ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಯೆಶಾಯ

ಯೆಶಾಯ ಅಧ್ಯಾಯ 53

1 ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು? 2 ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. 3 ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. 4 ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. 5 ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. 6 ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. 7 ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. 8 ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. 9 ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. 10 ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. 11 ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು. 12 ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
1 ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು? .::. 2 ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. .::. 3 ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. .::. 4 ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. .::. 5 ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. .::. 6 ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. .::. 7 ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. .::. 8 ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. .::. 9 ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. .::. 10 ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. .::. 11 ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು. .::. 12 ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
  • ಯೆಶಾಯ ಅಧ್ಯಾಯ 1  
  • ಯೆಶಾಯ ಅಧ್ಯಾಯ 2  
  • ಯೆಶಾಯ ಅಧ್ಯಾಯ 3  
  • ಯೆಶಾಯ ಅಧ್ಯಾಯ 4  
  • ಯೆಶಾಯ ಅಧ್ಯಾಯ 5  
  • ಯೆಶಾಯ ಅಧ್ಯಾಯ 6  
  • ಯೆಶಾಯ ಅಧ್ಯಾಯ 7  
  • ಯೆಶಾಯ ಅಧ್ಯಾಯ 8  
  • ಯೆಶಾಯ ಅಧ್ಯಾಯ 9  
  • ಯೆಶಾಯ ಅಧ್ಯಾಯ 10  
  • ಯೆಶಾಯ ಅಧ್ಯಾಯ 11  
  • ಯೆಶಾಯ ಅಧ್ಯಾಯ 12  
  • ಯೆಶಾಯ ಅಧ್ಯಾಯ 13  
  • ಯೆಶಾಯ ಅಧ್ಯಾಯ 14  
  • ಯೆಶಾಯ ಅಧ್ಯಾಯ 15  
  • ಯೆಶಾಯ ಅಧ್ಯಾಯ 16  
  • ಯೆಶಾಯ ಅಧ್ಯಾಯ 17  
  • ಯೆಶಾಯ ಅಧ್ಯಾಯ 18  
  • ಯೆಶಾಯ ಅಧ್ಯಾಯ 19  
  • ಯೆಶಾಯ ಅಧ್ಯಾಯ 20  
  • ಯೆಶಾಯ ಅಧ್ಯಾಯ 21  
  • ಯೆಶಾಯ ಅಧ್ಯಾಯ 22  
  • ಯೆಶಾಯ ಅಧ್ಯಾಯ 23  
  • ಯೆಶಾಯ ಅಧ್ಯಾಯ 24  
  • ಯೆಶಾಯ ಅಧ್ಯಾಯ 25  
  • ಯೆಶಾಯ ಅಧ್ಯಾಯ 26  
  • ಯೆಶಾಯ ಅಧ್ಯಾಯ 27  
  • ಯೆಶಾಯ ಅಧ್ಯಾಯ 28  
  • ಯೆಶಾಯ ಅಧ್ಯಾಯ 29  
  • ಯೆಶಾಯ ಅಧ್ಯಾಯ 30  
  • ಯೆಶಾಯ ಅಧ್ಯಾಯ 31  
  • ಯೆಶಾಯ ಅಧ್ಯಾಯ 32  
  • ಯೆಶಾಯ ಅಧ್ಯಾಯ 33  
  • ಯೆಶಾಯ ಅಧ್ಯಾಯ 34  
  • ಯೆಶಾಯ ಅಧ್ಯಾಯ 35  
  • ಯೆಶಾಯ ಅಧ್ಯಾಯ 36  
  • ಯೆಶಾಯ ಅಧ್ಯಾಯ 37  
  • ಯೆಶಾಯ ಅಧ್ಯಾಯ 38  
  • ಯೆಶಾಯ ಅಧ್ಯಾಯ 39  
  • ಯೆಶಾಯ ಅಧ್ಯಾಯ 40  
  • ಯೆಶಾಯ ಅಧ್ಯಾಯ 41  
  • ಯೆಶಾಯ ಅಧ್ಯಾಯ 42  
  • ಯೆಶಾಯ ಅಧ್ಯಾಯ 43  
  • ಯೆಶಾಯ ಅಧ್ಯಾಯ 44  
  • ಯೆಶಾಯ ಅಧ್ಯಾಯ 45  
  • ಯೆಶಾಯ ಅಧ್ಯಾಯ 46  
  • ಯೆಶಾಯ ಅಧ್ಯಾಯ 47  
  • ಯೆಶಾಯ ಅಧ್ಯಾಯ 48  
  • ಯೆಶಾಯ ಅಧ್ಯಾಯ 49  
  • ಯೆಶಾಯ ಅಧ್ಯಾಯ 50  
  • ಯೆಶಾಯ ಅಧ್ಯಾಯ 51  
  • ಯೆಶಾಯ ಅಧ್ಯಾಯ 52  
  • ಯೆಶಾಯ ಅಧ್ಯಾಯ 53  
  • ಯೆಶಾಯ ಅಧ್ಯಾಯ 54  
  • ಯೆಶಾಯ ಅಧ್ಯಾಯ 55  
  • ಯೆಶಾಯ ಅಧ್ಯಾಯ 56  
  • ಯೆಶಾಯ ಅಧ್ಯಾಯ 57  
  • ಯೆಶಾಯ ಅಧ್ಯಾಯ 58  
  • ಯೆಶಾಯ ಅಧ್ಯಾಯ 59  
  • ಯೆಶಾಯ ಅಧ್ಯಾಯ 60  
  • ಯೆಶಾಯ ಅಧ್ಯಾಯ 61  
  • ಯೆಶಾಯ ಅಧ್ಯಾಯ 62  
  • ಯೆಶಾಯ ಅಧ್ಯಾಯ 63  
  • ಯೆಶಾಯ ಅಧ್ಯಾಯ 64  
  • ಯೆಶಾಯ ಅಧ್ಯಾಯ 65  
  • ಯೆಶಾಯ ಅಧ್ಯಾಯ 66  
×

Alert

×

Kannada Letters Keypad References