ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಸಮುವೇಲನು

1 ಸಮುವೇಲನು ಅಧ್ಯಾಯ 11

1 ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. 2 ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು. 3 ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು. 4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು. 5 ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು. 6 ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ 7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು. 8 ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು. 9 ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು. 10 ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು. 11 ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ. 12 ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು. 13 ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು. 14 ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು. 15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
1 ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. .::. 2 ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು. .::. 3 ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು. .::. 4 ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು. .::. 5 ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು. .::. 6 ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ .::. 7 ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು. .::. 8 ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು. .::. 9 ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು. .::. 10 ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು. .::. 11 ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ. .::. 12 ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು. .::. 13 ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು. .::. 14 ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು. .::. 15 ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
  • 1 ಸಮುವೇಲನು ಅಧ್ಯಾಯ 1  
  • 1 ಸಮುವೇಲನು ಅಧ್ಯಾಯ 2  
  • 1 ಸಮುವೇಲನು ಅಧ್ಯಾಯ 3  
  • 1 ಸಮುವೇಲನು ಅಧ್ಯಾಯ 4  
  • 1 ಸಮುವೇಲನು ಅಧ್ಯಾಯ 5  
  • 1 ಸಮುವೇಲನು ಅಧ್ಯಾಯ 6  
  • 1 ಸಮುವೇಲನು ಅಧ್ಯಾಯ 7  
  • 1 ಸಮುವೇಲನು ಅಧ್ಯಾಯ 8  
  • 1 ಸಮುವೇಲನು ಅಧ್ಯಾಯ 9  
  • 1 ಸಮುವೇಲನು ಅಧ್ಯಾಯ 10  
  • 1 ಸಮುವೇಲನು ಅಧ್ಯಾಯ 11  
  • 1 ಸಮುವೇಲನು ಅಧ್ಯಾಯ 12  
  • 1 ಸಮುವೇಲನು ಅಧ್ಯಾಯ 13  
  • 1 ಸಮುವೇಲನು ಅಧ್ಯಾಯ 14  
  • 1 ಸಮುವೇಲನು ಅಧ್ಯಾಯ 15  
  • 1 ಸಮುವೇಲನು ಅಧ್ಯಾಯ 16  
  • 1 ಸಮುವೇಲನು ಅಧ್ಯಾಯ 17  
  • 1 ಸಮುವೇಲನು ಅಧ್ಯಾಯ 18  
  • 1 ಸಮುವೇಲನು ಅಧ್ಯಾಯ 19  
  • 1 ಸಮುವೇಲನು ಅಧ್ಯಾಯ 20  
  • 1 ಸಮುವೇಲನು ಅಧ್ಯಾಯ 21  
  • 1 ಸಮುವೇಲನು ಅಧ್ಯಾಯ 22  
  • 1 ಸಮುವೇಲನು ಅಧ್ಯಾಯ 23  
  • 1 ಸಮುವೇಲನು ಅಧ್ಯಾಯ 24  
  • 1 ಸಮುವೇಲನು ಅಧ್ಯಾಯ 25  
  • 1 ಸಮುವೇಲನು ಅಧ್ಯಾಯ 26  
  • 1 ಸಮುವೇಲನು ಅಧ್ಯಾಯ 27  
  • 1 ಸಮುವೇಲನು ಅಧ್ಯಾಯ 28  
  • 1 ಸಮುವೇಲನು ಅಧ್ಯಾಯ 29  
  • 1 ಸಮುವೇಲನು ಅಧ್ಯಾಯ 30  
  • 1 ಸಮುವೇಲನು ಅಧ್ಯಾಯ 31  
×

Alert

×

Kannada Letters Keypad References