ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಪೂರ್ವಕಾಲವೃತ್ತಾ

1 ಪೂರ್ವಕಾಲವೃತ್ತಾ ಅಧ್ಯಾಯ 26

ದ್ವಾರಪಾಲಕರು 1 ದ್ವಾರಪಾಲಕರ ವರ್ಗಗಳು: ಕೋರಹಿಯರೊಳಗೆ: ಆಸಾಫನ ಪುತ್ರರಲ್ಲಿ ಒಬ್ಬನಾಗಿರುವ ಕೋರೆಯ ಮಗನಾದ ಮೆಷೆಲೆಮ್ಯನು. 2 ಮೆಷೆಲೆಮ್ಯನ ಪುತ್ರರು: ಚೊಚ್ಚಲ ಮಗನು ಜೆಕರ್ಯನು; ಎರಡನೆಯವನು ಯೆದೀಯಯೇಲನು; ಮೂರನೆಯವನು ಜೆಬದ್ಯನು; ನಾಲ್ಕನೆಯವನು ಯತ್ನಿಯೇಲನು; 3 ಐದನೆಯವನು ಏಲಾಮನು; ಆರನೆಯವನು ಯೆಹೋಹಾನಾನನು; ಏಳನೆಯವನು ಎಲಿಹೋಯೇನೈನು. 4 ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್; 5 ಆರನೆಯವನು ಅಮ್ಮಿಯೇಲ್; ಏಳನೆಯವನು ಇಸ್ಸಾಕಾರ್ ಮತ್ತು ಎಂಟನೆಯವನು ಪೆಯುಲ್ಲೆತೈ. ಓಬೇದ್ ಎದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು. 6 ಇದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಪುತ್ರರು ಹುಟ್ಟಿದರು, ಅವರು ಪರಾಕ್ರಮಶಾಲಿಗಳಾಗಿದ್ದರು. 7 ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. 8 ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು. 9 ಮೆಷೆಲೆಮ್ಯನಿಗೆ ಬಲವುಳ್ಳ ಪುತ್ರರೂ, ಸಹೋದರರೂ ಹದಿನೆಂಟು ಮಂದಿಯಾಗಿದ್ದರು. 10 ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು; 11 ಎರಡನೆಯವನು ಹಿಲ್ಕೀಯನು; ಮೂರನೆಯವನು ಟೆಬಲ್ಯನು; ನಾಲ್ಕನೆಯವನು ಜಕರೀಯನು. ಹೋಸನ ಸಮಸ್ತ ಪುತ್ರರು ಮತ್ತು ಸಹೋದರರೂ ಹದಿಮೂರು ಮಂದಿಯಾಗಿದ್ದರು. 12 ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು. 13 ಅವರು ಕಿರಿಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಿಲಿಂದ ಬಾಗಿಲಿಗೂ ಚೀಟುಗಳನ್ನು ಹಾಕಿದರು. 14 ಪೂರ್ವದಿಕ್ಕಿನ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗ ಬುದ್ಧಿಯುಳ್ಳ ಆಲೋಚನೆಯವನಾಗಿರುವ ಜೆಕರ್ಯನಿಗೋಸ್ಕರ ಹಾಕಿದ ಚೀಟು ಉತ್ತರ ಭಾಗಕ್ಕೆ ಇತ್ತು. 15 ಓಬೇದ್ ಏದೋಮನಿಗೆ ದಕ್ಷಿಣ ಭಾಗ ಬಂತು. ಅವನ ಪುತ್ರರಿಗೆ ಉಗ್ರಾಣ ಮನೆ ಬಂತು. 16 ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮದಲ್ಲಿರುವ ಶೆಲ್ಲೆಕೆತ್ ಎಂಬ ಬಾಗಿಲು ಬಂತು. ಅವು ಮೇಲಕ್ಕೆ ಹೋಗುವ ರಾಜಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. 17 ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ, 18 ಪಶ್ಚಿಮ ಭಾಗವಾದ ದೇವಾಲಯದ ಅಂಗಳಕ್ಕೆ ಹೋಗುವ ರಾಜಮಾರ್ಗದಲ್ಲಿ ನಾಲ್ಕು ಮಂದಿಯೂ, ದೇವಾಲಯದ ಅಂಗಳ ಬಳಿಯಲ್ಲಿ ಇಬ್ಬರೂ ಇದ್ದರು. 19 ಕೋರಹೀಯರ ಪುತ್ರರಲ್ಲಿಯೂ, ಮೆರಾರೀಯ ಪುತ್ರರಲ್ಲಿಯೂ ವಿಭಾಗಿಸಿದ ದ್ವಾರಪಾಲಕರ ವರ್ಗಗಳು ಇವೆ. ಖಜಾಂಚಿಗಳೂ, ಇತರ ಅಧಿಕಾರಿಗಳು 20 21 ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು. ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು. 22 ಯೆಹೀಯೇಲನ ಪುತ್ರರು ಜೇತಾಮನು, ಅವನ ಸಹೋದರನಾದ ಯೋಯೇಲನು; ಇವರು ಯೆಹೋವ ದೇವರ ಆಲಯದ ಬೊಕ್ಕಸಗಳ ಮೇಲೆ ಇದ್ದರು. 