ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಆಮೋಸ

ಆಮೋಸ ಅಧ್ಯಾಯ 8

1 ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು. 2 ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು. 3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು. 4 ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. 5 ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ 6 ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ? 7 ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ. 8 ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು. 9 ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ. 10 ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು. 11 ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. 12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು. 13 ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು. 14 ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
1 ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು. .::. 2 ಆಗ ಅವನು--ಆಮೋಸನೇ, ಏನು ನೋಡುತ್ತಿರುವೆ ಎಂದಾಗ ನಾನು--ಮಾಗಿದ ಹಣ್ಣುಗಳ ಪುಟ್ಟಿ ಅಂದೆನು. ಆಗ ಕರ್ತನು ನನಗೆ--ನನ್ನ ಜನರಾದ ಇಸ್ರಾಯೇಲ್ಯರಿಗೆ ಅಂತ್ಯವು ಬಂತು; ನಾನು ಇನ್ನು ಮೇಲೆ ಅವರನು ದಾಟಿಹೋಗುವದಿಲ್ಲ ಎಂದು ಹೇಳಿದೆನು. .::. 3 ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು. .::. 4 ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. .::. 5 ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ .::. 6 ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ? .::. 7 ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ. .::. 8 ಇದಕ್ಕಾಗಿ ದೇಶವು ನಡುಗುವದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವದಿಲ್ಲವೇ? ಅದು ಪ್ರವಾಹದಂತೆ ಉಬ್ಬಿ ಐಗುಪ್ತದ ಪ್ರವಾಹದಂತೆ ಬಡುಕೊಂಡು ಇಳಿಯು ವದು. .::. 9 ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ. .::. 10 ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು. .::. 11 ಇಗೋ, ದಿನಗಳು ಬರುವವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ; ಕರ್ತನ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮ ವನ್ನೇ ಎಂಬದಾಗಿ ದೇವರಾದ ಕರ್ತನು ಹೇಳುತ್ತಾನೆ. .::. 12 ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು. .::. 13 ಆ ದಿನದಲ್ಲಿ ಸೌಂದರ್ಯವತಿಯ ರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹ ದಿಂದ ಕುಗ್ಗಿ ಹೋಗುವರು. .::. 14 ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
  • ಆಮೋಸ ಅಧ್ಯಾಯ 1  
  • ಆಮೋಸ ಅಧ್ಯಾಯ 2  
  • ಆಮೋಸ ಅಧ್ಯಾಯ 3  
  • ಆಮೋಸ ಅಧ್ಯಾಯ 4  
  • ಆಮೋಸ ಅಧ್ಯಾಯ 5  
  • ಆಮೋಸ ಅಧ್ಯಾಯ 6  
  • ಆಮೋಸ ಅಧ್ಯಾಯ 7  
  • ಆಮೋಸ ಅಧ್ಯಾಯ 8  
  • ಆಮೋಸ ಅಧ್ಯಾಯ 9  
×

Alert

×

Kannada Letters Keypad References