ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೋಹಾನನು

ಯೋಹಾನನು ಅಧ್ಯಾಯ 11

1 ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. 2 (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು). 3 ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು. 4 ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು. 5 ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು. 6 ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು. 7 ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು. 8 ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು. 9 ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ. 10 ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು. 11 ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. 12 ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. 13 ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು. 14 ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ. 15 ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು. 16 ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು. 17 ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು; 18 ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು. 19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು. 20 ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು. 21 ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ. 22 ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು. 23 ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು. 24 ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು. 25 ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; 26 ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ 27 ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು. 28 ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು. 29 ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು. 30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು. 31 ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು. 32 ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು. 33 ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- 34 ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. 35 ಯೇಸು ಅತ್ತನು. 36 ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು. 37 ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು. 38 ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು. 39 ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು. 40 ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು. 41 ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ. 42 ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು. 43 ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. 44 ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು. 45 ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು. 46 ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು. 47 ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? 48 ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. 49 ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- 50 ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. 51 ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ 52 ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. 53 ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. 54 ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು. 55 ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು. 56 ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. 57 ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
1 ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು. .::. 2 (ಕರ್ತನಿಗೆ ತೈಲವನ್ನು ಹಚ್ಚಿ ತನ್ನ ತಲೇಕೂದಲಿನಿಂದ ಆತನ ಪಾದಗಳನ್ನು ಒರಸಿದ ಈ ಮರಿಯಳ ಸಹೋ ದರನಾದ ಲಾಜರನು ಅಸ್ವಸ್ಥನಾಗಿದ್ದನು). .::. 3 ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು. .::. 4 ಯೇಸು ಅದನ್ನು ಕೇಳಿ--ಈ ರೋಗವು ಮರಣಕ್ಕಾಗಿಯಲ್ಲ, ಆದರೆ ದೇವಕುಮಾರನು ಅದರಿಂದ ಮಹಿಮೆ ಹೊಂದುವಂತೆ ದೇವರ ಮಹಿಮೆಗೋಸ್ಕರವೇ ಬಂದದ್ದು ಎಂದು ಹೇಳಿದನು. .::. 5 ಮಾರ್ಥಳನ್ನೂ ಅವಳ ಸಹೋದರಿಯನ್ನೂ ಲಾಜರನನ್ನೂ ಯೇಸು ಪ್ರೀತಿಸು ತ್ತಿದ್ದನು. .::. 6 ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು. .::. 7 ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು. .::. 8 ಆತನ ಶಿಷ್ಯರು ಆತನಿಗೆ--ಬೋಧಕನೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿ ದ್ದರಲ್ಲಾ; ತಿರಿಗಿ ನೀನು ಅಲ್ಲಿಗೆ ಹೋಗುತ್ತೀಯೋ? ಅಂದರು. .::. 9 ಯೇಸು--ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾವ ಮನುಷ್ಯನಾದರೂ ಹಗಲಿ ನಲ್ಲಿ ತಿರುಗಾಡಿದರೆ ಈ ಲೋಕದ ಬೆಳಕನ್ನು ನೋಡು ವದರಿಂದ ಅವನು ಎಡವುವದಿಲ್ಲ. .::. 10 ಆದರೆ ಒಬ್ಬ ಮನುಷ್ಯನು ರಾತ್ರಿಯಲ್ಲಿ ತಿರುಗಾಡಿದರೆ ತನ್ನಲ್ಲಿ ಬೆಳಕು ಇಲ್ಲವಾದದರಿಂದ ಅವನು ಎಡವುತ್ತಾನೆ ಎಂದು ಉತ್ತರಕೊಟ್ಟನು. .::. 11 ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆ--ನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ; ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು. .::. 12 ಆಗ ಆತನ ಶಿಷ್ಯರು--ಕರ್ತನೇ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು ಅಂದರು. .::. 13 ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು. .::. 14 ಆಗ ಯೇಸು ಸ್ಪಷ್ಟವಾಗಿ ಅವರಿಗೆ--ಲಾಜರನು ಸತ್ತಿದ್ದಾನೆ. .::. 15 ನೀವು ನಂಬು ವಂತೆ ನಿಮಗೋಸ್ಕರ ನಾನು ಅಲ್ಲಿ ಇಲ್ಲದಿರುವದಕ್ಕೆ ಸಂತೋಷಪಡುತ್ತೇನೆ; ಹೇಗೂ ನಾವು ಅವನ ಬಳಿಗೆ ಹೋಗೋಣ ಎಂದು ಅವರಿಗೆ ಹೇಳಿದನು. .::. 16 ತರು ವಾಯ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ--ನಾವು ಸಹ ಆತನೊಂದಿಗೆ ಸಾಯುವಂತೆ ಹೋಗೋಣ ಅಂದನು. .::. 17 ತರುವಾಯ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದ ವೆಂದು ಆತನು ತಿಳಿದುಕೊಂಡನು; .::. 18 ಬೇಥಾನ್ಯವು ಯೆರೂಸಲೇಮಿಗೆ ಹೆಚ್ಚುಕಡಿಮೆ ಒಂದು ಹರದಾರಿ ಯಷ್ಟು ಸವಿಾಪದಲ್ಲಿತ್ತು. .::. 19 ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋ ದರನ ವಿಷಯವಾಗಿ ಆದರಿಸುವದಕ್ಕೆ ಬಂದಿದ್ದರು. .::. 20 ಆಗ ಯೇಸು ಬರುತ್ತಿದ್ದಾನೆಂದು ಮಾರ್ಥಳು ಕೇಳು ತ್ತಲೇ ಹೋಗಿ ಆತನನ್ನು ಎದುರುಗೊಂಡಳು. ಮರಿಯಳಾದರೋ ಮನೆಯಲ್ಲಿಯೇ ಕೂತುಕೊಂಡಿ ದ್ದಳು. .::. 21 ಆಗ ಮಾರ್ಥಳು ಯೇಸುವಿಗೆ-- ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯು ತ್ತಿರಲಿಲ್ಲ. .::. 22 ಆದರೆ ಈಗಲೂ ಸಹ ನೀನು ದೇವರಿಂದ ಏನು ಕೇಳಿಕೊಳ್ಳುತ್ತೀಯೋ ದೇವರು ಅದನ್ನು ನಿನಗೆ ಕೊಡುವನೆಂದು ನಾನು ಬಲ್ಲೆನು ಅಂದಳು. .::. 23 ಯೇಸು ಆಕೆಗೆ--ನಿನ್ನ ಸಹೋದರನು ತಿರಿಗಿ ಎದ್ದೇಳುವನು ಎಂದು ಹೇಳಿದನು. .::. 24 ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು. .::. 25 ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; .::. 26 ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ .::. 27 ಆಕೆಯು ಆತನಿಗೆ--ಹೌದು, ಕರ್ತನೇ, ಲೋಕಕ್ಕೆ ಬರಬೇಕಾಗಿದ್ದ ದೇವರಮಗನಾದ ಕ್ರಿಸ್ತನು ನೀನೇ ಎಂದು ನಾನು ನಂಬುತ್ತೇನೆ ಅಂದಳು. .::. 28 ಆಕೆಯು ಹೀಗೆ ಹೇಳಿದ ಮೇಲೆ ಹೊರಟು ಹೋಗಿ ತನ್ನ ಸಹೋದರಿಯಾದ ಮರಿಯಳನ್ನು ಗುಪ್ತ ವಾಗಿ ಕರೆದು--ಬೋಧಕನು ಬಂದಿದ್ದಾನೆ, ನಿನ್ನನ್ನು ಕರೆಯುತ್ತಾನೆ ಅಂದಳು. .::. 29 ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು. .::. 