ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಬನು

ಯೋಬನು ಅಧ್ಯಾಯ 29

1 ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ-- 2 ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು. 3 ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು. 4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು. 5 ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು. 6 ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು. 7 ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. 8 ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. 9 ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. 10 ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. 11 ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. 12 ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. 13 ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. 14 ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. 15 ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. 16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. 17 ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು. 18 ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. 19 ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು. 20 ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು. 21 ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು. 22 ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು. 23 ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು. 24 ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ. 25 ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
1 ಯೋಬನು ಮತ್ತೆ ತನ್ನ ಪ್ರಸ್ತಾಪವನ್ನೆತ್ತಿ ಹೇಳಿದ್ದೇನಂದರೆ-- .::. 2 ಓ, ಮುಂಚಿನ ತಿಂಗ ಳುಗಳ ಹಾಗೆಯೂ ದೇವರು ನನ್ನನ್ನು ಕಾಪಾಡಿದ ದಿವಸಗಳ ಹಾಗೆಯೂ ನನಗೆ ಆದರೆ ಒಳ್ಳೇದು. .::. 3 ಆಗ ಆತನ ದೀಪವು ನನ್ನ ತಲೆಯ ಮೇಲೆ ಹೊಳೆ ಯಿತು; ಆತನ ಬೆಳಕಿನಿಂದ ಕತ್ತಲಲ್ಲಿ ನಡೆದೆನು. .::. 4 ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಮರ್ಮವು ನನ್ನ ಗುಡಾರದ ಮೇಲೆ ಇತ್ತು. .::. 5 ಸರ್ವ ಶಕ್ತನು ಇನ್ನೂ ನನ್ನ ಸಂಗಡ ಇದ್ದನು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು. .::. 6 ನನ್ನ ಹೆಜ್ಜೆಗಳನ್ನು ಬೆಣ್ಣೆ ಯಿಂದ ತೊಳೆಯುತ್ತಾ ಇದ್ದೆನು; ಬಂಡೆಯು ನನ್ನ ಬಳಿಯಲ್ಲಿ ಎಣ್ಣೆಯ ಪ್ರವಾಹಗಳನ್ನು ಹೊಯ್ಯುತ್ತಿತ್ತು. .::. 7 ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. .::. 8 ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. .::. 9 ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. .::. 