ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಹೆಜ್ಕೇಲನು

ಯೆಹೆಜ್ಕೇಲನು ಅಧ್ಯಾಯ 9

1 ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ 2 ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು. 3 ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ 4 ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು. 5 ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. 6 ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು. 7 ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು. 8 ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು. 9 ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ. 10 ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು. 11 ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
1. ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ 2. ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು. 3. ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ 4. ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು. 5. ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. 6. ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು. 7. ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು. 8. ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು. 9. ಆಗ ಆತನು ನನಗೆ ಹೇಳಿದ್ದೇನಂದರೆಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ; ದೇಶವು ರಕ್ತದಿಂದ ತುಂಬಿದೆ; ಪಟ್ಟಣವು ವಕ್ರತ್ವದಿಂದ ತುಂಬಿದೆ; ಯಾಕಂದರೆ ಕರ್ತನು ಭೂಮಿಯನ್ನು ತೊರೆದುಬಿಟ್ಟಿದ್ದಾನೆ; ಕರ್ತನು ನೋಡುವದಿಲ್ಲ ಎಂದು ಅವರು ಹೇಳುತ್ತಾರೆ. 10. ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು. 11. ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
  • ಯೆಹೆಜ್ಕೇಲನು ಅಧ್ಯಾಯ 1  
  • ಯೆಹೆಜ್ಕೇಲನು ಅಧ್ಯಾಯ 2  
  • ಯೆಹೆಜ್ಕೇಲನು ಅಧ್ಯಾಯ 3  
  • ಯೆಹೆಜ್ಕೇಲನು ಅಧ್ಯಾಯ 4  
  • ಯೆಹೆಜ್ಕೇಲನು ಅಧ್ಯಾಯ 5  
  • ಯೆಹೆಜ್ಕೇಲನು ಅಧ್ಯಾಯ 6  
  • ಯೆಹೆಜ್ಕೇಲನು ಅಧ್ಯಾಯ 7  
  • ಯೆಹೆಜ್ಕೇಲನು ಅಧ್ಯಾಯ 8  
  • ಯೆಹೆಜ್ಕೇಲನು ಅಧ್ಯಾಯ 9  
  • ಯೆಹೆಜ್ಕೇಲನು ಅಧ್ಯಾಯ 10  
  • ಯೆಹೆಜ್ಕೇಲನು ಅಧ್ಯಾಯ 11  
  • ಯೆಹೆಜ್ಕೇಲನು ಅಧ್ಯಾಯ 12  
  • ಯೆಹೆಜ್ಕೇಲನು ಅಧ್ಯಾಯ 13  
  • ಯೆಹೆಜ್ಕೇಲನು ಅಧ್ಯಾಯ 14  
  • ಯೆಹೆಜ್ಕೇಲನು ಅಧ್ಯಾಯ 15  
  • ಯೆಹೆಜ್ಕೇಲನು ಅಧ್ಯಾಯ 16  
  • ಯೆಹೆಜ್ಕೇಲನು ಅಧ್ಯಾಯ 17  
  • ಯೆಹೆಜ್ಕೇಲನು ಅಧ್ಯಾಯ 18  
  • ಯೆಹೆಜ್ಕೇಲನು ಅಧ್ಯಾಯ 19  
  • ಯೆಹೆಜ್ಕೇಲನು ಅಧ್ಯಾಯ 20  
  • ಯೆಹೆಜ್ಕೇಲನು ಅಧ್ಯಾಯ 21  
  • ಯೆಹೆಜ್ಕೇಲನು ಅಧ್ಯಾಯ 22  
  • ಯೆಹೆಜ್ಕೇಲನು ಅಧ್ಯಾಯ 23  
  • ಯೆಹೆಜ್ಕೇಲನು ಅಧ್ಯಾಯ 24  
  • ಯೆಹೆಜ್ಕೇಲನು ಅಧ್ಯಾಯ 25  
  • ಯೆಹೆಜ್ಕೇಲನು ಅಧ್ಯಾಯ 26  
  • ಯೆಹೆಜ್ಕೇಲನು ಅಧ್ಯಾಯ 27  
  • ಯೆಹೆಜ್ಕೇಲನು ಅಧ್ಯಾಯ 28  
  • ಯೆಹೆಜ್ಕೇಲನು ಅಧ್ಯಾಯ 29  
  • ಯೆಹೆಜ್ಕೇಲನು ಅಧ್ಯಾಯ 30  
  • ಯೆಹೆಜ್ಕೇಲನು ಅಧ್ಯಾಯ 31  
  • ಯೆಹೆಜ್ಕೇಲನು ಅಧ್ಯಾಯ 32  
  • ಯೆಹೆಜ್ಕೇಲನು ಅಧ್ಯಾಯ 33  
  • ಯೆಹೆಜ್ಕೇಲನು ಅಧ್ಯಾಯ 34  
  • ಯೆಹೆಜ್ಕೇಲನು ಅಧ್ಯಾಯ 35  
  • ಯೆಹೆಜ್ಕೇಲನು ಅಧ್ಯಾಯ 36  
  • ಯೆಹೆಜ್ಕೇಲನು ಅಧ್ಯಾಯ 37  
  • ಯೆಹೆಜ್ಕೇಲನು ಅಧ್ಯಾಯ 38  
  • ಯೆಹೆಜ್ಕೇಲನು ಅಧ್ಯಾಯ 39  
  • ಯೆಹೆಜ್ಕೇಲನು ಅಧ್ಯಾಯ 40  
  • ಯೆಹೆಜ್ಕೇಲನು ಅಧ್ಯಾಯ 41  
  • ಯೆಹೆಜ್ಕೇಲನು ಅಧ್ಯಾಯ 42  
  • ಯೆಹೆಜ್ಕೇಲನು ಅಧ್ಯಾಯ 43  
  • ಯೆಹೆಜ್ಕೇಲನು ಅಧ್ಯಾಯ 44  
  • ಯೆಹೆಜ್ಕೇಲನು ಅಧ್ಯಾಯ 45  
  • ಯೆಹೆಜ್ಕೇಲನು ಅಧ್ಯಾಯ 46  
  • ಯೆಹೆಜ್ಕೇಲನು ಅಧ್ಯಾಯ 47  
  • ಯೆಹೆಜ್ಕೇಲನು ಅಧ್ಯಾಯ 48  
×

Alert

×

Kannada Letters Keypad References