ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
ಆದಿಕಾಂಡ

ಆದಿಕಾಂಡ ಅಧ್ಯಾಯ 20

1 ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು. 2 ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು. 3 ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು. 4 ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ? 5 ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು. 6 ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ. 7 ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು. 8 ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು. 9 ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು. 10 ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ 11 ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು. 12 ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು. 13 ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು. 14 ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು. 15 ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು. 16 ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು. 17 ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು. 18 ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
1 ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು. .::. 2 ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು. .::. 3 ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು. .::. 4 ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ? .::. 5 ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು. .::. 6 ದೇವರು ಕನಸಿನಲ್ಲಿ ಅವನಿಗೆ--ಹೌದು, ನೀನು ಯಥಾರ್ಥವಾದ ಹೃದಯ ದಿಂದ ಇದನ್ನು ಮಾಡಿದ್ದೀ ಎಂದು ನನಗೂ ತಿಳಿದದೆ. ಆದದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದ ಹಾಗೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟುವದಕ್ಕೆ ಬಿಡಲಿಲ್ಲ. .::. 7 ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸು; ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವ ಹಾಗೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ ಅಂದನು. .::. 8 ಅಬೀಮೆಲೆಕನು ಬೆಳಿಗ್ಗೆ ಎದ್ದು ತನ್ನ ಸೇವಕರೆಲ್ಲರನ್ನು ಕರೆದು ಇವುಗಳನ್ನೆಲ್ಲ ಅವರಿಗೆ ಹೇಳಿದನು; ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು. .::. 9 ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು. .::. 10 ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ .::. 11 ಅಬ್ರಹಾಮನು--ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ಅಂದುಕೊಂಡೆನು. .::. 