ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಕೀರ್ತನೆಗಳು

ಕೀರ್ತನೆಗಳು ಅಧ್ಯಾಯ 38

ದುರವಸ್ಥೆಯಲ್ಲಿರುವ ಭಕ್ತನು ದೇವರ ಸಹಾಯವನ್ನು ಬೇಡಿಕೊಳ್ಳುವುದು 3 *ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
ಕೀರ್ತ 6; ಪ್ರಲಾ 3; ಯಾಜ 2:2; 6:15; 24:7,8 *
ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2 ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. 3 ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. 4 ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. 5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. 6 ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. 7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. 8 ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. 9 ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. 10 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. 11 ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ. 12 ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. 13 ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. 14 ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. 15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. 16 “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. 17 ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ. 18 ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. 19 ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. 20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. 21 ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ. 22 ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.
3. {#3ದುರವಸ್ಥೆಯಲ್ಲಿರುವ ಭಕ್ತನು ದೇವರ ಸಹಾಯವನ್ನು ಬೇಡಿಕೊಳ್ಳುವುದು }*ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ಕೀರ್ತ 6; ಪ್ರಲಾ 3; ಯಾಜ 2:2; 6:15; 24:7,8 *ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ. 2. ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ. 3. ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ. 4. ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ. 5. ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. 6. ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ. 7. ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. 8. ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ. 9. ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ. 10. ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. 11. ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ. 12. ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ. 13. ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ. 14. ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. 15. ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. 16. “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. 17. ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ. 18. ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. 19. ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. 20. ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು. 21. ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ. 22. ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
  • ಕೀರ್ತನೆಗಳು ಅಧ್ಯಾಯ 43  
  • ಕೀರ್ತನೆಗಳು ಅಧ್ಯಾಯ 44  
  • ಕೀರ್ತನೆಗಳು ಅಧ್ಯಾಯ 45  
  • ಕೀರ್ತನೆಗಳು ಅಧ್ಯಾಯ 46  
  • ಕೀರ್ತನೆಗಳು ಅಧ್ಯಾಯ 47  
  • ಕೀರ್ತನೆಗಳು ಅಧ್ಯಾಯ 48  
  • ಕೀರ್ತನೆಗಳು ಅಧ್ಯಾಯ 49  
  • ಕೀರ್ತನೆಗಳು ಅಧ್ಯಾಯ 50  
  • ಕೀರ್ತನೆಗಳು ಅಧ್ಯಾಯ 51  
  • ಕೀರ್ತನೆಗಳು ಅಧ್ಯಾಯ 52  
  • ಕೀರ್ತನೆಗಳು ಅಧ್ಯಾಯ 53  
  • ಕೀರ್ತನೆಗಳು ಅಧ್ಯಾಯ 54  
  • ಕೀರ್ತನೆಗಳು ಅಧ್ಯಾಯ 55  
  • ಕೀರ್ತನೆಗಳು ಅಧ್ಯಾಯ 56  
  • ಕೀರ್ತನೆಗಳು ಅಧ್ಯಾಯ 57  
  • ಕೀರ್ತನೆಗಳು ಅಧ್ಯಾಯ 58  
  • ಕೀರ್ತನೆಗಳು ಅಧ್ಯಾಯ 59  
  • ಕೀರ್ತನೆಗಳು ಅಧ್ಯಾಯ 60  
  • ಕೀರ್ತನೆಗಳು ಅಧ್ಯಾಯ 61  
  • ಕೀರ್ತನೆಗಳು ಅಧ್ಯಾಯ 62  
  • ಕೀರ್ತನೆಗಳು ಅಧ್ಯಾಯ 63  
  • ಕೀರ್ತನೆಗಳು ಅಧ್ಯಾಯ 64  
  • ಕೀರ್ತನೆಗಳು ಅಧ್ಯಾಯ 65  
  • ಕೀರ್ತನೆಗಳು ಅಧ್ಯಾಯ 66  
  • ಕೀರ್ತನೆಗಳು ಅಧ್ಯಾಯ 67  
  • ಕೀರ್ತನೆಗಳು ಅಧ್ಯಾಯ 68  
  • ಕೀರ್ತನೆಗಳು ಅಧ್ಯಾಯ 69  
  • ಕೀರ್ತನೆಗಳು ಅಧ್ಯಾಯ 70  
  • ಕೀರ್ತನೆಗಳು ಅಧ್ಯಾಯ 71  
  • ಕೀರ್ತನೆಗಳು ಅಧ್ಯಾಯ 72  
  • ಕೀರ್ತನೆಗಳು ಅಧ್ಯಾಯ 73  
  • ಕೀರ್ತನೆಗಳು ಅಧ್ಯಾಯ 74  
  • ಕೀರ್ತನೆಗಳು ಅಧ್ಯಾಯ 75  
  • ಕೀರ್ತನೆಗಳು ಅಧ್ಯಾಯ 76  
  • ಕೀರ್ತನೆಗಳು ಅಧ್ಯಾಯ 77  
  • ಕೀರ್ತನೆಗಳು ಅಧ್ಯಾಯ 78  
  • ಕೀರ್ತನೆಗಳು ಅಧ್ಯಾಯ 79  
  • ಕೀರ್ತನೆಗಳು ಅಧ್ಯಾಯ 80  