23 ಅಮ್ರಾಮಿಯರಲ್ಲಿಯೂ ಇಚ್ಹಾರರಲ್ಲಿಯೂ ಹೆಬ್ರೋನಿಯರಲ್ಲಿಯೂ ಉಜ್ಜೀಯೇಲರಲ್ಲಿಯೂ ಇವರ ಸಂತಾನದವರಲ್ಲಿ: 24 ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆಗಿರುವ ಶೆಬೂಯೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿದ್ದನು. 25 ಇವನ ಸಹೋದರರು, ಎಲೀಯೆಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮ, ಇವನ ಮಗನು ಜಿಕ್ರಿಯು, ಇವನ ಮಗನು ಶೆಲೋಮೋತನು. 26 ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು. 27 ಅವರು ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವುದಕ್ಕೆ ಯುದ್ಧಗಳಿಂದಲೂ, ಕೊಳ್ಳೆಯಿಂದಲೂ ಸಂಪಾದಿಸಿದವುಗಳನ್ನು ಪ್ರತಿಷ್ಠೆ ಮಾಡಿದರು. 28 ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು. 29 ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು. 30 ಹೆಬ್ರೋನಿಯರಲ್ಲಿ ಬಲವುಳ್ಳವರಾದ ಹಷಬ್ಯನೂ, ಅವನ ಸಹೋದರರೂ ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಅರಸನ ಸೇವೆಯಲ್ಲಿಯೂ ಸಾವಿರದ ಏಳು ನೂರು ಮಂದಿ ಪಶ್ಚಿಮವಾಗಿ ಯೊರ್ದನ್ ನದಿ ಈಚೆಯಲ್ಲಿ ಇಸ್ರಾಯೇಲರೊಳಗೆ ಅಧಿಪತಿಗಳಾಗಿದ್ದರು. 31 ಹೆಬ್ರೋನಿಯರಲ್ಲಿ ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀದನ ಆಳಿಕೆಯ ನಲ್ವತ್ತನೆಯ ವರ್ಷದಲ್ಲಿ ಆಯ್ಕೆಯಾಗಿದ್ದರು. ಆಗ ಗಿಲ್ಯಾದಿನ ಯಜ್ಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು. 32 ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು.
ದ್ವಾರಪಾಲಕರು 1 ದ್ವಾರಪಾಲಕರ ವರ್ಗಗಳು: ಕೋರಹಿಯರೊಳಗೆ: ಆಸಾಫನ ಪುತ್ರರಲ್ಲಿ ಒಬ್ಬನಾಗಿರುವ ಕೋರೆಯ ಮಗನಾದ ಮೆಷೆಲೆಮ್ಯನು. .::. 2 ಮೆಷೆಲೆಮ್ಯನ ಪುತ್ರರು: ಚೊಚ್ಚಲ ಮಗನು ಜೆಕರ್ಯನು; ಎರಡನೆಯವನು ಯೆದೀಯಯೇಲನು; ಮೂರನೆಯವನು ಜೆಬದ್ಯನು; ನಾಲ್ಕನೆಯವನು ಯತ್ನಿಯೇಲನು; .::. 3 ಐದನೆಯವನು ಏಲಾಮನು; ಆರನೆಯವನು ಯೆಹೋಹಾನಾನನು; ಏಳನೆಯವನು ಎಲಿಹೋಯೇನೈನು. .::. 4 ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್; .::. 5 ಆರನೆಯವನು ಅಮ್ಮಿಯೇಲ್; ಏಳನೆಯವನು ಇಸ್ಸಾಕಾರ್ ಮತ್ತು ಎಂಟನೆಯವನು ಪೆಯುಲ್ಲೆತೈ. ಓಬೇದ್ ಎದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು. .::. 6 ಇದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಪುತ್ರರು ಹುಟ್ಟಿದರು, ಅವರು ಪರಾಕ್ರಮಶಾಲಿಗಳಾಗಿದ್ದರು. .::. 7 ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು. .::. 8 ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು. .::. 9 ಮೆಷೆಲೆಮ್ಯನಿಗೆ ಬಲವುಳ್ಳ ಪುತ್ರರೂ, ಸಹೋದರರೂ ಹದಿನೆಂಟು ಮಂದಿಯಾಗಿದ್ದರು. .::. 10 ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು; .::. 11 ಎರಡನೆಯವನು ಹಿಲ್ಕೀಯನು; ಮೂರನೆಯವನು ಟೆಬಲ್ಯನು; ನಾಲ್ಕನೆಯವನು ಜಕರೀಯನು. ಹೋಸನ ಸಮಸ್ತ ಪುತ್ರರು ಮತ್ತು ಸಹೋದರರೂ ಹದಿಮೂರು ಮಂದಿಯಾಗಿದ್ದರು. .::. 12 ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು. .::. 