ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಙ್ಞಾನೋಕ್ತಿಗಳು

ಙ್ಞಾನೋಕ್ತಿಗಳು ಅಧ್ಯಾಯ 13

1 ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ. 2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು. 3 ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು. 4 ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು. 5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು. 6 ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು. 7 ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ. 8 ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ. 9 ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು. 10 ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ. 11 ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು. 12 ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು. 13 ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. 14 ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ. 15 ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ. 16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ. 17 ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ. 18 ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು. 19 ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ. 20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು. 21 ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು. 22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ. 23 ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು. 24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ. 25 ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
1 ಜ್ಞಾನಿಯಾದ ಮಗನು ತನ್ನ ತಂದೆಯ ಬೋಧನೆಯನ್ನು ಕೇಳುತ್ತಾನೆ; ತಿರಸ್ಕರಿಸು ವವನು ಗದರಿಕೆಯನ್ನು ಕೇಳುವದಿಲ್ಲ. .::. 2 ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ತಿನ್ನು ವನು; ದೋಷಿಗಳ ಪ್ರಾಣವು ಬಲಾತ್ಕಾರವನ್ನು ತಿನ್ನು ವದು. .::. 3 ತನ್ನ ಬಾಯನ್ನು ಕಾಪಾಡುವವನು ಜೀವ ವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಅಗಲವಾಗಿ ತೆರೆಯುವವನಿಗೆ ನಾಶನವಾಗುವದು. .::. 4 ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು. .::. 5 ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ; ದುಷ್ಟನು ಹೇಸಿಗೆಯಾಗಿದ್ದು ಅವಮಾನಕ್ಕೆ ಗುರಿಯಾಗು ವನು. .::. 6 ಯಥಾರ್ಥವಂತನನ್ನು ನೀತಿಯು ತನ್ನ ಮಾರ್ಗ ದಲ್ಲಿ ಕಾಪಾಡುತ್ತದೆ; ಕೆಟ್ಟತನವು ಪಾಪಿಯನ್ನು ಕೆಡವುವದು. .::. 7 ತನ್ನನ್ನು ತಾನೇ ಐಶ್ವರ್ಯವಂತನಾಗಿ ಮಾಡಿಕೊಳ್ಳುವವನು ಇದ್ದಾನೆ; ಅವನಿಗೆ ಏನೂ ಇರು ವದಿಲ್ಲ. ತನ್ನನ್ನು ಬಡವನಾಗಿ ಮಾಡಿಕೊಳ್ಳುವವನಿ ದ್ದಾನೆ; ಅವನಿಗೆ ಎಷ್ಟೋ ಐಶ್ವರ್ಯವಿದೆ. .::. 