30 ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು. .::. 31 ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು. .::. 32 ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು. .::. 33 ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- .::. 34 ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. .::. 35 ಯೇಸು ಅತ್ತನು. .::. 36 ಆಗ ಯೆಹೂದ್ಯ ರು--ಇಗೋ, ಆತನು ಅವನನ್ನು ಎಷ್ಟು ಪ್ರೀತಿ ಮಾಡಿದನಲ್ಲಾ ಅಂದರು. .::. 37 ಅವರಲ್ಲಿ ಕೆಲ ವರು--ಆ ಕುರುಡನ ಕಣ್ಣುಗಳನ್ನು ತೆರೆದ ಈ ಮನುಷ್ಯನು ಇವನನ್ನೂ ಸಾಯದಹಾಗೆ ಮಾಡಲಾರದೆ ಇದ್ದನೇ ಅಂದರು. .::. 38 ಆದದರಿಂದ ಯೇಸು ತಿರಿಗಿ ತನ್ನಲ್ಲಿ ಮೂಲ್ಗುತ್ತಾ ಸಮಾಧಿಗೆ ಬಂದನು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಮೇಲೆ ಇಟ್ಟಿತ್ತು. .::. 39 ಯೇಸು--ಆ ಕಲ್ಲನ್ನು ತೆಗೆದುಹಾಕಿರಿ ಅಂದನು. ಅದಕ್ಕೆ ಸತ್ತುಹೋದವನ ಸಹೋದರಿಯಾದ ಮಾರ್ಥಳು ಆತನಿಗೆ--ಕರ್ತನೇ, ಇಷ್ಟರೊಳಗೆ ಅವನು ನಾರುತ್ತಾನೆ; ಯಾಕಂದರೆ ಅವನು ಸತ್ತು ನಾಲ್ಕು ದಿನಗಳಾದವು ಅಂದಳು. .::. 40 ಯೇಸು ಆಕೆಗೆ--ನೀನು ನಂಬುವದಾದರೆ ದೇವರ ಮಹಿಮೆಯನ್ನು ನೋಡುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಅಂದನು. .::. 41 ಆಗ ಅವರು ಸತ್ತವನನ್ನು ಇಟ್ಟಿದ್ದ ಸ್ಥಳದಿಂದ ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ--ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಾನು ನಿನ್ನನ್ನು ಕೊಂಡಾಡುತ್ತೇನೆ. .::. 42 ನೀನು ನನ್ನ ಪ್ರಾರ್ಥನೆಯನ್ನು ಯಾವಾಗಲೂ ಕೇಳುತ್ತೀ ಎಂದು ನಾನು ಬಲ್ಲೆನು. ಆದರೆ ನನ್ನ ಹತ್ತಿರದಲ್ಲಿ ನಿಂತಿರುವ ಜನರ ನಿಮಿತ್ತವಾಗಿ ನೀನು ನನ್ನನ್ನು ಕಳುಹಿಸಿದ್ದೀ ಎಂದು ಅವರು ನಂಬುವಂತೆ ನಾನು ಅದನ್ನು ಹೇಳಿದೆನು ಅಂದನು. .::. 43 ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು. .::. 44 ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು. .::. 45 ಆಗ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯ ರಲ್ಲಿ ಅನೇಕರು ಯೇಸು ಮಾಡಿದವುಗಳನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು. .::. 46 ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು. .::. 47 ಆಗ ಪ್ರಧಾನಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ--ಈ ಮನುಷ್ಯನು ಅನೇಕ ಅದ್ಭುತಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ? .::. 48 ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು. .::. 49 ಆದರೆ ಅವರಲ್ಲಿ ಆ ವರುಷದ ಮಹಾಯಾಜಕ ನಾದ ಕಾಯಫನೆಂಬವನು ಅವರಿಗೆ-- .::. 50 ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು. .::. 51 ಈ ಮಾತನ್ನು ತನ್ನಷ್ಟಕ್ಕೆ ತಾನೇ ಮಾತನಾಡಲಿಲ್ಲ; ಆದರೆ ಅವನು ಆ ವರುಷದಲ್ಲಿ ಮಹಾಯಾಜಕನಾಗಿದ್ದು ಯೇಸು ಆ ಜನಾಂಗಕ್ಕೋಸ್ಕರ ಮಾತ್ರವಲ್ಲದೆ .::. 52 ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೂ ಆತನು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು. .::. 53 ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. .::. 54 ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು. .::. 55 ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು. .::. 56 ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. .::. 57 ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
  • ಯೋಹಾನನು ಅಧ್ಯಾಯ 1  
  • ಯೋಹಾನನು ಅಧ್ಯಾಯ 2  
  • ಯೋಹಾನನು ಅಧ್ಯಾಯ 3  
  • ಯೋಹಾನನು ಅಧ್ಯಾಯ 4  
  • ಯೋಹಾನನು ಅಧ್ಯಾಯ 5  
  • ಯೋಹಾನನು ಅಧ್ಯಾಯ 6  
  • ಯೋಹಾನನು ಅಧ್ಯಾಯ 7  
  • ಯೋಹಾನನು ಅಧ್ಯಾಯ 8  
  • ಯೋಹಾನನು ಅಧ್ಯಾಯ 9  
  • ಯೋಹಾನನು ಅಧ್ಯಾಯ 10  
  • ಯೋಹಾನನು ಅಧ್ಯಾಯ 11  
  • ಯೋಹಾನನು ಅಧ್ಯಾಯ 12  
  • ಯೋಹಾನನು ಅಧ್ಯಾಯ 13  
  • ಯೋಹಾನನು ಅಧ್ಯಾಯ 14  
  • ಯೋಹಾನನು ಅಧ್ಯಾಯ 15  
  • ಯೋಹಾನನು ಅಧ್ಯಾಯ 16  
  • ಯೋಹಾನನು ಅಧ್ಯಾಯ 17  
  • ಯೋಹಾನನು ಅಧ್ಯಾಯ 18  
  • ಯೋಹಾನನು ಅಧ್ಯಾಯ 19  
  • ಯೋಹಾನನು ಅಧ್ಯಾಯ 20  
  • ಯೋಹಾನನು ಅಧ್ಯಾಯ 21  
×

Alert

×

Kannada Letters Keypad References