13 ಅವರು ಕಿರಿಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಿಲಿಂದ ಬಾಗಿಲಿಗೂ ಚೀಟುಗಳನ್ನು ಹಾಕಿದರು. .::. 14 ಪೂರ್ವದಿಕ್ಕಿನ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗ ಬುದ್ಧಿಯುಳ್ಳ ಆಲೋಚನೆಯವನಾಗಿರುವ ಜೆಕರ್ಯನಿಗೋಸ್ಕರ ಹಾಕಿದ ಚೀಟು ಉತ್ತರ ಭಾಗಕ್ಕೆ ಇತ್ತು. .::. 15 ಓಬೇದ್ ಏದೋಮನಿಗೆ ದಕ್ಷಿಣ ಭಾಗ ಬಂತು. ಅವನ ಪುತ್ರರಿಗೆ ಉಗ್ರಾಣ ಮನೆ ಬಂತು. .::. 16 ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮದಲ್ಲಿರುವ ಶೆಲ್ಲೆಕೆತ್ ಎಂಬ ಬಾಗಿಲು ಬಂತು. ಅವು ಮೇಲಕ್ಕೆ ಹೋಗುವ ರಾಜಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು. .::. 17 ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ, .::. 18 ಪಶ್ಚಿಮ ಭಾಗವಾದ ದೇವಾಲಯದ ಅಂಗಳಕ್ಕೆ ಹೋಗುವ ರಾಜಮಾರ್ಗದಲ್ಲಿ ನಾಲ್ಕು ಮಂದಿಯೂ, ದೇವಾಲಯದ ಅಂಗಳ ಬಳಿಯಲ್ಲಿ ಇಬ್ಬರೂ ಇದ್ದರು. .::. 19 ಕೋರಹೀಯರ ಪುತ್ರರಲ್ಲಿಯೂ, ಮೆರಾರೀಯ ಪುತ್ರರಲ್ಲಿಯೂ ವಿಭಾಗಿಸಿದ ದ್ವಾರಪಾಲಕರ ವರ್ಗಗಳು ಇವೆ. .::. ಖಜಾಂಚಿಗಳೂ, ಇತರ ಅಧಿಕಾರಿಗಳು 20 .::. 21 ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು. ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು. .::. 22 ಯೆಹೀಯೇಲನ ಪುತ್ರರು ಜೇತಾಮನು, ಅವನ ಸಹೋದರನಾದ ಯೋಯೇಲನು; ಇವರು ಯೆಹೋವ ದೇವರ ಆಲಯದ ಬೊಕ್ಕಸಗಳ ಮೇಲೆ ಇದ್ದರು. .::. 23 ಅಮ್ರಾಮಿಯರಲ್ಲಿಯೂ ಇಚ್ಹಾರರಲ್ಲಿಯೂ ಹೆಬ್ರೋನಿಯರಲ್ಲಿಯೂ ಉಜ್ಜೀಯೇಲರಲ್ಲಿಯೂ ಇವರ ಸಂತಾನದವರಲ್ಲಿ: .::. 24 ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆಗಿರುವ ಶೆಬೂಯೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿದ್ದನು. .::. 25 ಇವನ ಸಹೋದರರು, ಎಲೀಯೆಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮ, ಇವನ ಮಗನು ಜಿಕ್ರಿಯು, ಇವನ ಮಗನು ಶೆಲೋಮೋತನು. .::. 26 ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು. .::. 27 ಅವರು ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವುದಕ್ಕೆ ಯುದ್ಧಗಳಿಂದಲೂ, ಕೊಳ್ಳೆಯಿಂದಲೂ ಸಂಪಾದಿಸಿದವುಗಳನ್ನು ಪ್ರತಿಷ್ಠೆ ಮಾಡಿದರು. .::. 28 ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು. .::. 29 ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು. .::. 30 ಹೆಬ್ರೋನಿಯರಲ್ಲಿ ಬಲವುಳ್ಳವರಾದ ಹಷಬ್ಯನೂ, ಅವನ ಸಹೋದರರೂ ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಅರಸನ ಸೇವೆಯಲ್ಲಿಯೂ ಸಾವಿರದ ಏಳು ನೂರು ಮಂದಿ ಪಶ್ಚಿಮವಾಗಿ ಯೊರ್ದನ್ ನದಿ ಈಚೆಯಲ್ಲಿ ಇಸ್ರಾಯೇಲರೊಳಗೆ ಅಧಿಪತಿಗಳಾಗಿದ್ದರು. .::. 31 ಹೆಬ್ರೋನಿಯರಲ್ಲಿ ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀದನ ಆಳಿಕೆಯ ನಲ್ವತ್ತನೆಯ ವರ್ಷದಲ್ಲಿ ಆಯ್ಕೆಯಾಗಿದ್ದರು. ಆಗ ಗಿಲ್ಯಾದಿನ ಯಜ್ಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು. .::. 32 ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು.
