ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಆದಿಕಾಂಡ

ಆದಿಕಾಂಡ ಅಧ್ಯಾಯ 15

1 ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ. 2 ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. 3 ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ 4 ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು. 5 ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು. 6 ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು. 7 ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು. 8 ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು. 9 ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು. 10 ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ. 11 ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು. 12 ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು. 13 ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. 14 ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. 15 ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. 16 ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. 17 ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. 18 ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ 19 ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ 20 ಹಿತ್ತಿಯರೂ ಪೆರಿಜೀಯರೂ ರೆಫಾಯರೂ 21 ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
1 ಇವುಗಳಾದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಕರ್ತನ ವಾಕ್ಯವು ಬಂದು--ಅಬ್ರಾಮನೇ, ಭಯಪಡಬೇಡ; ನಾನೇ ನಿನ್ನ ಗುರಾಣಿಯೂ ನಿನ್ನ ಅತ್ಯಧಿಕವಾದ ಬಹುಮಾನವೂ ಆಗಿದ್ದೇನೆ. .::. 2 ಅದಕ್ಕೆ ಅಬ್ರಾಮನು--ಕರ್ತನಾದ ದೇವರೇ, ನನಗೆ ಏನು ಕೊಟ್ಟರೇನು? ನಾನು ಮಕ್ಕಳಿಲ್ಲದವನಾಗಿದ್ದೇನೆ. ಈ ದಮಸ್ಕದವನಾದ ಎಲೀಯೆಜರನು ನನ್ನ ಮನೆಯ ಮನೆವಾರ್ತೆಯವನಾ ಗಿದ್ದಾನಲ್ಲಾ ಅಂದನು. .::. 3 ಅಬ್ರಾಮನು--ಇಗೋ, ನೀನು ನನಗೆ ಸಂತಾನವನ್ನು ಕೊಡಲಿಲ್ಲ; ಇಗೋ, ನನ್ನ ಮನೆಯಲ್ಲಿ ಹುಟ್ಟಿದವನು ನನಗೆ ಬಾಧ್ಯನಾಗಿ ರುವನು ಅಂದಾಗ .::. 4 ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು. .::. 5 ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು. .::. 6 ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು. .::. 7 ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು. .::. 8 ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು. .::. 9 ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು. .::. 