ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಮತ್ತಾಯನು

ಮತ್ತಾಯನು ಅಧ್ಯಾಯ 22

ಮದುವೆ ಔತಣದ ಸಾಮ್ಯ 1 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ* ಶಾಸ್ತ್ರಿಗಳು ಹೇಳಿದ್ದೇನೆಂದರೆ, 2 “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. 3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ. 4 ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು. 5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು; 6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು. 7 ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. 8 ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ. 9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು. 10 ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು. 11 ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, 12 ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. 13 ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’ 14 ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು. ಸುಂಕದ ವಿಷಯದಲ್ಲಿ ಪ್ರಶ್ನೆಮಾಡಿದ್ದು
ಮಾರ್ಕ 12:13-37; ಲೂಕ 20:20-44

15 ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು 16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು. 17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. 18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? 19 ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. 20 ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ 21 ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, ರೋಮಾ. 13:7 “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು. 22 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು. ಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದು 23 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು. 24 ಇವರು ಆತನಿಗೆ, “ಬೋಧಕನೇ, ಧರ್ಮೋ 25:5 ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’ 25 ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು; 26 ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು. 27 ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು. 28 ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು. 29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, § ಯೋಹಾ 20:9; 1 ಕೊರಿ 6:14 “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ; 30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ. 31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ, 32 * ವಿಮೋ 3:6 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು. 33 ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು. ಮುಖ್ಯವಾದ ಆಜ್ಞೆ 34 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು. 35 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು, 36 “ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ 37 ಯೇಸು ಅವನಿಗೆ, ಧರ್ಮೋ 6:5 “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ 38 ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. 39 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ಯಾಜ 19:18 ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. 40 ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು. ದಾವೀದನ ಮಗನು ಎಂಬ ವಿಷಯವಾಗಿ ಪ್ರಶ್ನೆ ಮಾಡಿದ್ದು 41 ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ, 42 “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ 43 ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ? 44 § ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. 45 ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು. 46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
ಮದುವೆ ಔತಣದ ಸಾಮ್ಯ 1 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ* ಶಾಸ್ತ್ರಿಗಳು ಹೇಳಿದ್ದೇನೆಂದರೆ, .::. 2 “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. .::. 3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ. .::. 4 ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು. .::. 5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು; .::. 6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು. .::. 7 ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. .::. 8 ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ. .::. 9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು. .::. 10 ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು. .::. 11 ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು, .::. 12 ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು. .::. 13 ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’ .::. 14 ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು. .::. ಸುಂಕದ ವಿಷಯದಲ್ಲಿ ಪ್ರಶ್ನೆಮಾಡಿದ್ದು
ಮಾರ್ಕ 12:13-37; ಲೂಕ 20:20-44

15 ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು .::. 16 ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು. .::. 17 ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು. .::. 18 ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ? .::. 19 ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು. .::. 20 ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ .::. 21 ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, ರೋಮಾ. 13:7 “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು. .::. 22 ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು. .::. ಪುನರುತ್ಥಾನದ ವಿಷಯವನ್ನು ಪ್ರಶ್ನಿಸಿದ್ದು 23 ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು. .::. 24 ಇವರು ಆತನಿಗೆ, “ಬೋಧಕನೇ, ಧರ್ಮೋ 25:5 ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’ .::. 25 ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು; .::. 26 ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು. .::. 27 ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು. .::. 28 ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು. .::. 29 ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, § ಯೋಹಾ 20:9; 1 ಕೊರಿ 6:14 “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ; .::. 30 ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ. .::. 31 ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ, .::. 32 * ವಿಮೋ 3:6 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು. .::. 33 ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು. .::. ಮುಖ್ಯವಾದ ಆಜ್ಞೆ 34 ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು. .::. 35 ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು, .::. 36 “ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ .::. 37 ಯೇಸು ಅವನಿಗೆ, ಧರ್ಮೋ 6:5 “ ‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’ .::. 38 ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು. .::. 39 ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ಯಾಜ 19:18 ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ. .::. 40 ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು. .::. ದಾವೀದನ ಮಗನು ಎಂಬ ವಿಷಯವಾಗಿ ಪ್ರಶ್ನೆ ಮಾಡಿದ್ದು 41 ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ, .::. 42 “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ .::. 43 ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ? .::. 44 § ಕೀರ್ತ 110:1 “ ‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು. .::. 45 ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು. .::. 46 ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
  • ಮತ್ತಾಯನು ಅಧ್ಯಾಯ 1  
  • ಮತ್ತಾಯನು ಅಧ್ಯಾಯ 2  
  • ಮತ್ತಾಯನು ಅಧ್ಯಾಯ 3  
  • ಮತ್ತಾಯನು ಅಧ್ಯಾಯ 4  
  • ಮತ್ತಾಯನು ಅಧ್ಯಾಯ 5  
  • ಮತ್ತಾಯನು ಅಧ್ಯಾಯ 6  
  • ಮತ್ತಾಯನು ಅಧ್ಯಾಯ 7  
  • ಮತ್ತಾಯನು ಅಧ್ಯಾಯ 8  
  • ಮತ್ತಾಯನು ಅಧ್ಯಾಯ 9  
  • ಮತ್ತಾಯನು ಅಧ್ಯಾಯ 10  
  • ಮತ್ತಾಯನು ಅಧ್ಯಾಯ 11  
  • ಮತ್ತಾಯನು ಅಧ್ಯಾಯ 12  
  • ಮತ್ತಾಯನು ಅಧ್ಯಾಯ 13  
  • ಮತ್ತಾಯನು ಅಧ್ಯಾಯ 14  
  • ಮತ್ತಾಯನು ಅಧ್ಯಾಯ 15  
  • ಮತ್ತಾಯನು ಅಧ್ಯಾಯ 16  
  • ಮತ್ತಾಯನು ಅಧ್ಯಾಯ 17  
  • ಮತ್ತಾಯನು ಅಧ್ಯಾಯ 18  
  • ಮತ್ತಾಯನು ಅಧ್ಯಾಯ 19  
  • ಮತ್ತಾಯನು ಅಧ್ಯಾಯ 20  
  • ಮತ್ತಾಯನು ಅಧ್ಯಾಯ 21  
  • ಮತ್ತಾಯನು ಅಧ್ಯಾಯ 22  
  • ಮತ್ತಾಯನು ಅಧ್ಯಾಯ 23  
  • ಮತ್ತಾಯನು ಅಧ್ಯಾಯ 24  
  • ಮತ್ತಾಯನು ಅಧ್ಯಾಯ 25  
  • ಮತ್ತಾಯನು ಅಧ್ಯಾಯ 26  
  • ಮತ್ತಾಯನು ಅಧ್ಯಾಯ 27  
  • ಮತ್ತಾಯನು ಅಧ್ಯಾಯ 28  
×

Alert

×

Kannada Letters Keypad References