  • ಕೀರ್ತನೆಗಳು ಅಧ್ಯಾಯ 81  
  • ಕೀರ್ತನೆಗಳು ಅಧ್ಯಾಯ 82  
  • ಕೀರ್ತನೆಗಳು ಅಧ್ಯಾಯ 83  
  • ಕೀರ್ತನೆಗಳು ಅಧ್ಯಾಯ 84  
  • ಕೀರ್ತನೆಗಳು ಅಧ್ಯಾಯ 85  
  • ಕೀರ್ತನೆಗಳು ಅಧ್ಯಾಯ 86  
  • ಕೀರ್ತನೆಗಳು ಅಧ್ಯಾಯ 87  
  • ಕೀರ್ತನೆಗಳು ಅಧ್ಯಾಯ 88  
  • ಕೀರ್ತನೆಗಳು ಅಧ್ಯಾಯ 89  
  • ಕೀರ್ತನೆಗಳು ಅಧ್ಯಾಯ 90  
  • ಕೀರ್ತನೆಗಳು ಅಧ್ಯಾಯ 91  
  • ಕೀರ್ತನೆಗಳು ಅಧ್ಯಾಯ 92  
  • ಕೀರ್ತನೆಗಳು ಅಧ್ಯಾಯ 93  
  • ಕೀರ್ತನೆಗಳು ಅಧ್ಯಾಯ 94  
  • ಕೀರ್ತನೆಗಳು ಅಧ್ಯಾಯ 95  
  • ಕೀರ್ತನೆಗಳು ಅಧ್ಯಾಯ 96  
  • ಕೀರ್ತನೆಗಳು ಅಧ್ಯಾಯ 97  
  • ಕೀರ್ತನೆಗಳು ಅಧ್ಯಾಯ 98  
  • ಕೀರ್ತನೆಗಳು ಅಧ್ಯಾಯ 99  
  • ಕೀರ್ತನೆಗಳು ಅಧ್ಯಾಯ 100  
  • ಕೀರ್ತನೆಗಳು ಅಧ್ಯಾಯ 101  
  • ಕೀರ್ತನೆಗಳು ಅಧ್ಯಾಯ 102  
  • ಕೀರ್ತನೆಗಳು ಅಧ್ಯಾಯ 103  
  • ಕೀರ್ತನೆಗಳು ಅಧ್ಯಾಯ 104  
  • ಕೀರ್ತನೆಗಳು ಅಧ್ಯಾಯ 105  
  • ಕೀರ್ತನೆಗಳು ಅಧ್ಯಾಯ 106  
  • ಕೀರ್ತನೆಗಳು ಅಧ್ಯಾಯ 107  
  • ಕೀರ್ತನೆಗಳು ಅಧ್ಯಾಯ 108  
  • ಕೀರ್ತನೆಗಳು ಅಧ್ಯಾಯ 109  
  • ಕೀರ್ತನೆಗಳು ಅಧ್ಯಾಯ 110  
  • ಕೀರ್ತನೆಗಳು ಅಧ್ಯಾಯ 111  
  • ಕೀರ್ತನೆಗಳು ಅಧ್ಯಾಯ 112  
  • ಕೀರ್ತನೆಗಳು ಅಧ್ಯಾಯ 113  
  • ಕೀರ್ತನೆಗಳು ಅಧ್ಯಾಯ 114  
  • ಕೀರ್ತನೆಗಳು ಅಧ್ಯಾಯ 115  
  • ಕೀರ್ತನೆಗಳು ಅಧ್ಯಾಯ 116  
  • ಕೀರ್ತನೆಗಳು ಅಧ್ಯಾಯ 117  
  • ಕೀರ್ತನೆಗಳು ಅಧ್ಯಾಯ 118  
  • ಕೀರ್ತನೆಗಳು ಅಧ್ಯಾಯ 119  
  • ಕೀರ್ತನೆಗಳು ಅಧ್ಯಾಯ 120  
  • ಕೀರ್ತನೆಗಳು ಅಧ್ಯಾಯ 121  
  • ಕೀರ್ತನೆಗಳು ಅಧ್ಯಾಯ 122  
  • ಕೀರ್ತನೆಗಳು ಅಧ್ಯಾಯ 123  
  • ಕೀರ್ತನೆಗಳು ಅಧ್ಯಾಯ 124  
  • ಕೀರ್ತನೆಗಳು ಅಧ್ಯಾಯ 125  
  • ಕೀರ್ತನೆಗಳು ಅಧ್ಯಾಯ 126  
  • ಕೀರ್ತನೆಗಳು ಅಧ್ಯಾಯ 127  
  • ಕೀರ್ತನೆಗಳು ಅಧ್ಯಾಯ 128  
  • ಕೀರ್ತನೆಗಳು ಅಧ್ಯಾಯ 129  
  • ಕೀರ್ತನೆಗಳು ಅಧ್ಯಾಯ 130  
  • ಕೀರ್ತನೆಗಳು ಅಧ್ಯಾಯ 131  
  • ಕೀರ್ತನೆಗಳು ಅಧ್ಯಾಯ 132  
  • ಕೀರ್ತನೆಗಳು ಅಧ್ಯಾಯ 133  
  • ಕೀರ್ತನೆಗಳು ಅಧ್ಯಾಯ 134  
  • ಕೀರ್ತನೆಗಳು ಅಧ್ಯಾಯ 135  
  • ಕೀರ್ತನೆಗಳು ಅಧ್ಯಾಯ 136  
  • ಕೀರ್ತನೆಗಳು ಅಧ್ಯಾಯ 137  
  • ಕೀರ್ತನೆಗಳು ಅಧ್ಯಾಯ 138  
  • ಕೀರ್ತನೆಗಳು ಅಧ್ಯಾಯ 139  
  • ಕೀರ್ತನೆಗಳು ಅಧ್ಯಾಯ 140  
  • ಕೀರ್ತನೆಗಳು ಅಧ್ಯಾಯ 141  
  • ಕೀರ್ತನೆಗಳು ಅಧ್ಯಾಯ 142  
  • ಕೀರ್ತನೆಗಳು ಅಧ್ಯಾಯ 143  
  • ಕೀರ್ತನೆಗಳು ಅಧ್ಯಾಯ 144  
  • ಕೀರ್ತನೆಗಳು ಅಧ್ಯಾಯ 145  
  • ಕೀರ್ತನೆಗಳು ಅಧ್ಯಾಯ 146  
  • ಕೀರ್ತನೆಗಳು ಅಧ್ಯಾಯ 147  
  • ಕೀರ್ತನೆಗಳು ಅಧ್ಯಾಯ 148  
  • ಕೀರ್ತನೆಗಳು ಅಧ್ಯಾಯ 149  
  • ಕೀರ್ತನೆಗಳು ಅಧ್ಯಾಯ 150  
×

Alert

×

Kannada Letters Keypad References