. 13 ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. 14 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. 15 ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ. 16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, 17 ‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ. 18 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ. 19 ಮನುಷ್ಯಕುಮಾರನು ಬಂದನು, ಮತ್ತಾ 9:10; ಲೂಕ 15:2: ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು § ಕೆಲವು ಪ್ರತಿಗಳಲ್ಲಿ ಭ್ರಷ್ಟರ ಎಂಬುದಾಗಿದೆ. ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. * ಆದರೆ ನಿಜವಾದ ಜ್ಞಾನಿಯು ಒಳ್ಳೆಯ ಕಾರ್ಯಗಳನ್ನು ಮಾಡುವುದರ ಮೂಲಕ ಜ್ಞಾನವನ್ನು ತೋರ್ಪಡಿಸುತ್ತಾನೆ ಅಂದನು. ಆದರೆ ಜ್ಞಾನವು ಅದರ ಕೆಲವು ಪ್ರತಿಗಳಲ್ಲಿ ಮಕ್ಕಳಿಂದ. ಅಂದರೆ ಜ್ಞಾನಾವಲಂಬಿಗಳಿಂದ ಎಂದು ಬರೆದದೆ; ಲೂಕ 7:35 ನೋಡಿರಿ. ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು. ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು
ಲೂಕ 10:12-15; ಲೂಕ 10:21-22

20 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. 21 ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು. 22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. 23 ಎಲೈ ಕಪೆರ್ನೌಮೇ ಯೆಶಾ 14:13-15: ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. 24 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು. 25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. 26 ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು. 27 § ಮತ್ತಾ 28:18; ಯೋಹಾ 1:18; 6, 46: ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. ಯೇಸುವಿನಿಂದ ವಿಶ್ರಾಂತಿಯ ಆಹ್ವಾನ 28 “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. 29 * ಯೆರೆ 6:16; ಯೋಹಾ 13:15; ಫಿಲಿ. 2:5, 7, 8: ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. 30 ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
1 .::. 2 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು. ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು * ಅಥವಾ, ಆದರೆ ಕ್ರಿಸ್ತನು ಮಾಡತಕ್ಕ ಕೆಲಸಗಳು (ಯೆಶಾ 35:5, 6; 61:1) ನಡೆಯುತ್ತವೆಂಬ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನ್ನು ಕೇಳಿ ಯೇಸುವಿನ ಬಳಿಗೆ. ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ, .::. 3 “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು. .::. 4 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ; .::. 5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ. .::. 6 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು. .::. 7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ? .::. 8 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ. .::. 9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ. .::. 10 ಮಲಾ. 3:1: ‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ. .::. 11 ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. .::. 12 ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ. .::. 13 ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು. .::. 14 ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ. .::. 15 ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ. .::. 16 ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ, .::. 17 ‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ. .::. 18 ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ. .::. 19 ಮನುಷ್ಯಕುಮಾರನು ಬಂದನು, ಮತ್ತಾ 9:10; ಲೂಕ 15:2: ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು § ಕೆಲವು ಪ್ರತಿಗಳಲ್ಲಿ ಭ್ರಷ್ಟರ ಎಂಬುದಾಗಿದೆ. ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. * ಆದರೆ ನಿಜವಾದ ಜ್ಞಾನಿಯು ಒಳ್ಳೆಯ ಕಾರ್ಯಗಳನ್ನು ಮಾಡುವುದರ ಮೂಲಕ ಜ್ಞಾನವನ್ನು ತೋರ್ಪಡಿಸುತ್ತಾನೆ ಅಂದನು. ಆದರೆ ಜ್ಞಾನವು ಅದರ ಕೆಲವು ಪ್ರತಿಗಳಲ್ಲಿ ಮಕ್ಕಳಿಂದ. ಅಂದರೆ ಜ್ಞಾನಾವಲಂಬಿಗಳಿಂದ ಎಂದು ಬರೆದದೆ; ಲೂಕ 7:35 ನೋಡಿರಿ. ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು. .::. ಯೇಸು ಮಾನಸಾಂತರಪಡದ ಪಟ್ಟಣದವರನ್ನು ಗದರಿಸಿದ್ದು
ಲೂಕ 10:12-15; ಲೂಕ 10:21-22

20 ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು. .::. 21 ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು. .::. 22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು. .::. 23 ಎಲೈ ಕಪೆರ್ನೌಮೇ ಯೆಶಾ 14:13-15: ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. .::. 24 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು. .::. 25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ. .::. 26 ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು. .::. 27 § ಮತ್ತಾ 28:18; ಯೋಹಾ 1:18; 6, 46: ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ. .::. ಯೇಸುವಿನಿಂದ ವಿಶ್ರಾಂತಿಯ ಆಹ್ವಾನ 28 “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು. .::. 29 * ಯೆರೆ 6:16; ಯೋಹಾ 13:15; ಫಿಲಿ. 2:5, 7, 8: ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು. .::. 30 ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
  • ಮತ್ತಾಯನು ಅಧ್ಯಾಯ 1  
  • ಮತ್ತಾಯನು ಅಧ್ಯಾಯ 2  
  • ಮತ್ತಾಯನು ಅಧ್ಯಾಯ 3  
  • ಮತ್ತಾಯನು ಅಧ್ಯಾಯ 4  
  • ಮತ್ತಾಯನು ಅಧ್ಯಾಯ 5  
  • ಮತ್ತಾಯನು ಅಧ್ಯಾಯ 6  
  • ಮತ್ತಾಯನು ಅಧ್ಯಾಯ 7  
  • ಮತ್ತಾಯನು ಅಧ್ಯಾಯ 8  
  • ಮತ್ತಾಯನು ಅಧ್ಯಾಯ 9  
  • ಮತ್ತಾಯನು ಅಧ್ಯಾಯ 10  
  • ಮತ್ತಾಯನು ಅಧ್ಯಾಯ 11  
  • ಮತ್ತಾಯನು ಅಧ್ಯಾಯ 12  
  • ಮತ್ತಾಯನು ಅಧ್ಯಾಯ 13  
  • ಮತ್ತಾಯನು ಅಧ್ಯಾಯ 14  
  • ಮತ್ತಾಯನು ಅಧ್ಯಾಯ 15  
  • ಮತ್ತಾಯನು ಅಧ್ಯಾಯ 16  
  • ಮತ್ತಾಯನು ಅಧ್ಯಾಯ 17  
  • ಮತ್ತಾಯನು ಅಧ್ಯಾಯ 18  
  • ಮತ್ತಾಯನು ಅಧ್ಯಾಯ 19  
  • ಮತ್ತಾಯನು ಅಧ್ಯಾಯ 20  
  • ಮತ್ತಾಯನು ಅಧ್ಯಾಯ 21  
  • ಮತ್ತಾಯನು ಅಧ್ಯಾಯ 22  
  • ಮತ್ತಾಯನು ಅಧ್ಯಾಯ 23  
  • ಮತ್ತಾಯನು ಅಧ್ಯಾಯ 24  
  • ಮತ್ತಾಯನು ಅಧ್ಯಾಯ 25  
  • ಮತ್ತಾಯನು ಅಧ್ಯಾಯ 26  
  • ಮತ್ತಾಯನು ಅಧ್ಯಾಯ 27  
  • ಮತ್ತಾಯನು ಅಧ್ಯಾಯ 28  
×

Alert

×

Kannada Letters Keypad References