ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಹಾನನು

ಯೋಹಾನನು ಅಧ್ಯಾಯ 9

1 ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. 2 ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು; 3 ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು. 4 ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು. 5 ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು. 6 ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; 7 ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು. 8 ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು. 9 ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು. 10 ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು 11 ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು. 12 ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು; 13 ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು. 14 ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು. 15 ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು. 16 ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ 17 ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು. 18 ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ. 19 ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು. 20 ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು. 21 ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು. 22 ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು. 23 ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು. 24 ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು. 25 ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು. 26 ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ 27 ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು. 28 ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು. 29 ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು. 30 ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ? 31 ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು. 32 ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ. 33 ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು. 34 ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. 35 ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು. 36 ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು. 37 ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು. 38 ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು. 39 ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು. 40 ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು. 41 ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು
1 ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು. .::. 2 ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು; .::. 3 ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು. .::. 4 ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು. .::. 5 ನಾನು ಈ ಲೋಕದಲ್ಲಿರುವವರೆಗೆ ಲೋಕದ ಬೆಳಕಾಗಿದ್ದೇನೆ ಅಂದನು. .::. 6 ಆತನು ಹೀಗೆ ಮಾತನಾಡಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು; .::. 7 ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು. .::. 8 ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು. .::. 9 ಕೆಲವರು--ಅವನು ಇವನೇ ಅಂದರು. ಬೇರೆಯವರು--ಇವನು ಅವನ ಹಾಗೆ ಇದ್ದಾನೆ ಅಂದರು. ಆದರೆ ಅವನು--ನಾನೇ ಅವನು ಎಂದು ಹೇಳಿದನು. .::. 10 ಆದದರಿಂದ ಅವರು ಅವ ನಿಗೆ--ನಿನ್ನ ಕಣ್ಣುಗಳು ಹೇಗೆ ತೆರೆಯಲ್ಪಟ್ಟವು ಎಂದು ಕೇಳಲು .::. 11 ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು. .::. 12 ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು; .::. 13 ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು. .::. 14 ಯೇಸು ಕೆಸರುಮಾಡಿ ಅವನ ಕಣ್ಣುಗಳನ್ನು ತೆರೆದಾಗ ಅದು ಸಬ್ಬತ್ದಿನವಾಗಿತ್ತು. .::. 15 ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು. .::. 16 ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ .::. 17 ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು. .::. 18 ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ. .::. 19 ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು. .::. 20 ಅವನ ತಂದೆತಾಯಿಗಳು ಪ್ರತ್ಯುತ್ತರವಾಗಿ ಅವರಿಗೆ--ಅವನು ನಮ್ಮ ಮಗನೆಂದೂ ಅವನು ಕುರುಡನಾಗಿ ಹುಟ್ಟಿದ ನೆಂದೂ ನಾವು ಬಲ್ಲೆವು. .::. 21 ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು. .::. 22 ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು. .::. 23 ಆದದ ರಿಂದ ಅವನ ತಂದೆ ತಾಯಿಗಳು--ಅವನು ಪ್ರಾಯದ ವನಾಗಿದ್ದಾನಲ್ಲಾ; ಅವನನ್ನೇ ಕೇಳಿರಿ ಎಂದು ಹೇಳಿದರು. .::. 24 ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು. .::. 25 ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು. .::. 26 ಅವರು ತಿರಿಗಿ ಅವನಿಗೆ--ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು ಎಂದು ಹೇಳಿದ್ದಕ್ಕೆ .::. 27 ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು. .::. 28 ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು. .::. 29 ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು. .::. 30 ಆಗ ಆ ಮನುಷ್ಯನು ಪ್ರತ್ಯುತ್ತರವಾಗಿ ಅವರಿಗೆ--ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯ ವನೆಂದು ನಿಮಗೆ ತಿಳಿಯದೆ ಇರುವದು ಆಶ್ಚರ್ಯವಾದ ವಿಷಯವಲ್ಲವೇ? .::. 31 ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು. .::. 32 ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ. .::. 33 ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು. .::. 34 ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು. .::. 35 ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು. .::. 36 ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನೇ, ನಾನು ಆತನನ್ನು ನಂಬುವಂತೆ ಆತನು ಯಾರು ಅಂದನು. .::. 37 ಯೇಸು ಅವನಿಗೆ--ನೀನು ಆತನನ್ನು ನೋಡಿದ್ದೀ; ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು ಎಂದು ಹೇಳಿದನು. .::. 38 ಆಗ ಅವನು--ಕರ್ತನೇ, ನಾನು ನಂಬುತ್ತೇನೆ ಎಂದು ಹೇಳಿ ಆತನನ್ನು ಆರಾಧಿಸಿದನು. .::. 39 ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು. .::. 40 ಆತ ನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತು ಗಳನ್ನು ಕೇಳಿ--ನಾವು ಸಹ ಕುರುಡರೋ ಎಂದು ಆತನನ್ನು ಕೇಳಿದರು. .::. 41 ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು
  • ಯೋಹಾನನು ಅಧ್ಯಾಯ 1  
  • ಯೋಹಾನನು ಅಧ್ಯಾಯ 2  
  • ಯೋಹಾನನು ಅಧ್ಯಾಯ 3  
  • ಯೋಹಾನನು ಅಧ್ಯಾಯ 4  
  • ಯೋಹಾನನು ಅಧ್ಯಾಯ 5  
  • ಯೋಹಾನನು ಅಧ್ಯಾಯ 6  
  • ಯೋಹಾನನು ಅಧ್ಯಾಯ 7  
  • ಯೋಹಾನನು ಅಧ್ಯಾಯ 8  
  • ಯೋಹಾನನು ಅಧ್ಯಾಯ 9  
  • ಯೋಹಾನನು ಅಧ್ಯಾಯ 10  
  • ಯೋಹಾನನು ಅಧ್ಯಾಯ 11  
  • ಯೋಹಾನನು ಅಧ್ಯಾಯ 12  
  • ಯೋಹಾನನು ಅಧ್ಯಾಯ 13  
  • ಯೋಹಾನನು ಅಧ್ಯಾಯ 14  
  • ಯೋಹಾನನು ಅಧ್ಯಾಯ 15  
  • ಯೋಹಾನನು ಅಧ್ಯಾಯ 16  
  • ಯೋಹಾನನು ಅಧ್ಯಾಯ 17  
  • ಯೋಹಾನನು ಅಧ್ಯಾಯ 18  
  • ಯೋಹಾನನು ಅಧ್ಯಾಯ 19  
  • ಯೋಹಾನನು ಅಧ್ಯಾಯ 20  
  • ಯೋಹಾನನು ಅಧ್ಯಾಯ 21  
×

Alert

×

Kannada Letters Keypad References