10 ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. .::. 11 ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. .::. 12 ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. .::. 13 ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. .::. 14 ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. .::. 15 ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. .::. 16 ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. .::. 17 ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು. .::. 18 ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. .::. 19 ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು. .::. 20 ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು. .::. 21 ನನಗೆ ಕಿವಿಗೊಟ್ಟು ಎದುರುನೋಡಿ, ನನ್ನ ಆಲೋಚನೆಗೆ ಮೌನವಾಗಿ ದ್ದರು. .::. 22 ನನ್ನ ಮಾತಿನ ಮೇಲೆ ಅವರು ಬೇರೆ ಮಾತ ನಾಡಲಿಲ್ಲ; ನನ್ನ ನುಡಿ ಅವರ ಮೇಲೆ ಸುರಿಯಿತು. .::. 23 ಮಳೆಯಂತೆ ನನ್ನನ್ನು ಎದುರು ನೋಡುತ್ತಿದ್ದರು; ಹಿಂಗಾರು ಮಳೆಗೆ ಎಂಬಂತೆ ಬಾಯಿ ತೆಗೆದರು. .::. 24 ನಂಬಿಕೆ ಇಲ್ಲದವರ ಕಡೆಗೆ ನಗೆ ತೋರಿಸಿದೆನು; ನನ್ನ ಮುಖದ ಕಳೆಯನ್ನು ಅವರು ಕುಂದಿಸಲಿಲ್ಲ. .::. 25 ಅವರ ಮಾರ್ಗವನ್ನು ಆದುಕೊಂಡು ಪ್ರಧಾನನಾಗಿ ಕೂತು ಗೋಳಾಡುವವರನ್ನು ಸಂತೈಸುವವನಾಗಿಯೇ ಅರಸನಂತೆ ಸೈನ್ಯದಲ್ಲಿ ಆಸೀನನಾಗಿದ್ದೆನು.
  • ಕೀರ್ತನೆಗಳು ಅಧ್ಯಾಯ 1  
  • ಕೀರ್ತನೆಗಳು ಅಧ್ಯಾಯ 2  
  • ಕೀರ್ತನೆಗಳು ಅಧ್ಯಾಯ 3  
  • ಕೀರ್ತನೆಗಳು ಅಧ್ಯಾಯ 4  
  • ಕೀರ್ತನೆಗಳು ಅಧ್ಯಾಯ 5  
  • ಕೀರ್ತನೆಗಳು ಅಧ್ಯಾಯ 6  
  • ಕೀರ್ತನೆಗಳು ಅಧ್ಯಾಯ 7  
  • ಕೀರ್ತನೆಗಳು ಅಧ್ಯಾಯ 8  
  • ಕೀರ್ತನೆಗಳು ಅಧ್ಯಾಯ 9  
  • ಕೀರ್ತನೆಗಳು ಅಧ್ಯಾಯ 10  
  • ಕೀರ್ತನೆಗಳು ಅಧ್ಯಾಯ 11  
  • ಕೀರ್ತನೆಗಳು ಅಧ್ಯಾಯ 12  
  • ಕೀರ್ತನೆಗಳು ಅಧ್ಯಾಯ 13  
  • ಕೀರ್ತನೆಗಳು ಅಧ್ಯಾಯ 14  
  • ಕೀರ್ತನೆಗಳು ಅಧ್ಯಾಯ 15  
  • ಕೀರ್ತನೆಗಳು ಅಧ್ಯಾಯ 16  
  • ಕೀರ್ತನೆಗಳು ಅಧ್ಯಾಯ 17  
  • ಕೀರ್ತನೆಗಳು ಅಧ್ಯಾಯ 18  
  • ಕೀರ್ತನೆಗಳು ಅಧ್ಯಾಯ 19  
  • ಕೀರ್ತನೆಗಳು ಅಧ್ಯಾಯ 20  
  • ಕೀರ್ತನೆಗಳು ಅಧ್ಯಾಯ 21  
  • ಕೀರ್ತನೆಗಳು ಅಧ್ಯಾಯ 22  
  • ಕೀರ್ತನೆಗಳು ಅಧ್ಯಾಯ 23  
  • ಕೀರ್ತನೆಗಳು ಅಧ್ಯಾಯ 24  
  • ಕೀರ್ತನೆಗಳು ಅಧ್ಯಾಯ 25  
  • ಕೀರ್ತನೆಗಳು ಅಧ್ಯಾಯ 26  
  • ಕೀರ್ತನೆಗಳು ಅಧ್ಯಾಯ 27  
  • ಕೀರ್ತನೆಗಳು ಅಧ್ಯಾಯ 28  
  • ಕೀರ್ತನೆಗಳು ಅಧ್ಯಾಯ 29  
  • ಕೀರ್ತನೆಗಳು ಅಧ್ಯಾಯ 30  
  • ಕೀರ್ತನೆಗಳು ಅಧ್ಯಾಯ 31  
  • ಕೀರ್ತನೆಗಳು ಅಧ್ಯಾಯ 32  
  • ಕೀರ್ತನೆಗಳು ಅಧ್ಯಾಯ 33  
  • ಕೀರ್ತನೆಗಳು ಅಧ್ಯಾಯ 34  
  • ಕೀರ್ತನೆಗಳು ಅಧ್ಯಾಯ 35  
  • ಕೀರ್ತನೆಗಳು ಅಧ್ಯಾಯ 36  
  • ಕೀರ್ತನೆಗಳು ಅಧ್ಯಾಯ 37  
  • ಕೀರ್ತನೆಗಳು ಅಧ್ಯಾಯ 38  
  • ಕೀರ್ತನೆಗಳು ಅಧ್ಯಾಯ 39  
  • ಕೀರ್ತನೆಗಳು ಅಧ್ಯಾಯ 40  
  • ಕೀರ್ತನೆಗಳು ಅಧ್ಯಾಯ 41  
  • ಕೀರ್ತನೆಗಳು ಅಧ್ಯಾಯ 42  
×

Alert

×

Kannada Letters Keypad References