10 ಅವನು ಇವುಗಳನ್ನೆಲ್ಲಾ ಆತನಿಗಾಗಿ ತೆಗೆದುಕೊಂಡು ನಡುವೆ ತುಂಡುಮಾಡಿ ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು; ಆದರೆ ಪಕ್ಷಿಗಳನ್ನು ತುಂಡುಮಾಡಲಿಲ್ಲ. .::. 11 ಪಕ್ಷಿಗಳು ಆ ಶವಗಳ ಮೇಲೆ ಇಳಿದು ಬಂದಾಗ ಅಬ್ರಾಮನು ಅವುಗಳನ್ನು ಓಡಿಸಿದನು. .::. 12 ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಆಗ ಇಗೋ, ಭಯದ ಘೋರಾಂಧಕಾರವು ಅವನ ಮೇಲೆ ಕವಿಯಿತು. .::. 13 ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. .::. 14 ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. .::. 15 ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. .::. 16 ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು. .::. 17 ಸೂರ್ಯನು ಮುಳುಗಿದ ಮೇಲೆ ಕತ್ತಲಾದಾಗ ಇಗೋ, ಹೊಗೆಹಾಯುವ ಒಲೆಯೂ ಉರಿಯುವ ದೀಪವೂ ತುಂಡುಗಳ ಮಧ್ಯದಲ್ಲಿ ಹಾದುಹೋದವು. .::. 18 ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ .::. 19 ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ .::. 20 ಹಿತ್ತಿಯರೂ ಪೆರಿಜೀಯರೂ ರೆಫಾಯರೂ .::. 21 ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
  • ಆದಿಕಾಂಡ ಅಧ್ಯಾಯ 1  
  • ಆದಿಕಾಂಡ ಅಧ್ಯಾಯ 2  
  • ಆದಿಕಾಂಡ ಅಧ್ಯಾಯ 3  
  • ಆದಿಕಾಂಡ ಅಧ್ಯಾಯ 4  
  • ಆದಿಕಾಂಡ ಅಧ್ಯಾಯ 5  
  • ಆದಿಕಾಂಡ ಅಧ್ಯಾಯ 6  
  • ಆದಿಕಾಂಡ ಅಧ್ಯಾಯ 7  
  • ಆದಿಕಾಂಡ ಅಧ್ಯಾಯ 8  
  • ಆದಿಕಾಂಡ ಅಧ್ಯಾಯ 9  
  • ಆದಿಕಾಂಡ ಅಧ್ಯಾಯ 10  
  • ಆದಿಕಾಂಡ ಅಧ್ಯಾಯ 11  
  • ಆದಿಕಾಂಡ ಅಧ್ಯಾಯ 12  
  • ಆದಿಕಾಂಡ ಅಧ್ಯಾಯ 13  
  • ಆದಿಕಾಂಡ ಅಧ್ಯಾಯ 14  
  • ಆದಿಕಾಂಡ ಅಧ್ಯಾಯ 15  
  • ಆದಿಕಾಂಡ ಅಧ್ಯಾಯ 16  
  • ಆದಿಕಾಂಡ ಅಧ್ಯಾಯ 17  
  • ಆದಿಕಾಂಡ ಅಧ್ಯಾಯ 18  
  • ಆದಿಕಾಂಡ ಅಧ್ಯಾಯ 19  
  • ಆದಿಕಾಂಡ ಅಧ್ಯಾಯ 20  
  • ಆದಿಕಾಂಡ ಅಧ್ಯಾಯ 21  
  • ಆದಿಕಾಂಡ ಅಧ್ಯಾಯ 22  
  • ಆದಿಕಾಂಡ ಅಧ್ಯಾಯ 23  
  • ಆದಿಕಾಂಡ ಅಧ್ಯಾಯ 24  
  • ಆದಿಕಾಂಡ ಅಧ್ಯಾಯ 25  
  • ಆದಿಕಾಂಡ ಅಧ್ಯಾಯ 26  
  • ಆದಿಕಾಂಡ ಅಧ್ಯಾಯ 27  
  • ಆದಿಕಾಂಡ ಅಧ್ಯಾಯ 28  
  • ಆದಿಕಾಂಡ ಅಧ್ಯಾಯ 29  
  • ಆದಿಕಾಂಡ ಅಧ್ಯಾಯ 30  
  • ಆದಿಕಾಂಡ ಅಧ್ಯಾಯ 31  
  • ಆದಿಕಾಂಡ ಅಧ್ಯಾಯ 32  
  • ಆದಿಕಾಂಡ ಅಧ್ಯಾಯ 33  
  • ಆದಿಕಾಂಡ ಅಧ್ಯಾಯ 34  
  • ಆದಿಕಾಂಡ ಅಧ್ಯಾಯ 35  
  • ಆದಿಕಾಂಡ ಅಧ್ಯಾಯ 36  
  • ಆದಿಕಾಂಡ ಅಧ್ಯಾಯ 37  
  • ಆದಿಕಾಂಡ ಅಧ್ಯಾಯ 38  
  • ಆದಿಕಾಂಡ ಅಧ್ಯಾಯ 39  
  • ಆದಿಕಾಂಡ ಅಧ್ಯಾಯ 40  
  • ಆದಿಕಾಂಡ ಅಧ್ಯಾಯ 41  
  • ಆದಿಕಾಂಡ ಅಧ್ಯಾಯ 42  
  • ಆದಿಕಾಂಡ ಅಧ್ಯಾಯ 43  
  • ಆದಿಕಾಂಡ ಅಧ್ಯಾಯ 44  
  • ಆದಿಕಾಂಡ ಅಧ್ಯಾಯ 45  
  • ಆದಿಕಾಂಡ ಅಧ್ಯಾಯ 46  
  • ಆದಿಕಾಂಡ ಅಧ್ಯಾಯ 47  
  • ಆದಿಕಾಂಡ ಅಧ್ಯಾಯ 48  
  • ಆದಿಕಾಂಡ ಅಧ್ಯಾಯ 49  
  • ಆದಿಕಾಂಡ ಅಧ್ಯಾಯ 50  
×

Alert

×

Kannada Letters Keypad References