ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
1 ಕೊರಿಂಥದವರಿಗೆ

1 ಕೊರಿಂಥದವರಿಗೆ ಅಧ್ಯಾಯ 13

1 ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. 2 ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. 3 ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ. 4 ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, 5 ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. 6 ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. 7 ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. 8 ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು. 9 ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. 10 ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. 11 ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. 12 ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ. 13 ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
1. ನಾನು ಮನುಷ್ಯರ ಮತ್ತು ದೂತರ ಭಾಷೆಗಳನ್ನು ಆಡುವವನಾದರೂ ಪ್ರೀತಿ ಯಿಲ್ಲದವನಾಗಿದ್ದರೆ ನಾದಕೊಡುವ ಕಂಚೂ ಗಣಗಣಿ ಸುವ ತಾಳವೂ ಆಗಿದ್ದೇನೆ. 2. ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ. 3. ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ. 4. ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, 5. ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. 6. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. 7. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ. 8. ಪ್ರೀತಿಯು ಎಂದಿಗೂ ಬಿದ್ದು ಹೋಗುವದಿಲ್ಲ;ಆದರೆ ಪ್ರವಾದನೆಗಳು ಬಿದ್ದುಹೋಗುವವು; ಭಾಷೆ ಗಳೋ ನಿಂತುಹೋಗುವವು: ಜ್ಞಾನವೋ ಇಲ್ಲದಂತಾ ಗುವದು. 9. ನಾವು ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. 10. ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. 11. ನಾನು ಬಾಲಕನಾಗಿದ್ದಾಗ ಬಾಲಕನ ಹಾಗೆ ಮಾತನಾಡಿದೆನು; ಬಾಲಕನ ಹಾಗೆ ತಿಳಿದುಕೊಂಡೆನು. ಬಾಲಕನ ಹಾಗೆ ಯೋಚಿಸಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದವು ಗಳನ್ನು ಬಿಟ್ಟುಬಿಟ್ಟೆನು. 12. ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ. 13. ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
  • 1 ಕೊರಿಂಥದವರಿಗೆ ಅಧ್ಯಾಯ 1  
  • 1 ಕೊರಿಂಥದವರಿಗೆ ಅಧ್ಯಾಯ 2  
  • 1 ಕೊರಿಂಥದವರಿಗೆ ಅಧ್ಯಾಯ 3  
  • 1 ಕೊರಿಂಥದವರಿಗೆ ಅಧ್ಯಾಯ 4  
  • 1 ಕೊರಿಂಥದವರಿಗೆ ಅಧ್ಯಾಯ 5  
  • 1 ಕೊರಿಂಥದವರಿಗೆ ಅಧ್ಯಾಯ 6  
  • 1 ಕೊರಿಂಥದವರಿಗೆ ಅಧ್ಯಾಯ 7  
  • 1 ಕೊರಿಂಥದವರಿಗೆ ಅಧ್ಯಾಯ 8  
  • 1 ಕೊರಿಂಥದವರಿಗೆ ಅಧ್ಯಾಯ 9  
  • 1 ಕೊರಿಂಥದವರಿಗೆ ಅಧ್ಯಾಯ 10  
  • 1 ಕೊರಿಂಥದವರಿಗೆ ಅಧ್ಯಾಯ 11  
  • 1 ಕೊರಿಂಥದವರಿಗೆ ಅಧ್ಯಾಯ 12  
  • 1 ಕೊರಿಂಥದವರಿಗೆ ಅಧ್ಯಾಯ 13  
  • 1 ಕೊರಿಂಥದವರಿಗೆ ಅಧ್ಯಾಯ 14  
  • 1 ಕೊರಿಂಥದವರಿಗೆ ಅಧ್ಯಾಯ 15  
  • 1 ಕೊರಿಂಥದವರಿಗೆ ಅಧ್ಯಾಯ 16  
×

Alert

×

Kannada Letters Keypad References