ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆರೆಮಿಯ

ಯೆರೆಮಿಯ ಅಧ್ಯಾಯ 43

1 ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ 2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ. 3 ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು. 4 ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ. 5 ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು 6 ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು. 7 ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು. 8 ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು. 9 ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ-- 10 ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. 11 ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು. 12 ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು. 13 ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
1 ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ .::. 2 ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ. .::. 3 ಅವರು ನಮ್ಮನ್ನು ಕೊಂದುಹಾಕುವಂತೆ ನಮ್ಮನ್ನು ಬಾಬೆಲಿಗೆ ಸೆರೆ ಒಯ್ಯುವ ಹಾಗೆ ನಮ್ಮನ್ನು ಕಸ್ದೀಯರ ಕೈಗೆ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂ ಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರಿಸಿದ್ದಾನೆ ಅಂದರು. .::. 4 ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ. .::. 5 ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು .::. 6 ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು. .::. 7 ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು. .::. 8 ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು. .::. 9 ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ-- .::. 10 ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು. .::. 11 ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು. .::. 12 ಇದಲ್ಲದೆ ನಾನು ಐಗುಪ್ತದ ದೇವರುಗಳ ಮನೆಗಳಲ್ಲಿ ಬೆಂಕಿ ಹಚ್ಚುವೆನು; ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು; ಕುರುಬನು ತನ್ನ ವಸ್ತ್ರವನ್ನು ಹೊದ್ದು ಕೊಳ್ಳುವಂತೆ ಐಗುಪ್ತದೇಶವನ್ನು ಹೊದ್ದುಕೊಂಡು ಸಮಾಧಾನವಾಗಿ ಅಲ್ಲಿಂದ ಹೊರಡುವನು. .::. 13 ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
  • ಯೆರೆಮಿಯ ಅಧ್ಯಾಯ 1  
  • ಯೆರೆಮಿಯ ಅಧ್ಯಾಯ 2  
  • ಯೆರೆಮಿಯ ಅಧ್ಯಾಯ 3  
  • ಯೆರೆಮಿಯ ಅಧ್ಯಾಯ 4  
  • ಯೆರೆಮಿಯ ಅಧ್ಯಾಯ 5  
  • ಯೆರೆಮಿಯ ಅಧ್ಯಾಯ 6  
  • ಯೆರೆಮಿಯ ಅಧ್ಯಾಯ 7  
  • ಯೆರೆಮಿಯ ಅಧ್ಯಾಯ 8  
  • ಯೆರೆಮಿಯ ಅಧ್ಯಾಯ 9  
  • ಯೆರೆಮಿಯ ಅಧ್ಯಾಯ 10  
  • ಯೆರೆಮಿಯ ಅಧ್ಯಾಯ 11  
  • ಯೆರೆಮಿಯ ಅಧ್ಯಾಯ 12  
  • ಯೆರೆಮಿಯ ಅಧ್ಯಾಯ 13  
  • ಯೆರೆಮಿಯ ಅಧ್ಯಾಯ 14  
  • ಯೆರೆಮಿಯ ಅಧ್ಯಾಯ 15  
  • ಯೆರೆಮಿಯ ಅಧ್ಯಾಯ 16  
  • ಯೆರೆಮಿಯ ಅಧ್ಯಾಯ 17  
  • ಯೆರೆಮಿಯ ಅಧ್ಯಾಯ 18  
  • ಯೆರೆಮಿಯ ಅಧ್ಯಾಯ 19  
  • ಯೆರೆಮಿಯ ಅಧ್ಯಾಯ 20  
  • ಯೆರೆಮಿಯ ಅಧ್ಯಾಯ 21  
  • ಯೆರೆಮಿಯ ಅಧ್ಯಾಯ 22  
  • ಯೆರೆಮಿಯ ಅಧ್ಯಾಯ 23  
  • ಯೆರೆಮಿಯ ಅಧ್ಯಾಯ 24  
  • ಯೆರೆಮಿಯ ಅಧ್ಯಾಯ 25  
  • ಯೆರೆಮಿಯ ಅಧ್ಯಾಯ 26  
  • ಯೆರೆಮಿಯ ಅಧ್ಯಾಯ 27  
  • ಯೆರೆಮಿಯ ಅಧ್ಯಾಯ 28  
  • ಯೆರೆಮಿಯ ಅಧ್ಯಾಯ 29  
  • ಯೆರೆಮಿಯ ಅಧ್ಯಾಯ 30  
  • ಯೆರೆಮಿಯ ಅಧ್ಯಾಯ 31  
  • ಯೆರೆಮಿಯ ಅಧ್ಯಾಯ 32  
  • ಯೆರೆಮಿಯ ಅಧ್ಯಾಯ 33  
  • ಯೆರೆಮಿಯ ಅಧ್ಯಾಯ 34  
  • ಯೆರೆಮಿಯ ಅಧ್ಯಾಯ 35  
  • ಯೆರೆಮಿಯ ಅಧ್ಯಾಯ 36  
  • ಯೆರೆಮಿಯ ಅಧ್ಯಾಯ 37  
  • ಯೆರೆಮಿಯ ಅಧ್ಯಾಯ 38  
  • ಯೆರೆಮಿಯ ಅಧ್ಯಾಯ 39  
  • ಯೆರೆಮಿಯ ಅಧ್ಯಾಯ 40  
  • ಯೆರೆಮಿಯ ಅಧ್ಯಾಯ 41  
  • ಯೆರೆಮಿಯ ಅಧ್ಯಾಯ 42  
  • ಯೆರೆಮಿಯ ಅಧ್ಯಾಯ 43  
  • ಯೆರೆಮಿಯ ಅಧ್ಯಾಯ 44  
  • ಯೆರೆಮಿಯ ಅಧ್ಯಾಯ 45  
  • ಯೆರೆಮಿಯ ಅಧ್ಯಾಯ 46  
  • ಯೆರೆಮಿಯ ಅಧ್ಯಾಯ 47  
  • ಯೆರೆಮಿಯ ಅಧ್ಯಾಯ 48  
  • ಯೆರೆಮಿಯ ಅಧ್ಯಾಯ 49  
  • ಯೆರೆಮಿಯ ಅಧ್ಯಾಯ 50  
  • ಯೆರೆಮಿಯ ಅಧ್ಯಾಯ 51  
  • ಯೆರೆಮಿಯ ಅಧ್ಯಾಯ 52  
×

Alert

×

Kannada Letters Keypad References