ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋವೇಲ

ಯೋವೇಲ ಅಧ್ಯಾಯ 3

1 ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ 2 ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು 3 ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ? 4 ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. 5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ. 6 ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ. 7 ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. 8 ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ. 9 ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. 10 ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. 11 ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. 12 ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. 13 ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. 14 ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ. 15 ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು. 16 ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು. 17 ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು. 18 ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು. 19 ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು. 20 ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು. 21 ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
1 ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ .::. 2 ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು .::. 3 ನನ್ನ ಜನರಿ ಗೋಸ್ಕರ ಚೀಟು ಹಾಕಿ ಹುಡುಗನನ್ನು ಸೂಳೆಗಾಗಿ ಕೊಟ್ಟು, ಹುಡುಗಿಯನ್ನು ದ್ರಾಕ್ಷಾರಸಕ್ಕಾಗಿ ಮಾರಿ ಅವರು ಕುಡಿಯುವ ಹಾಗೆ ಮಾರಿದ್ದಾರಲ್ಲಾ? .::. 4 ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. .::. 5 ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ. .::. 6 ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ. .::. 7 ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. .::. 8 ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ. .::. 9 ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. .::. 10 ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. .::. 11 ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. .::. 12 ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. .::. 13 ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. .::. 14 ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ. .::. 15 ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು. .::. 16 ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು. .::. 17 ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು. .::. 18 ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು. .::. 19 ಐಗುಪ್ತವು ಹಾಳಾಗು ವದು; ಎದೋಮು ಹಾಳಾದ ಅರಣ್ಯವಾಗುವದು; ಅವರು ಯೆಹೂದನ ಮಕ್ಕಳನ್ನು ಬಲಾತ್ಕಾರಮಾಡಿ ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿ ದರು. .::. 20 ಆದರೆ ಯೆಹೂದವು ಎಂದೆಂದಿಗೂ ಯೆರೂಸಲೇಮು ತಲತಲಾಂತರಕ್ಕೂ ನಿಲ್ಲುವದು. .::. 21 ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.
  • ಯೋವೇಲ ಅಧ್ಯಾಯ 1  
  • ಯೋವೇಲ ಅಧ್ಯಾಯ 2  
  • ಯೋವೇಲ ಅಧ್ಯಾಯ 3  
×

Alert

×

Kannada Letters Keypad References