12 ಇದಲ್ಲದೆ ನಿಶ್ಚಯವಾಗಿ ಅವಳು ನನ್ನ ತಂಗಿ; ಆಕೆಯು ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ; ನನಗೆ ಹೆಂಡತಿಯಾದಳು. .::. 13 ದೇವರು ನನ್ನ ತಂದೆಯ ಮನೆಯಿಂದ ನನ್ನನ್ನು ದೇಶಾಂತರಕ್ಕೆ ಹೋಗಲು ಕರೆದಾಗ ನಾನು ಅವಳಿಗೆ--ನೀನು ನನಗೆ ತೋರಿಸತಕ್ಕ ದಯವು ಯಾವದಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ-- ಇವನು ನನ್ನ ಅಣ್ಣನೆಂಬದಾಗಿ ಹೇಳೆಂದು ಅಂದೆನು. .::. 14 ಆಗ ಅಬೀಮೆಲೆಕನು ಕುರಿಎತ್ತುಗಳನ್ನೂ ದಾಸ ದಾಸಿಯರನ್ನೂ ಅಬ್ರಹಾಮನಿಗೆ ಕೊಟ್ಟು ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿದನು. .::. 15 ಅಬೀಮೆಲೆಕನು--ಇಗೋ, ನನ್ನ ದೇಶವು ನಿನ್ನ ಮುಂದೆ ಇದೆ; ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು ಅಂದನು. .::. 16 ಸಾರಳಿಗೆ--ಇಗೋ, ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣ ಕೊಟ್ಟಿದ್ದೇನೆ; ನಿನ್ನ ಸಂಗಡ ಇರುವವರೆಲ್ಲರಿಗಾಗಿಯೂ ಉಳಿದವರೆ ಲ್ಲರಿಗಾಗಿಯೂ ಇವನು ನಿನಗೆ ಕಣ್ಣಿನ ಮುಸುಕಿನಂತೆ ಇರಲಿ ಅಂದನು. ಹೀಗೆ ಆಕೆಯು ಗದರಿಸಲ್ಪಟ್ಟಳು. .::. 17 ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆ ಮಾಡಿದ್ದರಿಂದ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಅವನ ದಾಸಿಯರನ್ನೂ ವಾಸಿಮಾಡಿ ದನು; ಆದದರಿಂದ ಅವರಿಗೆ ಮಕ್ಕಳಾದರು. .::. 18 ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
  • ಆದಿಕಾಂಡ ಅಧ್ಯಾಯ 1  
  • ಆದಿಕಾಂಡ ಅಧ್ಯಾಯ 2  
  • ಆದಿಕಾಂಡ ಅಧ್ಯಾಯ 3  
  • ಆದಿಕಾಂಡ ಅಧ್ಯಾಯ 4  
  • ಆದಿಕಾಂಡ ಅಧ್ಯಾಯ 5  
  • ಆದಿಕಾಂಡ ಅಧ್ಯಾಯ 6  
  • ಆದಿಕಾಂಡ ಅಧ್ಯಾಯ 7  
  • ಆದಿಕಾಂಡ ಅಧ್ಯಾಯ 8  
  • ಆದಿಕಾಂಡ ಅಧ್ಯಾಯ 9  
  • ಆದಿಕಾಂಡ ಅಧ್ಯಾಯ 10  
  • ಆದಿಕಾಂಡ ಅಧ್ಯಾಯ 11  
  • ಆದಿಕಾಂಡ ಅಧ್ಯಾಯ 12  
  • ಆದಿಕಾಂಡ ಅಧ್ಯಾಯ 13  
  • ಆದಿಕಾಂಡ ಅಧ್ಯಾಯ 14  
  • ಆದಿಕಾಂಡ ಅಧ್ಯಾಯ 15  
  • ಆದಿಕಾಂಡ ಅಧ್ಯಾಯ 16  
  • ಆದಿಕಾಂಡ ಅಧ್ಯಾಯ 17  
  • ಆದಿಕಾಂಡ ಅಧ್ಯಾಯ 18  
  • ಆದಿಕಾಂಡ ಅಧ್ಯಾಯ 19  
  • ಆದಿಕಾಂಡ ಅಧ್ಯಾಯ 20  
  • ಆದಿಕಾಂಡ ಅಧ್ಯಾಯ 21  
  • ಆದಿಕಾಂಡ ಅಧ್ಯಾಯ 22  
  • ಆದಿಕಾಂಡ ಅಧ್ಯಾಯ 23  
  • ಆದಿಕಾಂಡ ಅಧ್ಯಾಯ 24  
  • ಆದಿಕಾಂಡ ಅಧ್ಯಾಯ 25  
  • ಆದಿಕಾಂಡ ಅಧ್ಯಾಯ 26  
  • ಆದಿಕಾಂಡ ಅಧ್ಯಾಯ 27  
  • ಆದಿಕಾಂಡ ಅಧ್ಯಾಯ 28  
  • ಆದಿಕಾಂಡ ಅಧ್ಯಾಯ 29  
  • ಆದಿಕಾಂಡ ಅಧ್ಯಾಯ 30  
  • ಆದಿಕಾಂಡ ಅಧ್ಯಾಯ 31  
  • ಆದಿಕಾಂಡ ಅಧ್ಯಾಯ 32  
  • ಆದಿಕಾಂಡ ಅಧ್ಯಾಯ 33  
  • ಆದಿಕಾಂಡ ಅಧ್ಯಾಯ 34  
  • ಆದಿಕಾಂಡ ಅಧ್ಯಾಯ 35  
  • ಆದಿಕಾಂಡ ಅಧ್ಯಾಯ 36  
  • ಆದಿಕಾಂಡ ಅಧ್ಯಾಯ 37  
  • ಆದಿಕಾಂಡ ಅಧ್ಯಾಯ 38  
  • ಆದಿಕಾಂಡ ಅಧ್ಯಾಯ 39  
  • ಆದಿಕಾಂಡ ಅಧ್ಯಾಯ 40  
  • ಆದಿಕಾಂಡ ಅಧ್ಯಾಯ 41  
  • ಆದಿಕಾಂಡ ಅಧ್ಯಾಯ 42  
  • ಆದಿಕಾಂಡ ಅಧ್ಯಾಯ 43  
  • ಆದಿಕಾಂಡ ಅಧ್ಯಾಯ 44  
  • ಆದಿಕಾಂಡ ಅಧ್ಯಾಯ 45  
  • ಆದಿಕಾಂಡ ಅಧ್ಯಾಯ 46  
  • ಆದಿಕಾಂಡ ಅಧ್ಯಾಯ 47  
  • ಆದಿಕಾಂಡ ಅಧ್ಯಾಯ 48  
  • ಆದಿಕಾಂಡ ಅಧ್ಯಾಯ 49  
  • ಆದಿಕಾಂಡ ಅಧ್ಯಾಯ 50  
×

Alert

×

Kannada Letters Keypad References