ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಮಲಾಕಿಯ

ಮಲಾಕಿಯ ಅಧ್ಯಾಯ 3

1 ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. 2 ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. 3 ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು. 4 ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು. 5 ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 6 ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ. 7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ. 8 ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. 9 ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. 10 ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. 11 ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 12 ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. 13 ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ. 14 ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ. 15 ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ. 16 ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು. 17 ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ. 18 ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
1 ಇಗೋ, ನನ್ನ ದೂತನನ್ನು ನಾನು ಕಳುಹಿಸುತ್ತೇನೆ; ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು; ನೀವು ಹುಡುಕುವ ಕರ್ತನು ಫಕ್ಕನೆ ತನ್ನ ಆಲಯಕ್ಕೆ ಬರುವನು; ನೀವು ಸಂತೋಷಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ. .::. 2 ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ. .::. 3 ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು. .::. 4 ಆಗ ಅವರು ಕರ್ತನಿಗೆ ನೀತಿಯಲ್ಲಿ ಕಾಣಿಕೆಯನ್ನು ಅರ್ಪಿಸುವದಕ್ಕಾಗಿಯೇ ಶುದ್ಧ ಮಾಡುವನು. ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಕರ್ತನಿಗೆ ಪೂರ್ವದ ದಿವಸಗಳಲ್ಲಿಯೂ ಮುಂಚಿನ ವರುಷಗಳಲ್ಲಿಯೂ ಆದ ಹಾಗೆ ಮೆಚ್ಚಿಕೆಯಾ ಗಿರುವದು. .::. 5 ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. .::. 6 ನಾನು ಕರ್ತನು, ನಾನು ಬದಲಾಗುವದಿಲ್ಲ; ಆದದರಿಂದ ಓ ಯಾಕೋಬಿನ ಕುಮಾರರೇ, ನೀವು ನಾಶವಾಗಲಿಲ್ಲ. .::. 7 ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮ ಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಕೈಕೊಳ್ಳಲಿಲ್ಲ; ನನ್ನ ಬಳಿಗೆ ತಿರುಗಿಕೊಳ್ಳಿರಿ; ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ; ಆದರೆ ನೀವು--ಯಾವದರಲ್ಲಿ ತಿರುಗಿಕೊಳ್ಳೋಣ ಎಂದು ಹೇಳುತ್ತೀರಿ. .::. 8 ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. .::. 9 ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. .::. 10 ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. .::. 11 ಇದಲ್ಲದೆ ನಾನು ನಿಮ್ಮ ನಿಮಿತ್ತ ನುಂಗಿ ಬಿಡುವವನನ್ನು ಗದರಿಸುವೆನು; ಅವನು ನಿಮ್ಮ ಭೂಮಿಯ ಫಲವನ್ನು ಕೆಡಿಸನು; ಇಲ್ಲವೆ ನಿಮ್ಮ ದ್ರಾಕ್ಷೇಬಳ್ಳಿ ಹೊಲದಲ್ಲಿ ತನ್ನ ಫಲ ವನ್ನು ಕಾಲಕ್ಕೆ ಮುಂಚೆ ಉದುರಿಸಿಬಿಡುವದಿಲ್ಲವೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. .::. 12 ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು; ಯಾಕಂದರೆ ನೀವು ರಮ್ಯವಾದ ದೇಶವಾಗುವಿರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. .::. 13 ನಿಮ್ಮ ಮಾತುಗಳು ನನಗೆ ವಿರೋಧವಾಗಿ ಬಲವಾಗಿದ್ದವೆಂದು ಕರ್ತನು ಹೇಳುತ್ತಾನೆ; ಆದಾಗ್ಯೂ, ನೀವು--ನಿನಗೆ ವಿರೋಧವಾಗಿ ಇಷ್ಟೊಂದು ನಾವು ಏನು ಮಾತಾಡಿದ್ದೇವೆ ಅನ್ನುತ್ತೀರಿ. .::. 14 ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ. .::. 15 ಈಗ ನಾವು ಗರ್ವಿಷ್ಠ ರನ್ನು ಭಾಗ್ಯವಂತರೆಂದನ್ನುತ್ತೇವೆ; ಹೌದು, ದುಷ್ಟತ್ವ ಮಾಡುವವರು ಅಭಿವೃದ್ಧಿಯಾಗುತ್ತಾರೆ; ಹೌದು, ದೇವರನ್ನು ಪರೀಕ್ಷಿಸುವವರೇ ರಕ್ಷಿಸಲ್ಪಟ್ಟಿದ್ದಾರೆ ಎಂದು ಹೇಳಿದ್ದೀರಿ. .::. 16 ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು. .::. 17 ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ. .::. 18 ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
  • ಮಲಾಕಿಯ ಅಧ್ಯಾಯ 1  
  • ಮಲಾಕಿಯ ಅಧ್ಯಾಯ 2  
  • ಮಲಾಕಿಯ ಅಧ್ಯಾಯ 3  
  • ಮಲಾಕಿಯ ಅಧ್ಯಾಯ 4  
×

Alert

×

Kannada Letters Keypad References