ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಜೆಕರ್ಯ

ಜೆಕರ್ಯ ಅಧ್ಯಾಯ 9

ಯೆರೂಸಲೇಮಿನ ಶತ್ರುಜನಾಂಗಗಳಿಗೆ ಉಂಟಾಗುವ ದಂಡನೆ 1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ, 2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. 3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ. 4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು. 5 ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು; 6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು. 7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು. 8 ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ. ಸಮಾಧಾನಪ್ರದ ರಾಜನ ಆಗಮನ 9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. 10 ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು. ಇಸ್ರಾಯೇಲರು ಗ್ರೀಕರನ್ನು ಜಯಿಸುವುದು 11 ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು. 12 ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ. 13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು. 14 ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು. 15 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು. 16 ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು. 17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.
ಯೆರೂಸಲೇಮಿನ ಶತ್ರುಜನಾಂಗಗಳಿಗೆ ಉಂಟಾಗುವ ದಂಡನೆ 1 ಯೆಹೋವನು ನುಡಿದ ದೈವೋಕ್ತಿಯು ಹದ್ರಾಕ್ ದೇಶದ ಮೇಲೆ ಬಿದ್ದಿದೆ. ದಮಸ್ಕವೇ ಅದಕ್ಕೆ ಈಡು; ಯೆಹೋವನು ನರವಂಶದ ಮೇಲೆ ಕಣ್ಣಿಟ್ಟಿದ್ದಾನೆ; ಹೌದು, ಇಸ್ರಾಯೇಲಿನ ಸಕಲ ಕುಲಗಳಲ್ಲಿಯೂ, .::. 2 ದಮಸ್ಕದ ಪಕ್ಕದಲ್ಲಿನ ಹಮಾತಿನಲ್ಲಿಯೂ ಬಹಳ ಜಾಣರು ಎಂದು ಕೊಚ್ಚಿಕೊಂಡಿರುವ ತೂರ್, ಚೀದೋನ್ ಪಟ್ಟಣಗಳಲ್ಲಿಯೂ ಕಣ್ಣಿಟ್ಟಿದ್ದಾನೆ. .::. 3 ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ. .::. 4 ಆಹಾ, ಕರ್ತನು ಅದರ ಆಸ್ತಿಯನ್ನು ಆಕ್ರಮಿಸಿ ಪೌಳಿಗೋಡೆಯನ್ನು ಸಮುದ್ರದೊಳಗೆ ಹೊಡೆದುಹಾಕುವನು; ಪಟ್ಟಣವು ಬೆಂಕಿಗೆ ತುತ್ತಾಗುವುದು. .::. 5 ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು; .::. 6 ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು; ಹೀಗೆ ಫಿಲಿಷ್ಟಿಯದ ಗರ್ವವನ್ನು ಭಂಗಪಡಿಸುವೆನು. .::. 7 ಅವರು ಸವಿಯುವ ರಕ್ತವನ್ನು ಬಾಯೊಳಗಿಂದ ತೆಗೆದುಬಿಡುವೆನು; ಅವರು ಕಚ್ಚುವ ಅಸಹ್ಯಪದಾರ್ಥಗಳನ್ನು ಹಲ್ಲುಗಳ ಮಧ್ಯದಿಂದ ಕಿತ್ತುಹಾಕುವೆನು; ಅವರೂ ಇಸ್ರಾಯೇಲಿನ ದೇವರಿಗೆ ಮೀಸಲಾದ ಜನರಾಗಿ ಉಳಿಯುವರು; ಯೆಹೂದದಲ್ಲಿ ಕುಲಪಾಲಕನಂತಿರುವರು; ಎಕ್ರೋನಿನವರು ಯೆಬೂಸಿಯರ ಹಾಗಿರುವರು. .::. 8 ಯಾರೂ ಹಾದುಹೋಗದಂತೆ ನನ್ನ ಆಲಯದ ಸುತ್ತಲು ಪಾಳೆಯನ್ನು ಹಾಕಿ ಕಾವಲಾಗಿರುವೆನು; ಇನ್ನು ಮುಂದೆ ಯಾವ ಬಾಧಕನೂ ನನ್ನ ಜನರ ಮೇಲೆ ದಾಳಿಮಾಡುವುದಿಲ್ಲ; ಏಕೆಂದರೆ ಈಗ ನಾನು ಕಣ್ಣಿಟ್ಟು ನೋಡುತ್ತಿದ್ದೇನೆ. .::. ಸಮಾಧಾನಪ್ರದ ರಾಜನ ಆಗಮನ 9 ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ. .::. 10 ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು. .::. ಇಸ್ರಾಯೇಲರು ಗ್ರೀಕರನ್ನು ಜಯಿಸುವುದು 11 ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು. .::. 12 ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ. .::. 13 ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು. .::. 14 ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು. .::. 15 ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು. .::. 16 ಆ ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು. .::. 17 ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.
  • ಜೆಕರ್ಯ ಅಧ್ಯಾಯ 1  
  • ಜೆಕರ್ಯ ಅಧ್ಯಾಯ 2  
  • ಜೆಕರ್ಯ ಅಧ್ಯಾಯ 3  
  • ಜೆಕರ್ಯ ಅಧ್ಯಾಯ 4  
  • ಜೆಕರ್ಯ ಅಧ್ಯಾಯ 5  
  • ಜೆಕರ್ಯ ಅಧ್ಯಾಯ 6  
  • ಜೆಕರ್ಯ ಅಧ್ಯಾಯ 7  
  • ಜೆಕರ್ಯ ಅಧ್ಯಾಯ 8  
  • ಜೆಕರ್ಯ ಅಧ್ಯಾಯ 9  
  • ಜೆಕರ್ಯ ಅಧ್ಯಾಯ 10  
  • ಜೆಕರ್ಯ ಅಧ್ಯಾಯ 11  
  • ಜೆಕರ್ಯ ಅಧ್ಯಾಯ 12  
  • ಜೆಕರ್ಯ ಅಧ್ಯಾಯ 13  
  • ಜೆಕರ್ಯ ಅಧ್ಯಾಯ 14  
×

Alert

×

Kannada Letters Keypad References