8 ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ. .::. 9 ನೀತಿವಂತರ ಬೆಳಕು ಸಂತೋಷಿಸುತ್ತದೆ; ದುಷ್ಟರ ದೀಪವು ಆರಿ ಹೋಗುವದು. .::. 10 ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ. .::. 11 ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು. .::. 12 ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು. .::. 13 ವಾಕ್ಯವನ್ನು ಉಲ್ಲಂಘಿಸುವ ವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು. .::. 14 ಮರಣದ ಪಾಶಗ ಳಿಂದ ತಪ್ಪಿಸಿಕೊಳ್ಳುವದಕ್ಕೆ ಜ್ಞಾನವಂತರ ಕಟ್ಟಳೆಯು ಜೀವದ ಬುಗ್ಗೆಯಾಗಿದೆ. .::. 15 ಸುವಿವೇಕವು ದಯಾ ಸ್ಪದವು; ದೋಷಕರ ಮಾರ್ಗವು ಕಠಿಣವಾಗಿದೆ. .::. 16 ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಅವಿವೇಕಿಯು ತನ್ನ ಮೂಢತ್ವವನ್ನು ಹೊರಗೆಡವು ತ್ತಾನೆ. .::. 17 ದುಷ್ಟ ಸೇವಕನು ಕೇಡಿಗೆ ಬೀಳುತ್ತಾನೆ; ನಂಬಿಕೆಯಾದ ರಾಯಭಾರಿಯು ಆರೋಗ್ಯದಾಯಕ. .::. 18 ಬೋಧನೆಯನ್ನು ತಿರಸ್ಕರಿಸುವವನಿಗೆ ಬಡತನವೂ ಅವಮಾನವೂ ಬರುವವು.; ಗದರಿಕೆಯನ್ನು ಗಮನಿಸು ವವನು ಸನ್ಮಾನಹೊಂದುವನು. .::. 19 ಇಷ್ಟ ಸಿದ್ಧಿ ಪ್ರಾಣಕ್ಕೆ ಸಿಹಿಯಾಗಿದೆ; ಕೆಟ್ಟತನದಿಂದ ತೊಲಗುವದು ಅವಿವೇಕಿಗಳಿಗೆ ಅಸಹ್ಯವಾಗಿದೆ. .::. 20 ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗಿರುವನು. ಬುದ್ಧಿ ಹೀನರ ಜೊತೆಗಾರನು ನಾಶವಾಗುವನು. .::. 21 ದುಷ್ಟತ್ವವು ಪಾಪಿಗಳನ್ನು ಹಿಂದಟ್ಟುತ್ತದೆ; ನೀತಿ ವಂತರಿಗೆ ಒಳ್ಳೇದು ಪ್ರತಿಫಲವಾಗುವದು. .::. 22 ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ. .::. 23 ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು. .::. 24 ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ. .::. 25 ತನಗೆ ತೃಪ್ತಿಯಾಗುವ ವರೆಗೆ ನೀತಿವಂತನು ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವದು.
  • ಙ್ಞಾನೋಕ್ತಿಗಳು ಅಧ್ಯಾಯ 1  
  • ಙ್ಞಾನೋಕ್ತಿಗಳು ಅಧ್ಯಾಯ 2  
  • ಙ್ಞಾನೋಕ್ತಿಗಳು ಅಧ್ಯಾಯ 3  
  • ಙ್ಞಾನೋಕ್ತಿಗಳು ಅಧ್ಯಾಯ 4  
  • ಙ್ಞಾನೋಕ್ತಿಗಳು ಅಧ್ಯಾಯ 5  
  • ಙ್ಞಾನೋಕ್ತಿಗಳು ಅಧ್ಯಾಯ 6  
  • ಙ್ಞಾನೋಕ್ತಿಗಳು ಅಧ್ಯಾಯ 7  
  • ಙ್ಞಾನೋಕ್ತಿಗಳು ಅಧ್ಯಾಯ 8  
  • ಙ್ಞಾನೋಕ್ತಿಗಳು ಅಧ್ಯಾಯ 9  
  • ಙ್ಞಾನೋಕ್ತಿಗಳು ಅಧ್ಯಾಯ 10  
  • ಙ್ಞಾನೋಕ್ತಿಗಳು ಅಧ್ಯಾಯ 11  
  • ಙ್ಞಾನೋಕ್ತಿಗಳು ಅಧ್ಯಾಯ 12  
  • ಙ್ಞಾನೋಕ್ತಿಗಳು ಅಧ್ಯಾಯ 13  
  • ಙ್ಞಾನೋಕ್ತಿಗಳು ಅಧ್ಯಾಯ 14  
  • ಙ್ಞಾನೋಕ್ತಿಗಳು ಅಧ್ಯಾಯ 15  
  • ಙ್ಞಾನೋಕ್ತಿಗಳು ಅಧ್ಯಾಯ 16  
  • ಙ್ಞಾನೋಕ್ತಿಗಳು ಅಧ್ಯಾಯ 17  
  • ಙ್ಞಾನೋಕ್ತಿಗಳು ಅಧ್ಯಾಯ 18  
  • ಙ್ಞಾನೋಕ್ತಿಗಳು ಅಧ್ಯಾಯ 19  
  • ಙ್ಞಾನೋಕ್ತಿಗಳು ಅಧ್ಯಾಯ 20  
  • ಙ್ಞಾನೋಕ್ತಿಗಳು ಅಧ್ಯಾಯ 21  
  • ಙ್ಞಾನೋಕ್ತಿಗಳು ಅಧ್ಯಾಯ 22  
  • ಙ್ಞಾನೋಕ್ತಿಗಳು ಅಧ್ಯಾಯ 23  
  • ಙ್ಞಾನೋಕ್ತಿಗಳು ಅಧ್ಯಾಯ 24  
  • ಙ್ಞಾನೋಕ್ತಿಗಳು ಅಧ್ಯಾಯ 25  
  • ಙ್ಞಾನೋಕ್ತಿಗಳು ಅಧ್ಯಾಯ 26  
  • ಙ್ಞಾನೋಕ್ತಿಗಳು ಅಧ್ಯಾಯ 27  
  • ಙ್ಞಾನೋಕ್ತಿಗಳು ಅಧ್ಯಾಯ 28  
  • ಙ್ಞಾನೋಕ್ತಿಗಳು ಅಧ್ಯಾಯ 29  
  • ಙ್ಞಾನೋಕ್ತಿಗಳು ಅಧ್ಯಾಯ 30  
  • ಙ್ಞಾನೋಕ್ತಿಗಳು ಅಧ್ಯಾಯ 31  
×

Alert

×

Kannada Letters Keypad References