  • 1 ಪೂರ್ವಕಾಲವೃತ್ತಾ ಅಧ್ಯಾಯ 1  
  • 1 ಪೂರ್ವಕಾಲವೃತ್ತಾ ಅಧ್ಯಾಯ 2  
  • 1 ಪೂರ್ವಕಾಲವೃತ್ತಾ ಅಧ್ಯಾಯ 3  
  • 1 ಪೂರ್ವಕಾಲವೃತ್ತಾ ಅಧ್ಯಾಯ 4  
  • 1 ಪೂರ್ವಕಾಲವೃತ್ತಾ ಅಧ್ಯಾಯ 5  
  • 1 ಪೂರ್ವಕಾಲವೃತ್ತಾ ಅಧ್ಯಾಯ 6  
  • 1 ಪೂರ್ವಕಾಲವೃತ್ತಾ ಅಧ್ಯಾಯ 7  
  • 1 ಪೂರ್ವಕಾಲವೃತ್ತಾ ಅಧ್ಯಾಯ 8  
  • 1 ಪೂರ್ವಕಾಲವೃತ್ತಾ ಅಧ್ಯಾಯ 9  
  • 1 ಪೂರ್ವಕಾಲವೃತ್ತಾ ಅಧ್ಯಾಯ 10  
  • 1 ಪೂರ್ವಕಾಲವೃತ್ತಾ ಅಧ್ಯಾಯ 11  
  • 1 ಪೂರ್ವಕಾಲವೃತ್ತಾ ಅಧ್ಯಾಯ 12  
  • 1 ಪೂರ್ವಕಾಲವೃತ್ತಾ ಅಧ್ಯಾಯ 13  
  • 1 ಪೂರ್ವಕಾಲವೃತ್ತಾ ಅಧ್ಯಾಯ 14  
  • 1 ಪೂರ್ವಕಾಲವೃತ್ತಾ ಅಧ್ಯಾಯ 15  
  • 1 ಪೂರ್ವಕಾಲವೃತ್ತಾ ಅಧ್ಯಾಯ 16  
  • 1 ಪೂರ್ವಕಾಲವೃತ್ತಾ ಅಧ್ಯಾಯ 17  
  • 1 ಪೂರ್ವಕಾಲವೃತ್ತಾ ಅಧ್ಯಾಯ 18  
  • 1 ಪೂರ್ವಕಾಲವೃತ್ತಾ ಅಧ್ಯಾಯ 19  
  • 1 ಪೂರ್ವಕಾಲವೃತ್ತಾ ಅಧ್ಯಾಯ 20  
  • 1 ಪೂರ್ವಕಾಲವೃತ್ತಾ ಅಧ್ಯಾಯ 21  
  • 1 ಪೂರ್ವಕಾಲವೃತ್ತಾ ಅಧ್ಯಾಯ 22  
  • 1 ಪೂರ್ವಕಾಲವೃತ್ತಾ ಅಧ್ಯಾಯ 23  
  • 1 ಪೂರ್ವಕಾಲವೃತ್ತಾ ಅಧ್ಯಾಯ 24  
  • 1 ಪೂರ್ವಕಾಲವೃತ್ತಾ ಅಧ್ಯಾಯ 25  
  • 1 ಪೂರ್ವಕಾಲವೃತ್ತಾ ಅಧ್ಯಾಯ 26  
  • 1 ಪೂರ್ವಕಾಲವೃತ್ತಾ ಅಧ್ಯಾಯ 27  
  • 1 ಪೂರ್ವಕಾಲವೃತ್ತಾ ಅಧ್ಯಾಯ 28  
  • 1 ಪೂರ್ವಕಾಲವೃತ್ತಾ ಅಧ್ಯಾಯ 29  
×

Alert

×

Kannada Letters Keypad References