ಪವಿತ್ರ ಬೈಬಲ್

ಓಪನ್ ಸಮಕಾಲೀನ ಆವೃತ್ತಿ (OCV)
1 ಯೋಹಾನನು

1 ಯೋಹಾನನು ಅಧ್ಯಾಯ 1

ಜೀವವಾಕ್ಯ 1 ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ. 2 ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ. 3 ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು. 4 ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ. ಬೆಳಕಿನಲ್ಲಿ ನಡೆಯುವುದು 5 ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ. 6 ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ. 7 ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. 8 ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. 9 ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು. 10 ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.
1. {#1ಜೀವವಾಕ್ಯ } ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ. 2. ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ. 3. ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು. 4. ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ. 5. {#1ಬೆಳಕಿನಲ್ಲಿ ನಡೆಯುವುದು } ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ. 6. ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ. 7. ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. 8. ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. 9. ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು. 10. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.
  • 1 ಯೋಹಾನನು ಅಧ್ಯಾಯ 1  
  • 1 ಯೋಹಾನನು ಅಧ್ಯಾಯ 2  
  • 1 ಯೋಹಾನನು ಅಧ್ಯಾಯ 3  
  • 1 ಯೋಹಾನನು ಅಧ್ಯಾಯ 4  
  • 1 ಯೋಹಾನನು ಅಧ್ಯಾಯ 5  
×

Alert

×

Kannada Letters Keypad References