ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಕೊರಿಂಥದವರಿಗೆ

1 ಕೊರಿಂಥದವರಿಗೆ ಅಧ್ಯಾಯ 13

1 ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. 2 ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. 3 ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ. 4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, 5 ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. 6 ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. 7 ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. 8 ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು. 9 ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. 10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. 11 ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. 12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ. 13 ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
1 ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. .::. 2 ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. .::. 3 ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ. .::. 4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, .::. 5 ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. .::. 6 ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. .::. 7 ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. .::. 8 ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು. .::. 9 ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. .::. 10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. .::. 11 ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. .::. 12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ. .::. 13 ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
  • 1 ಕೊರಿಂಥದವರಿಗೆ ಅಧ್ಯಾಯ 1  
  • 1 ಕೊರಿಂಥದವರಿಗೆ ಅಧ್ಯಾಯ 2  
  • 1 ಕೊರಿಂಥದವರಿಗೆ ಅಧ್ಯಾಯ 3  
  • 1 ಕೊರಿಂಥದವರಿಗೆ ಅಧ್ಯಾಯ 4  
  • 1 ಕೊರಿಂಥದವರಿಗೆ ಅಧ್ಯಾಯ 5  
  • 1 ಕೊರಿಂಥದವರಿಗೆ ಅಧ್ಯಾಯ 6  
  • 1 ಕೊರಿಂಥದವರಿಗೆ ಅಧ್ಯಾಯ 7  
  • 1 ಕೊರಿಂಥದವರಿಗೆ ಅಧ್ಯಾಯ 8  
  • 1 ಕೊರಿಂಥದವರಿಗೆ ಅಧ್ಯಾಯ 9  
  • 1 ಕೊರಿಂಥದವರಿಗೆ ಅಧ್ಯಾಯ 10  
  • 1 ಕೊರಿಂಥದವರಿಗೆ ಅಧ್ಯಾಯ 11  
  • 1 ಕೊರಿಂಥದವರಿಗೆ ಅಧ್ಯಾಯ 12  
  • 1 ಕೊರಿಂಥದವರಿಗೆ ಅಧ್ಯಾಯ 13  
  • 1 ಕೊರಿಂಥದವರಿಗೆ ಅಧ್ಯಾಯ 14  
  • 1 ಕೊರಿಂಥದವರಿಗೆ ಅಧ್ಯಾಯ 15  
  • 1 ಕೊರಿಂಥದವರಿಗೆ ಅಧ್ಯಾಯ 16  
×

Alert

×

Kannada Letters Keypad References