ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ತೀತನಿಗೆ

ತೀತನಿಗೆ ಅಧ್ಯಾಯ 1

1 ದೇವರ ಸೇವಕನೂ, * 2 ಕೊರಿ 1:1 ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ. 2 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ. 3 ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. 4 ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ. ಸಭೆಯ ಹಿರಿಯರಲ್ಲಿ ಇರಬೇಕಾದ ಲಕ್ಷಣಗಳು 5 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. 6 1 ತಿಮೊ. 3:1-4 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. 7 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, 1 ತಿಮೊ. 3:8; 1 ಪೇತ್ರ 5:2 ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, 8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, § 1 ಕೊರಿ 9:25 ಜಿತೇಂದ್ರಿಯನೂ ಆಗಿದ್ದು, 9 ತಾನು * 1 ತಿಮೊ. 1:10 ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ † 2 ಥೆಸ. 2:13-15 ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. 10 ಅನೇಕರು, ಪ್ರಮುಖವಾಗಿ ಅ. ಕೃ. 10:45; 11:2 ಸುನ್ನತಿಹೊಂದಿದವರು, § 1 ತಿಮೊ. 1:6 ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ. 11 ಅವರು * 1 ತಿಮೊ. 6:5; 2 ಪೇತ್ರ. 2:3 ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ † 2 ತಿಮೊ. 3:6 ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. 12 “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅ. ಕೃ. 17:28 ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ. 13 ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು § 1 ತಿಮೊ. 1:4 ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ * ಕೊಲೊ 2:22 ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ, 14 ತೀತ. 2:1-2 ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ‡ ತೀತ. 2:15; 1 ತಿಮೊ. 5:20 ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. 15 § ಲೂಕ 11:41; 1 ತಿಮೊ. 4:3; ಅ. ಕೃ. 10:15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, * ರೋಮಾ. 14:23 ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. 16 1 ಯೋಹಾ 2:4 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
1 ದೇವರ ಸೇವಕನೂ, * 2 ಕೊರಿ 1:1 ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ. .::. 2 ತಂದೆಯಾದ ದೇವರಿಂದ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನಿಂದ ನಿನಗೆ ಕೃಪೆ, ಕರುಣೆ ಮತ್ತು ಶಾಂತಿ ದೊರಕಲಿ. .::. 3 ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ. .::. 4 ಹಾಗು, ಆ ಸಂದೇಶವನ್ನು ಸಾರುವ ಜವಾಬ್ದಾರಿಯು ನಮ್ಮ ರಕ್ಷಕನಾದ ದೇವರ ಆಜ್ಞೆಯ ಅನುಸಾರವಾಗಿ ನನಗೆ ಒಪ್ಪಿಸಲ್ಪಟ್ಟಿದೆ ಹಾಗು ಸೂಕ್ತ ಕಾಲದಲ್ಲಿ ಸಂದೇಶವನ್ನು ಸಾರುವುದರ ಮೂಲಕ ತನ್ನ ವಾಕ್ಯವನ್ನು ನನಗೆ ಪ್ರಕಟಪಡಿಸಿದ್ದಾನೆ. .::. ಸಭೆಯ ಹಿರಿಯರಲ್ಲಿ ಇರಬೇಕಾದ ಲಕ್ಷಣಗಳು 5 ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ. .::. 6 1 ತಿಮೊ. 3:1-4 ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು. .::. 7 ಏಕೆಂದರೆ, ಸಭಾಧ್ಯಕ್ಷನು ದೇವರ ಮೇಲ್ವಿಚಾರಕನಾಗಿರುವುದರಿಂದ ದೋಷರಹಿತನಾಗಿರಬೇಕು; ಅವನು ಸ್ವೇಚ್ಛೆಯಾಗಿ ನಡೆಯುವವನೂ, ಮುಂಗೋಪಿಯೂ, ಕುಡುಕನೂ, ಜಗಳಗಂಟನೂ, 1 ತಿಮೊ. 3:8; 1 ಪೇತ್ರ 5:2 ಅತಿಲಾಭವನ್ನು ಅಪೇಕ್ಷಿಸುವವನೂ ಆಗಿರದೆ, .::. 8 ಅತಿಥಿಸತ್ಕಾರಮಾಡುವವನೂ, ಒಳ್ಳೆಯದನ್ನು ಪ್ರೀತಿಸುವವನೂ, ವಿವೇಕಿಯು, ನೀತಿವಂತನೂ, ದೈವಭಕ್ತನು, § 1 ಕೊರಿ 9:25 ಜಿತೇಂದ್ರಿಯನೂ ಆಗಿದ್ದು, .::. 9 ತಾನು * 1 ತಿಮೊ. 1:10 ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ † 2 ಥೆಸ. 2:13-15 ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು. .::. 10 ಅನೇಕರು, ಪ್ರಮುಖವಾಗಿ ಅ. ಕೃ. 10:45; 11:2 ಸುನ್ನತಿಹೊಂದಿದವರು, § 1 ತಿಮೊ. 1:6 ಬರೀ ಮಾತುಗಾರರೂ, ಮೋಸಗಾರರೂ, ಅಧಿಕಾರಕ್ಕೆ ಒಳಪಡದವರು ಆಗಿದ್ದಾರೆ. .::. 11 ಅವರು * 1 ತಿಮೊ. 6:5; 2 ಪೇತ್ರ. 2:3 ಅತಿಲಾಭವನ್ನು ಪಡೆದುಕೊಳ್ಳುವುದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ † 2 ತಿಮೊ. 3:6 ಕುಟುಂಬ ಕುಟುಂಬಗಳನ್ನೇ ಹಾಳುಮಾಡುತ್ತಾರಾದ್ದರಿಂದ ಅವರ ಬಾಯಿ ಮುಚ್ಚಿಸಬೇಕಾಗಿದೆ. .::. 12 “ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅ. ಕೃ. 17:28 ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ. .::. 13 ಈ ಸಾಕ್ಷಿಯು ನಿಜವೇ ಆಗಿದೆ; ಆದಕಾರಣ ಅವರು § 1 ತಿಮೊ. 1:4 ಯೆಹೂದ್ಯರ ಕಟ್ಟುಕಥೆಗಳಿಗೂ, ಸತ್ಯಭ್ರಷ್ಟರಾದ * ಕೊಲೊ 2:22 ಮನುಷ್ಯರ ವಿಧಿಗಳಿಗೂ ಲಕ್ಷ್ಯಕೊಡದೆ, .::. 14 ತೀತ. 2:1-2 ನಂಬಿಕೆಯಲ್ಲಿ ಸ್ವಸ್ಥಚಿತ್ತರಾಗಿರುವಂತೆ ‡ ತೀತ. 2:15; 1 ತಿಮೊ. 5:20 ಅವರನ್ನು ಕಠಿಣವಾಗಿ ಖಂಡಿಸಿ ತಿಳಿಸು. .::. 15 § ಲೂಕ 11:41; 1 ತಿಮೊ. 4:3; ಅ. ಕೃ. 10:15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, * ರೋಮಾ. 14:23 ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ. .::. 16 1 ಯೋಹಾ 2:4 ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.
  • ತೀತನಿಗೆ ಅಧ್ಯಾಯ 1  
  • ತೀತನಿಗೆ ಅಧ್ಯಾಯ 2  
  • ತೀತನಿಗೆ ಅಧ್ಯಾಯ 3  
×

Alert

×

Kannada Letters Keypad References